AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru traffic advisory: ಬೆಂಗಳೂರಿನ ಈ ರಸ್ತೆಯಲ್ಲಿ 21 ದಿನ ಸಂಚಾರ ನಿರ್ಬಂಧ; ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ

ಬೆಂಗಳೂರು ಸಂಚಾರ ಸಲಹೆ: ಎಚ್​ಎಎಲ್ ಏರ್ಪೋರ್ಟ್​ ಸಂಚಾರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪಣತ್ತೂರು ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿ ಹಿನ್ನೆಲೆ ಅಕ್ಟೋಬರ್ 10 ರಿಂದ 21 ದಿನಗಳ ಕಾಲ ಸಂಚಾರ ನಿರ್ಬಂಧಿಸಲಾಗಿದ್ದು, ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಪರ್ಯಾಯ ಮಾರ್ಗಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

Bengaluru traffic advisory: ಬೆಂಗಳೂರಿನ ಈ ರಸ್ತೆಯಲ್ಲಿ 21 ದಿನ ಸಂಚಾರ ನಿರ್ಬಂಧ; ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ
ಬೆಂಗಳೂರಿನಲ್ಲಿ 21 ದಿನಗಳ ಕಾಲ ಸಂಚಾರ ನಿರ್ಬಂಧವಿರಲಿದೆ
ಭಾವನಾ ಹೆಗಡೆ
|

Updated on:Oct 10, 2025 | 8:44 AM

Share

ಬೆಂಗಳೂರು, ಅಕ್ಟೋಬರ್ 10: ಎಚ್​ಎಎಲ್ ಏರ್ಪೋರ್ಟ್​ ಸಂಚಾರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪಣತ್ತೂರು ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ 21 ದಿನಗಳ ಕಾಲ ಸಂಚಾರ ನಿರ್ಬಂಧಿಸಲಾಗಿದ್ದು, ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಪರ್ಯಾಯ ಮಾರ್ಗಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ವಾಹನ ಸಂಚಾರ ನಿರ್ಬಂಧ

ಪಣತ್ತೂರು ಮುಖ್ಯ ರಸ್ತೆಯಲ್ಲಿ ಬಿಬಿಎಂಪಿ ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಅಕ್ಟೋಬರ್ 10 ರಿಂದ 21 ದಿನಗಳ ಕಾಲ ಸಂಚಾರ ವಾಹನ ಸಂಚಾರಕ್ಕೆ ಅಡಚಣೆಯಾಗಬಹುದು ಎಂಬ ಕಾರಣಕ್ಕೆ ಬೆಂಗಳೂರು ಸಂಚಾರ ಪೊಲೀಸರು ಸವಾರರಿಗೆ ಮುನ್ಸೂಚನೆ ನೀಡಿದ್ದಾರೆ. ಪಣತ್ತೂರು ಮುಖ್ಯ ರಸ್ತೆಯ ಪಣತ್ತೂರು ರೈಲ್ವೇ ಬ್ರಿಡ್ಜ್​ನಿಂದ ಬೋಗನಹಳ್ಳಿ ಜಂಕ್ಷನ್​ ವರೆಗೆ ಎರಡು ಬದಿಯ ಸಂಚಾರ ನಿರ್ಬಂಧಿಸಲಾಗಿದೆ.

ನಿರ್ಬಂಧಿಸಿದ ಸಂಚಾರಕ್ಕೆ ಪರ್ಯಾಯ ಮಾರ್ಗಗಳು

ವೈಟ್​ಫೀಲ್ಡ್ ಮತ್ತು ವರ್ತೂರು ಕಡೆಯಿಂದ ಪಣತ್ತೂರು ಮುಖ್ಯ ರಸ್ತೆಯ ಮುಖಾಂತರ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಚಲಿಸುವ ವಾಹನಗಳು ಬಳಗೆರೆ ಟಿ ಜಂಕ್ಷನ್ ಹತ್ತಿರ ಬಲತಿರುವು ಪಡೆದು, ವಿಬ್ ಗಯಾರ್ ರಸ್ತೆಯ ಮುಖಾಂತರ ವರ್ತೂರು ಮುಖ್ಯ ರಸ್ತೆ ಕಡೆಗೆ ಸಂಚರಿಸಿ ಮಾರತ್ತಹಳ್ಳಿ ಬ್ರಿಡ್ಜ್ ಹತ್ತಿರ ಎಡ ತಿರುವು ಪಡೆದು ಹೊರ ವರ್ತುಲ ರಸ್ತೆ ತಲುಪಿ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಹೋಗಬಹುದಾಗಿದೆ.

ದೇವರಬೀಸನಹಳ್ಳಿ ಮತ್ತು ಬೆಳ್ಳಂದೂರು ಕಡೆಯಿಂದ ಪಣತ್ತೂರು ಮುಖ್ಯ ರಸ್ತೆಯ ಮುಖಾಂತರ ವರ್ತೂರು ಮತ್ತು ವೈಟ್​ಫೀಲ್ಡ್ ಕಡೆಗೆ ಸಂಚರಿಸುವ ವಾಹನಗಳು ಹೊರ ವರ್ತುಲ ರಸ್ತೆಯ ಮುಖಾಂತರ ಮಾರತ್ತಹಳ್ಳಿ ಬ್ರಿಡ್ಜ್ ಕಡೆಗೆ ಸಂಚರಿಸಿ ವರ್ತೂರು ಮುಖ್ಯರಸ್ತೆ ತಲುಪಿ ವರ್ತೂರು ಮತ್ತು ವೈಟ್​ಫೀಲ್ಡ್ ಕಡೆಗೆ ಸಂಚರಿಸಬಹುದಾಗಿದೆ.

ಬೆಂಗಳೂರು ಟ್ರಾಫಿಕ್ ಪೊಲೀಸ್ ಎಕ್ಸ್ ಸಂದೇಶ

ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಮಾರ್ಪಾಡು ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಟ್ರಾಫಿಕ್ ಪೊಲೀಸರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:35 am, Fri, 10 October 25

Follow Us
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!