Karnataka Weather: ಬೆಂಗಳೂರಿನಲ್ಲಿ ಚಳಿಗಾಳಿ, ಮೋಡಕವಿದ ವಾತಾವರಣ

|

Updated on: Feb 14, 2024 | 7:35 AM

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಶೀತ ಗಾಳಿಯೂ ಬೀಸುತ್ತಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮುಂದಿನ 4 ದಿನಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಬಹುದು ಎಂದು ಹೇಳಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ಹಲವೆಡೆ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದೆ.

Karnataka Weather: ಬೆಂಗಳೂರಿನಲ್ಲಿ ಚಳಿಗಾಳಿ, ಮೋಡಕವಿದ ವಾತಾವರಣ
ಹವಾಮಾನ
Image Credit source: NDTV
Follow us on

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಬೆಳಗ್ಗೆ ಶೀತ ಗಾಳಿ ಇತ್ತು. ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ತಾಪಮಾನವು ಹಲವೆಡೆ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಮಂಡ್ಯದಲ್ಲಿ 13.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: India Weather: ಈ ಮೂರು ರಾಜ್ಯಗಳಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್​ ಘೋಷಣೆ

ಗದಗದಲ್ಲಿ 35.2 3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿವಮೊಗ್ಗದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ. 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ರಾಜ್ಯಗಳಲ್ಲಿ ಮಳೆ 
ವಿದರ್ಭಾ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲಿ ಮಳೆಯಾಗಲಿದೆ. ಫೆಬ್ರವರಿ 13-15ರ ವೇಳೆ ಒಡಿಶಾದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 5 ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ 2-4 ಡಿಗ್ರಿ ಸೆಲ್ಸಿಯಸ್​ನಷ್ಟು ರಷ್ಟು ಕ್ರಮೇಣ ಏರಿಕೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು ಈ ಭಾಗದ ಜನರನ್ನು ಮನೆಯಲ್ಲಿಯೇ ಇರುವಂತೆ ಕೇಳಿಕೊಂಡಿದೆ, ಗುಡುಗು, ಮಿಂಚು, ಆಲಿಕಲ್ಲಿನಿಂತ ಕೂಡಿದ ಅಕಾಲಿಕ ಮಳೆ ಇದಾಗಿರಲಿದೆ. ವಿದರ್ಭಾದಲ್ಲಿ ಕಡಿಮೆ ಉಷ್ಣವಲಯದಲ್ಲಿ ಚಂಡಮಾರುತ ಉಂಟಾಗುತ್ತಿದ್ದು ಮರಾಠವಾಡದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ