AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಅವ್ಯವಹಾರ: ಡೆತ್​ನೋಟ್​ ಬರೆದಿಟ್ಟು ಅಧೀಕ್ಷಕ ಆತ್ಮಹತ್ಯೆ

ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್​ನ ನಿವಾಸಿಯಾಗಿರುವ ಚಂದ್ರಶೇಖರ್ (52) ಎಂಬುವರು ಬೆಂಗಳೂರಿನ ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಡೆಂಟ್ ಆಗಿದ್ದರು. ಇವರು ಇಂದು (ಮೇ 27) ಬೆಳಗ್ಗೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಅವ್ಯವಹಾರ: ಡೆತ್​ನೋಟ್​ ಬರೆದಿಟ್ಟು ಅಧೀಕ್ಷಕ ಆತ್ಮಹತ್ಯೆ
ಮೃತ ಸೂಪರಿಂಡೆಂಟ್ ಚಂದ್ರಶೇಖರ್
Basavaraj Yaraganavi
| Updated By: ವಿವೇಕ ಬಿರಾದಾರ|

Updated on:May 28, 2024 | 2:08 PM

Share

ಶಿವಮೊಗ್ಗ, ಮೇ 27: ಬೆಂಗಳೂರಿನಲ್ಲಿರುವ (Bengaluru) ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಡೆಂಟ್ ಚಂದ್ರಶೇಖರ್ (52) ಶಿವಮೊಗ್ಗದ (Shivamogga) ವಿನೋಬ ನಗರದ ಕೆಂಚಪ್ಪ ಲೇಔಟ್​ನಲ್ಲಿರುವ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. “ನಿಗಮದಲ್ಲಿ 187 ಕೋಟಿ ಹಗರಣ ನಡೆದಿತ್ತು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದೇನೆ. ಇನ್ನು ನನ್ನ ಸಾವಿಗೆ ಪದ್ಮಾನಾಭ, ಪರಶುರಾಮ್, ಶುಚಿಸ್ಮತಾ ಅಧಿಕಾರಿಗಳೇ ಕಾರಣ” ಎಂದು ಡೆತ್ ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಗಾದರೆ ವಿನೋದ್​ ಅವರ ಡೆತ್​​ ನೋಟ್​ನಲ್ಲಿ ಏನಿದೆ? ಏನೆಲ್ಲ ಅವ್ಯವಹಾರ ನಡೆದಿದೆ? ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಿಗೆಟ್ಟಿರುವ ಈಗಾಗಲೇ ಕಾಂಗ್ರೆಸ್ ಸರಕಾರವು ಇಕ್ಕಟ್ಟಿಗೆ ಸಿಲುಕಿದೆ. ಈ ನಡುವೆ ಬೆಂಗಳೂರಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅಧಿಕಾರಿಯೊಬ್ಬರು ಶಿವಮೊಗ್ಗದಲ್ಲಿ ನೇಣಿಗೆ ಶರಣಾಗಿದ್ದಾರೆ. ನಿಗಮದಲ್ಲಿ ಕೋಟ್ಯಾಂತರ ಅವ್ಯವಹಾರ ನಡೆದಿದೆ. ಅಧಿಕಾರಿ ಮೇಲೆ ಒತ್ತಡ ಹಾಕಿ ಹಣ ದುರುಪಯೋಗ ಮಾಡಿದ್ದಾರೆ.

ಬೆಂಗಳೂರಿನ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಾಲ್ಮೀಕಿ ನಿಗಮ ಮಂಡಳಿಯಲ್ಲಿ ಅಧೀಕ್ಷರಾಗಿ ಚಂದ್ರಶೇಖರ್ ಕಳೆದ 9 ವರ್ಷದಿಂದ ಕೆಲಸ ಮಾಡುತ್ತಿದ್ದರು. ಕಳೆದ ಒಂದೂವರೆ ವರ್ಷದ ಹಿಂದೆ ಇವರ ಕೆಲಸವು ಪರ್ಮೇಂಟ್ ಆಗಿದೆ. ಈ ನಡುವೆ ವಾಲ್ಮೀಕಿ ಎಸ್​ಟಿ ವೆಲ್ ಫೇರ್ ಇಲಾಖೆಯಲ್ಲಿ ಇದೇ ವರ್ಷ ಮಾರ್ಚ್ ತಿಂಗಳಲ್ಲಿ 187 ಕೋಟಿ ಹಣ ಬಂದಿದೆ. ಅದರಲ್ಲಿ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದೆ. ನಿಗಮದ ನಿರ್ದೇಶಕ ಜೆಜೆ ಪಧ್ಮನಾಬ್, ನಿಗಮದ ಲೆಕ್ಕಾಧಿಕಾರಿ ಪರಶುರಾಮ್ ಹಾಗೂ ಬೆಂಗಳೂರು ಎಂಜಿ ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ವ್ಯವಸ್ಥಾಪಕಿ ಶುಚಿಸ್ಮತಾ ರವುಲ್ ಈ ಮೂವರು ಸೇರಿ ಚಂದ್ರಶೇಖರ್ ಮೇಲೆ ಒತ್ತಡ ಹಾಕಿ ಈ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಈ ವ್ಯವಹಾರ ನೋಡಿದ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಮನನೊಂದು ಮತ್ತು ಭಯದಿಂದ ಸುಮಾರು ಆರು ಪುಟಗಳ ಡೆತ್ ನೋಟ್ ಬರೆದು ಶಿವಮೊಗ್ಗದ ವಿನೋಬ ನಗರ ಕೆಂಚಪ್ಪ ಲೇಔಟ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಮೂವರ ವಿರುದ್ಧ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಆಗಿದೆ. ಕುಟುಂಬಸ್ಥರು ಚಂದ್ರಶೇಖರ್ ಸಾವಿನಿಂದ ತೀವ್ರ ಆಘಾತಕ್ಕೋಳಗಾಗಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಭೂಮಿಯಲ್ಲಿ ಅಕ್ರಮ ಸಸಿ: ಸರ್ವೆಗೆ ಆದೇಶಸಿದ ಕೆಐಡಿಬಿ

ಡೆತ್​ನೋಟ್​ನಲ್ಲಿ ಏನಿದೆ

ಆರು ಪುಟಗಳ ಡೆತ್ ನೋಟ್​ನಲ್ಲಿ, ಸಚಿವರು ಮೌಖಿಕವಾಗಿ ಸೂಚನೆಯಂತೆ ವಸಂತನಗರದಲ್ಲಿರುವ ನಿಗಮದ ಯೂನಿಯ್ ಬ್ಯಾಂಕ್ ಖಾತೆಯನ್ನು ಎಂಜಿ ರಸ್ತೆಯಲ್ಲಿರುವ ಶಾಖೆಗೆ ವರ್ಗಾವಣೆ ಮಾಡಲಾಗಿದೆ. ಎಂಜಿ ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ನಿಗಮದ ಖಾತೆ ವರ್ಗಾವಣೆಯಾದ ಬಳಿಕ

ದಿನಾಂಕ 4/3/2024 ರಂದು 25 ಕೋಟಿ ದಿನಾಂಕ 6/3/2024 ರಂದು 25 ಕೋಟಿ ದಿನಾಂಕ 21/3/2024 ರಂದು 44 ಕೋಟಿ ದಿ. 21/3/2004 ರಂದು 43 ಕೋಟಿ (ರಾಜ್ಯ ಸರಕಾರದ ಖಜಾನೆಯಿಂದ ) ಹಾಗೂ 21/3/2024 ರಂದು 50 ಕೋಟಿ (ರಾಜ್ಯ ಸರಕಾರದ ಖಜಾನೆಯಿಂದ) ಒಟ್ಟು 187. 33 ಕೋಟಿ ವರ್ಗಾವಣೆ ಆಗಿದೆ.

ಎಂಜಿ ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕಿ ಶುಚಿಸ್ಮತಾ ರವುಲ್ ಮತ್ತು ನಿಗಮದ ನಿರ್ದೇಶಕರ ಪಧ್ಮನಾಬ್ ಮತ್ತು ಲೆಕ್ಕಾಧಿಕಾರಿ ಪರಶುರಾಮ್ ಮೂವರು ಸೇರಿ ಕಾನೂನು ಬಾಹಿರವಾಗಿ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆ ಮಾಡಿದ್ಧಾರೆ. ಅಂದರೆ ಸರಕಾರ ಎಸ್​ಟಿ ಫಲಾನುಭವಿಳಿಗೆ ಸೇರಬೇಕಿದ್ದ ಅನುದಾನದ ದುರ್ಬಳಕೆಯಾಗಿದೆ  ಎನ್ನುವುದು ಅಧೀಕಕ್ಷ ಚಂದ್ರಶೇಖರ್ ಆರೋಪವಾಗಿದೆ.

ತಮ್ಮ ಮೇಲೆ ಒತ್ತಡ ತಂದು ಹಣವನ್ನು ವರ್ಗಾವಣೆ ಮಾಡಿ ಬಳಿಕ ಅದನ್ನು ದುರುಪಯೋಗ ಮಾಡಿದ್ದಾರೆಂದು ಡೆತ್ ನೋಟ್​ನಲ್ಲಿ ಚಂದ್ರಶೇಖರ್ ಉಲ್ಲೇಖ ಮಾಡಿದ್ದಾರೆ. ಈ ನಡುವೆ ಪ್ರಕರಣವು ಬೆಳಕಿಗೆ ಬರುತ್ತಿದ್ದಂತೆ ಮೃತನ ಮನೆಗೆ ನಗರ ಬಿಜೆಪಿ ಶಾಸಕ ಚನ್ನಬಸಪ್ಪ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಚಂದ್ರಶೇಖರ್ ಸಾವಿಗೆ ವಾಲ್ಕೀಕಿ ನಿಮಗ ಅಧಿಕಾರಿ ಮತ್ತು ಬ್ಯಾಂಕ್ ವ್ಯವಸ್ಥಾಪಕಿ ಕಾರಣ ಎನ್ನುವುದು ಡೆತ್ ನೋಟ್​ನಲ್ಲಿ ಉಲ್ಲೇಖವಾಗಿದೆ. ಈ ಹಿನ್ನಲೆಯಲ್ಲಿ ಇಲಾಖೆಗೆಯ ಸಂಬಂಧಿಸಿದ ಸಚಿವರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು. ಡೆತ್ ನೋಟ್​ನಲ್ಲಿ ಉಲ್ಲೇಖ ಮಾಡಿರುವ ಮೂವರ ವಿರುದ್ಧ ತನಿಖೆ ಮಾಡಬೇಕು. ಈ ಮೂಲಕ 187 ಕೋಟಿ ಅನುದಾನದಲ್ಲಿ ಎಷ್ಟು ಕೋಟಿ ಹಣ ದುರುಪಯೋಗವಾಗಿದೆ ಎನ್ನುವುದು ಪತ್ತೆ ಮಾಡಬೇಕು. ಚಂದ್ರಶೇಖರ್ ಸಾವಿಗೆ ಕಾರಣವಾಗಿರುವ ಅಧಿಕಾರಿಗಳ ವಿರುದ್ಧ ತೆಗೆದುಕೊಳ್ಳಬೇಕಂದು ಶಾಸಕರು ಸರಕಾರಕ್ಕೆ ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:02 pm, Mon, 27 May 24

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್