AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದಾದ್ಯಂತ ಚಳಿ ಶುರು, ಮೂರ್ನಾಲ್ಕು ದಿನಗಳ ಬಳಿಕ ಇಣುಕಿದ ಸೂರ್ಯ

ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಮಿಚಾಂಗ್ ಚಂಡಮಾರುತದ ಅಬ್ಬರ ಹೆಚ್ಚಿದ್ದ ಕಾರಣ ಕರ್ನಾಟಕದಲ್ಲೂ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು ಕೆಲವು ಕಡೆ ಸಾಧಾರಣ ಮಳೆಯಾಗಿತ್ತು. ಇದೀಗ ಚಂಡಮಾರುತದ ಪ್ರಭಾವ ಕಡಿಮೆಯಾದ ಕಾರಣ ಶುಭ್ರ ಆಕಾಶ ನಿರ್ಮಾಣವಾಗುತ್ತಿದ್ದು, ಮೂರ್ನಾಲ್ಕು ದಿನಗಳ ಬಳಿಕ ಸೂರ್ಯ ಇಣುಕಿದ್ದಾನೆ.

Karnataka Weather: ಕರ್ನಾಟಕದಾದ್ಯಂತ ಚಳಿ ಶುರು, ಮೂರ್ನಾಲ್ಕು ದಿನಗಳ ಬಳಿಕ ಇಣುಕಿದ ಸೂರ್ಯ
ಚಳಿImage Credit source: Hindustan Times
ನಯನಾ ರಾಜೀವ್
|

Updated on: Dec 06, 2023 | 7:26 AM

Share

ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಮಿಚಾಂಗ್ ಚಂಡಮಾರುತದ ಅಬ್ಬರ ಹೆಚ್ಚಿದ್ದ ಕಾರಣ ಕರ್ನಾಟಕದಲ್ಲೂ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು ಕೆಲವು ಕಡೆ ಸಾಧಾರಣ ಮಳೆಯಾಗಿತ್ತು. ಇದೀಗ ಚಂಡಮಾರುತದ ಪ್ರಭಾವ ಕಡಿಮೆಯಾದ ಕಾರಣ ಶುಭ್ರ ಆಕಾಶ ನಿರ್ಮಾಣವಾಗುತ್ತಿದ್ದು, ಮೂರ್ನಾಲ್ಕು ದಿನಗಳ ಬಳಿಕ ಸೂರ್ಯ ಇಣುಕಿದ್ದಾನೆ.

ಡಿಸೆಂಬರ್ 10ರಿಂದ 3 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು, ಮುಂದಿನ 24 ಗಂಟೆಗಳಲ್ಲಿ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರದಲ್ಲಿ ಇಂದಿನಿಂದ ಡಿಸೆಂಬರ್ 12ರವರೆಗೆ ಆಗಾಗ ಸಾಧಾರಣ ಮಳೆಯಾಗಲಿದೆ.

ರಾಯಲ್ಪಾಡುವಿನಲ್ಲಿ ಮಳೆಯಾಗಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಕರಾವಳಿಯಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ, ಆದರೆ ಬುಧವಾರ ಸೂರ್ಯ ಗೋಚರಿಸಿದ್ದಾನೆ.

ಮತ್ತಷ್ಟು ಓದಿ: Karnataka Rain: ಮಿಚಾಂಗ್ ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದ 21ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಎಚ್​ಎಎಲ್​ನಲ್ಲಿ 23.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರ 23.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 23.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ