Karnataka Rains:ಇಂದಿನಿಂದ ಬೆಂಗಳೂರು, ಕೊಡಗು, ಹಾಸನ ಸೇರಿದಂತೆ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆ

ಕರ್ನಾಟಕಕ್ಕೆ ಮುಂಗಾರು ಆಗಮನವಾಗುತ್ತಿದ್ದು, ಹಲವೆಡೆ ಮಳೆಯಾಗುತ್ತಿದೆ. ಇಂದಿನಿಂದ ರಾಜ್ಯದಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು ಬೆಂಗಳೂರು, ಹಾಸನ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains:ಇಂದಿನಿಂದ ಬೆಂಗಳೂರು, ಕೊಡಗು, ಹಾಸನ ಸೇರಿದಂತೆ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆ
ಮಳೆImage Credit source: Hindustan Times
Follow us
|

Updated on: Jun 02, 2024 | 8:44 AM

ಇಂದಿನಿಂದ ಬೆಂಗಳೂರು, ಹಾಸನ, ಕೊಡಗು, ರಾಮನಗರ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಯೆಲ್ಲೋ ಹಾಗೂ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

ಜೂನ್​ 3ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದೆ. ಬೆಂಗಳೂರು, ಹಾಸನ, ಶಿರಹಟ್ಟಿಯಲ್ಲಿ ಹೆಚ್ಚು ಮಳೆಯಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು ಸಂಜೆ ವೇಳೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.

ಎಚ್​ಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಕಲಬುರಗಿಯಲ್ಲಿ 42.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಮಳೆ

ಹೊನ್ನಾವರದಲ್ಲಿ 34.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 29.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 39.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗದಗದಲ್ಲಿ 37.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 42.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 29.3ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.4ಡಿಗ್ರಿ ಸಲ್ಸಿಯಸ್​ ಗರಿಷ್ಠ ಉಷ್ಣಾಂಶ,23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ