Viral Video: ರಸ್ತೆ ಗುಂಡಿ ಮುಚ್ಚಿದ ಬೆಂಗಳೂರಿನ ಟ್ರಾಫಿಕ್ ಪೊಲೀಸ್; ವೈರಲ್ ವಿಡಿಯೋಗೆ ಗೃಹ ಸಚಿವರಿಂದಲೂ ಮೆಚ್ಚುಗೆ

Bangalore Traffic Police | ಸಾಮಾನ್ಯ ಜನರು ಮಾತ್ರವಲ್ಲದೆ ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ಈ ವಿಡಿಯೋವನ್ನು ಶೇರ್ ಮಾಡಿಕೊಂಡು, ಟ್ರಾಫಿಕ್ ಪೊಲೀಸ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Viral Video: ರಸ್ತೆ ಗುಂಡಿ ಮುಚ್ಚಿದ ಬೆಂಗಳೂರಿನ ಟ್ರಾಫಿಕ್ ಪೊಲೀಸ್; ವೈರಲ್ ವಿಡಿಯೋಗೆ ಗೃಹ ಸಚಿವರಿಂದಲೂ ಮೆಚ್ಚುಗೆ
ರಸ್ತೆ ಗುಂಡಿಗಳನ್ನು ಮುಚ್ಚಿದ ಟ್ರಾಫಿಕ್ ಪೊಲೀಸ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 13, 2021 | 8:41 PM

ಬೆಂಗಳೂರು: ಬೆಂಗಳೂರಿನ ಟ್ರಾಫಿಕ್ ಪೊಲೀಸ್ ಖುದ್ದಾಗಿ ನಿಂತು ರಸ್ತೆಯ ಗುಂಡಿಗಳನ್ನು ತುಂಬುತ್ತಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಆ ಟ್ರಾಫಿಕ್ ಪೊಲೀಸ್ ಕಾರ್ಯಕ್ಕೆ ಮೆಚ್ಚುಗೆಯೂ ವ್ಯಕ್ತವಾಗಿದೆ. ಸಾಮಾನ್ಯ ಜನರು ಮಾತ್ರವಲ್ಲದೆ ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ಈ ವಿಡಿಯೋವನ್ನು ಶೇರ್ ಮಾಡಿಕೊಂಡು, ಟ್ರಾಫಿಕ್ ಪೊಲೀಸ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ‘ಟ್ರಾಫಿಕ್ ಸುಗಮವಾಗಿರುವಂತೆ ನೋಡಿಕೊಳ್ಳುವುದು ಟ್ರಾಫಿಕ್ ಪೊಲೀಸರ ಕೆಲಸ. ಆದರೆ, ನಮ್ಮ ಟ್ರಾಫಿಕ್ ಪೊಲೀಸ್ ರಸ್ತೆಗಳ ಗುಂಡಿಗಳನ್ನು ಕೂಡ ಮುಚ್ಚುವ ಮೂಲಕ ವಾಹನ ಸವಾರರು ಸಲೀಸಾಗಿ ಸಂಚರಿಸಲು ಸಹಾಯ ಮಾಡಿದ್ದಾರೆ. ಸಾರ್ವಜನಿಕರಿಗಾಗಿ ಹಗಲಿರುಳು ಕೆಲಸ ಮಾಡುತ್ತಿರುವ ಟ್ರಾಫಿಕ್ ಪೊಲೀಸರಿಗೆ ಅಭಿನಂದನೆಗಳು’ ಎಂದು ಬರೆದುಕೊಂಡಿದ್ದಾರೆ.

ಸೆ. 9ರಂದು ಈ ಘಟನೆ ನಡೆದಿದ್ದು, ಸಂತೋಷ್ ಎಂ. ಎಂಬ ಬೆಂಗಳೂರಿನ ಬ್ಯಾಟರಾಯನಪುರದ ಟ್ರಾಫಿಕ್ ಪೊಲೀಸ್ ಹಾಗೂ ಅವರ ತಂಡ ಈ ರೀತಿ ಟ್ರಾಫಿಕ್​ನಲ್ಲಿ ಜನರಿಗೆ ತೊಂದರೆಯಾಗದಂತೆ ಮಾಡಲು, ರಸ್ತೆಗಳಲ್ಲಿ ಇರುವ ಅಡೆತಡೆಗಳನ್ನು ತಡೆಯಲು ಹಲವು ಕೆಲಸಗಳನ್ನು ಮಾಡುತ್ತಿದ್ದಾರೆ. ಟ್ರಾಫಿಕ್ ಪೊಲೀಸ್ ರಸ್ತೆ ಗುಂಡಿಗಳನ್ನು ತುಂಬುತ್ತಿರುವುದನ್ನು ಯಾರೋ ವಿಡಿಯೋ ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ಇದಕ್ಕೂ ಮೊದಲು ಕೂಡ ಅವರು ಈ ರೀತಿಯ ಹಲವು ಉತ್ತಮ ಕೆಲಸಗಳನ್ನು ಮಾಡಿದ್ದಾರೆ ಎಂದು ಟ್ರಾಫಿಕ್ ವಿಭಾಗದ ಡಿಸಿಪಿ ಕುಲದೀಪ್ ಕೆ. ಜೈನ್ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಹಿರಿಯ ನಾಗರಿಕರೊಬ್ಬರ ಸ್ಕೂಟರ್ ರಸ್ತೆ ಗುಂಡಿಗೆ ಸಿಲುಕಿ ಕೆಳಗೆ ಬಿದ್ದಿತ್ತು. ಈ ವೇಳೆ ಆ ವ್ಯಕ್ತಿಯ ತಲೆಗೆ ಪೆಟ್ಟಾಗಿ ಸಾವನ್ನಪ್ಪಿದ್ದರು. ಇಂತಹ ದುರಂತಗಳನ್ನು ತಪ್ಪಿಸಲು ಎಲ್ಲರೂ ಎಚ್ಚರ ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಕೂಡ ರಸ್ತೆ ಗುಂಡಿಗಳನ್ನು ತುಂಬುವ ಕೆಲಸ ಮಾಡುತ್ತಿದೆ.

ಇದನ್ನೂ ಓದಿ: Bengaluru: ಸದಾಶಿವನಗರದ ಸ್ಯಾಂಕಿ ಟ್ಯಾಂಕ್​ನಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ವ್ಯವಸ್ಥೆ; ನಿಯಮಗಳು ಇಲ್ಲಿದೆ

Viral Video: ರಸ್ತೆಯಲ್ಲಿ ಹೊತ್ತಿ ಉರಿಯುತ್ತಿದ್ದ ಕಾರಿನೊಳಗಿದ್ದ ವೃದ್ಧರನ್ನು ಕಾಪಾಡಿದ ಯುವಕರು; ಶಾಕಿಂಗ್ ವಿಡಿಯೋ ಇಲ್ಲಿದೆ

(Bengaluru traffic Police filled pothole in Bangalore Road Home Minister Araga Jnanendra Shared Viral Video)

Published On - 8:39 pm, Mon, 13 September 21

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ