Karnataka Weather Update: ಮಾರ್ಚ್ 28ರ ಬೆಂಗಳೂರು ತಾಪಮಾನ 7 ವರ್ಷಗಳಲ್ಲೇ ಗರಿಷ್ಠ
ರಾಜ್ಯದ ರಾಯಚೂರು ಜಿಲ್ಲೆಯ 10 ಸ್ಥಳಗಳು, ಕಲಬುರಗಿ ಜಿಲ್ಲೆಯಲ್ಲಿ 9 ಸ್ಥಳಗಳು, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತಲಾ 4 ಸ್ಥಳಗಳು, ಬಳ್ಳಾರಿ ಜಿಲ್ಲೆಯಲ್ಲಿ 3 ಸ್ಥಳಗಳು, ವಿಜಯಪುರ ಜಿಲ್ಲೆಯಲ್ಲಿ 2 ಸ್ಥಳಗಳು, ಬೀದರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ತಲಾ 1 ಸ್ಥಳಗಳಲ್ಲಿ ಮಾರ್ಚ್ 28 ರಂದು ಗರಿಷ್ಠ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಬೆಂಗಳೂರು, ಮಾರ್ಚ್ 29: ಬೇಸಿಗೆ (Summer) ಕಾಲ ಆರಂಭವಾಗಿದ್ದು, ರಾಜ್ಯದಲ್ಲಿ ತಾಪಮಾನ (Karnataka Temperature) ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕಳೆದ ಏಳು ವರ್ಷಕ್ಕೆ ಹೋಲಿಕೆ ಮಾಡಿದರೆ ಬೆಂಗಳೂರು (Bengaluru) ನಗರದಲ್ಲಿ ಈ ವರ್ಷ (2024 ಮಾರ್ಚ್ 28ರ ವರೆಗೆ) ಅತ್ಯಅಧಿಕ ತಾಪಮಾನ ದಾಖಲಾಗಿದೆ. ಗುರುವಾರ ಬೆಂಗಳೂರಿನಲ್ಲಿ 37.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಮುಂದಿನ 2 ದಿನಗಳಲ್ಲಿ ರಾಜ್ಯದ ಉತ್ತರ ಒಳನಾಡಿನ (North Karnataka) ಕಲಬುರಗಿ, ಬಾಗಲಕೋಟೆ, ಬೀದರ್ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸುವ ಸಾಧ್ಯತೆ ಇದ್ದು. ಮುಂದಿನ ಐದು ದಿನಗಳಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ಕಾಡ್ಗಿಚ್ಚು ಸಾಧ್ಯತೆ
ತಾಪಮಾನ ಹೆಚ್ಚಾದಂತೆ ಕಾಡ್ಗಿಚ್ಚು ಉಂಟಾಗುವ ಸಾಧ್ಯತೆ ಇರುತ್ತದೆ. ಮುಂದಿನ 7 ದಿನಗಳಲ್ಲಿ ಚನ್ನಗರಿ, ವಾಡಿ, ಶಹಾಪುರ ಮತ್ತು ಗುರುಮಿಟ್ಕಲ್ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ತೀವ್ರ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆಗಳಿದ್ದು, ಜನರು ಎಚ್ಚರದಿಂದ ಇರಬೇಕು ಎಂದು ಅರಣ್ಯ ಇಲಾಖೆ ತಿಳಿಸಿದೆ.
ರಾಯಚೂರಿನಲ್ಲಿ ಅತ್ಯಧಿಕ ತಾಪಮಾನ
ರಾಯಚೂರು ಜಿಲ್ಲೆಯ ಹಡಗನಹಾಳ್ ಹೋಬಳಿಯಲ್ಲಿ ಅತ್ಯಧಿಕ ಗುರುವಾರ (ಮಾ.28) ರಂದು 42.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕಲಬುರಗಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ವಿಜಯಪುರ, ಬೀದರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ 41 ರಿಂದ 42.6 ಡಿಗ್ರಿ ಸೆಲ್ಸಿಯಸ್ ನಡುವೆ ಗರಿಷ್ಠ ತಾಪಮಾನ ದಾಖಲಾಗಿದೆ.
ಇದನ್ನೂ ಓದಿ: ಹೆಚ್ಚಲಿದೆ ತಾಪಮಾನ, ಮಾರ್ಚ್- ಮೇ ತಿಂಗಳಿನಿಂದಲೇ ಜಾಸ್ತಿಯಾಗಲಿದೆ ಬಿಸಿಗಾಳಿ
ರಾಯಚೂರು ಜಿಲ್ಲೆಯ 10 ಸ್ಥಳಗಳು, ಕಲಬುರಗಿ ಜಿಲ್ಲೆಯಲ್ಲಿ 9 ಸ್ಥಳಗಳು, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತಲಾ 4 ಸ್ಥಳಗಳು, ಬಳ್ಳಾರಿ ಜಿಲ್ಲೆಯಲ್ಲಿ 3 ಸ್ಥಳಗಳು, ವಿಜಯಪುರ ಜಿಲ್ಲೆಯಲ್ಲಿ 2 ಸ್ಥಳಗಳು, ಬೀದರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ತಲಾ 1 ಸ್ಥಳಗಳಲ್ಲಿ, ಗರಿಷ್ಠ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವಾಡಿಕೆಗಿಂತ 1.6 ರಿಂದ 3 ಡಿಗ್ರಿ ಸೆಲ್ಸಿಯಸ್ ನಷ್ಟು ಅಧಿಕ ತಾಪಮಾನವು ದಾಖಲಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ. ಮುಂದಿನ 5 ದಿನಗಳ ತಾಪಮಾನದ ಮುನ್ಸೂಚನೆ
2024 ರ ಮಾರ್ಚ್ 28 ರಿಂದ 29 ರವರೆಗೆ ರಾಜ್ಯದ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಉಷ್ಣ ಅಲೆ ಬೀಸುವ ಸಾಧ್ಯತೆಯಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ