Bengaluru: ಇಂದು ಬೆಂಗಳೂರು ನಗರ ಜಿಲ್ಲೆಯಲ್ಲಿ ದೇಶದಲ್ಲೇ ಅತಿ ಹೆಚ್ಚು ಕೊವಿಡ್ ಲಸಿಕೆ ವಿತರಣೆ; ಒಟ್ಟಾರೆಯೂ ಬೆಂಗಳೂರೇ ಫಸ್ಟ್

ಬೆಂಗಳೂರು: ಇಂದು ವಿಶ್ವ ಯೋಗ ದಿನದಂದು ಹಮ್ಮಿಕೊಳ್ಳಲಾಗಿದ್ದ ಕೊವಿಡ್ ಲಸಿಕೆ ಅಭಿಯಾನದಲ್ಲಿ ಇಡೀ ದೇಶದಲ್ಲಿ ಬೆಂಗಳೂರು ನಗರ ಜಿಲ್ಲೆ ಮೊದಲ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಒಂದೇ ದಿನ 2,09,256 ಡೋಸ್ ಕೊವಿಡ್ ಲಸಿಕೆ ವಿತರಿಸಲಾಗಿದೆ. ಈ ಮೂಲದ ರಾಜ್ಯ ರಾಜಧಾನಿ ಬೆಂಗಳೂರು ದೇಶದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಇಂದು ಕೊವಿಡ್ ಲಸಿಕೆ ಪಡೆದ ಜಿಲ್ಲೆಗಳಲ್ಲಿ ಮಧ್ಯ ಪ್ರದೇಶದ ಇಂದೋರ್ 2ನೇ ಸ್ಥಾನ ಪಡೆದಿದೆ. 2,01,339 ಡೋಸ್ ಲಸಿಕೆ ವಿತರಿಸಿ ಇಂದೋರ್ 2ನೇ ಸ್ಥಾನ […]

Bengaluru: ಇಂದು ಬೆಂಗಳೂರು ನಗರ ಜಿಲ್ಲೆಯಲ್ಲಿ ದೇಶದಲ್ಲೇ ಅತಿ ಹೆಚ್ಚು ಕೊವಿಡ್ ಲಸಿಕೆ ವಿತರಣೆ; ಒಟ್ಟಾರೆಯೂ ಬೆಂಗಳೂರೇ ಫಸ್ಟ್
ಕೊರೊನಾ ಲಸಿಕೆ (ಸಂಗ್ರಹ ಚಿತ್ರ)
Follow us
TV9 Web
| Updated By: Skanda

Updated on:Jun 22, 2021 | 7:52 AM

ಬೆಂಗಳೂರು: ಇಂದು ವಿಶ್ವ ಯೋಗ ದಿನದಂದು ಹಮ್ಮಿಕೊಳ್ಳಲಾಗಿದ್ದ ಕೊವಿಡ್ ಲಸಿಕೆ ಅಭಿಯಾನದಲ್ಲಿ ಇಡೀ ದೇಶದಲ್ಲಿ ಬೆಂಗಳೂರು ನಗರ ಜಿಲ್ಲೆ ಮೊದಲ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಒಂದೇ ದಿನ 2,09,256 ಡೋಸ್ ಕೊವಿಡ್ ಲಸಿಕೆ ವಿತರಿಸಲಾಗಿದೆ. ಈ ಮೂಲದ ರಾಜ್ಯ ರಾಜಧಾನಿ ಬೆಂಗಳೂರು ದೇಶದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಇಂದು ಕೊವಿಡ್ ಲಸಿಕೆ ಪಡೆದ ಜಿಲ್ಲೆಗಳಲ್ಲಿ ಮಧ್ಯ ಪ್ರದೇಶದ ಇಂದೋರ್ 2ನೇ ಸ್ಥಾನ ಪಡೆದಿದೆ. 2,01,339 ಡೋಸ್ ಲಸಿಕೆ ವಿತರಿಸಿ ಇಂದೋರ್ 2ನೇ ಸ್ಥಾನ ಗಿಟ್ಟಿಸಿಕೊಂಡಿದೆ.

ಒಟ್ಟಾರೆಯಾಗಿಯೂ ಕೊವಿಡ್ ಲಸಿಕೆ ವಿತರಣೆಯಲ್ಲಿ ದೇಶದಲ್ಲೇ ಬೆಂಗಳೂರು ನಗರ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಇಂದು ಸಂಜೆಯವರೆಗೆ ಬೆಂಗಳೂರು ನಗರ ಜಿಲ್ಲೆಯಲ್ಲಿ 54,88,684 ಡೋಸ್ ಲಸಿಕೆ ವಿತರಿಸಲಾಗಿದೆ. ದೇಶದ ಬೇರೆ ಯಾವ ಜಿಲ್ಲೆಯಲ್ಲೂ ಇಷ್ಟು ಸಂಖ್ಯೆಯ ಲಸಿಕೆ ವಿತರಣೆ ಮಾಡಲಾಗಿಲ್ಲ. ಅತ್ಯಂತ ತಳಮಟ್ಟದ ಯೋಜನೆಯಿಂದ ಗುರಿಯನ್ನೂ ಮೀರಿ ಲಸಿಕೆ ವಿತರಣೆ ನಡೆಸಲು ಸಾಧ್ಯವಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ದೇಶದಲ್ಲಿ ಇಂದು ಸಂಜೆ 6 ಗಂಟೆ ವೇಳೆಗೆ ದೇಶದಲ್ಲಿ 80 .96ಲಕ್ಷ ಡೋಸ್ ಕೊರೊನಾ ಲಸಿಕೆ ವಿತರಿಸಲಾಗಿದೆ.. ಕರ್ನಾಟಕದಲ್ಲಿ ಇಂದು 7 ಲಕ್ಷ ಡೋಸ್ ಲಸಿಕೆ ನೀಡುವ ಗುರಿ ಇತ್ತು. ಆದರೆ ಈ ಗುರಿಯನ್ನು ಮೀರಿ ರಾಜ್ಯದಲ್ಲಿ10.36  ಲಕ್ಷ ಡೋಸ್  ಲಸಿಕೆ ವಿತರಿಸಲಾಗಿದೆ. ಮಧ್ಯಪ್ರದೇಶದಲ್ಲಿ ಇಂದು 12 ಲಕ್ಷ ಡೋಸ್​ ಲಸಿಕೆ ವಿತರಿಸಲಾಗಿದ್ದು, ಉತ್ತರ ಪ್ರದೇಶದಲ್ಲಿಂದು 6.31 ಲಕ್ಷ ಡೋಸ್​ ಲಸಿಕೆ ವಿತರಿಸಲಾಗಿದೆ.

ಕರ್ನಾಟಕದಲ್ಲಿ ಇಂದು ವಿತರಿಸಿರುವ ಕೊವಿಡ್ ಲಸಿಕೆಯ ಅಂಕಿ ಅಂಶಗಳ ಪ್ರಕಾರ ಕರ್ನಾಟಕ ದೇಶದಲ್ಲಿ 2ನೇ ಸ್ಥಾನ ಪಡೆದಿದೆ. ಮಧ್ಯ ಪ್ರದೇಶ ಮೊದಲ ಸ್ಥಾನ ಪಡೆದಿದೆ. ಆದರೆ ಜಿಲ್ಲೆಗಳ ಪಟ್ಟಿಯಲ್ಲಿ ಬೆಂಗಳೂರು ನಗರವೇ ಮೊದಲ ಸ್ಥಾನದಲ್ಲಿದೆ.

ದೇಶದಲ್ಲಿ ಇಂದು ಒಂದೇ ದಿನ 50 ಲಕ್ಷ ಡೋಸ್ ಲಸಿಕೆ ನೀಡಿಕೆಯ ಗುರಿ ಇತ್ತು. ಆದರೆ ಸಂಜೆ 5 ರವರೆಗೆ 69.25 ಲಕ್ಷ ಡೋಸ್ ಲಸಿಕೆ ನೀಡಿಕೆ ಹೊಸ ದಾಖಲೆ ಬರೆಯಲಾಗಿದೆ. ಏಪ್ರಿಲ್ ಪ್ರಾರಂಭದಲ್ಲಿ ಒಂದೇ ದಿನ 43 ಲಕ್ಷ ಡೋಸ್ ಲಸಿಕೆ ನೀಡಿದ್ದು ಇದುವರೆಗಿನ ಗರಿಷ್ಠ ದಾಖಲೆ ಆಗಿತ್ತು. ಆದರೆ ಇಂದು ಒಂದೇ ದಿನ 70 ಲಕ್ಷ ಡೋಸ್ ವರೆಗೂ ಲಸಿಕೆ ವಿರಿಸಲಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಆಗಸ್ಟ್ ತಿಂಗಳಿನಿಂದ ನಿತ್ಯ ಒಂದು ಕೋಟಿ ಡೋಸ್ ಲಸಿಕೆ ನೀಡಿಕೆ ಗುರಿ ಹಾಕಿಕೊಂಡಿದೆ.

ಇದನ್ನೂ ಓದಿ: School Reopening: ಕೊವಿಡ್ 3ನೇ ಅಲೆ ಕುರಿತು ಡಾ.ದೇವಿಪ್ರಸಾದ್ ಶೆಟ್ಟಿ ನಾಳೆ ನೀಡುವ ವರದಿ ಪರಿಶೀಲಿಸಿ ಶಾಲೆ ಆರಂಭದ ನಿರ್ಧಾರ: ಸಚಿವ ಸುರೇಶ್ ಕುಮಾರ್

Coronavirus cases in India: ದೇಶದಲ್ಲಿ 53,256 ಹೊಸ ಕೊವಿಡ್ ಪ್ರಕರಣ ಪತ್ತೆ, 1422 ಮಂದಿ ಸಾವು

(Bengaluru Urban district first in Covid Vaccine distribution today on vaccination drive )

Published On - 9:09 pm, Mon, 21 June 21

ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ