AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಆತಂಕ ತಂದ ಹವಮಾನ ಬದಲಾವಣೆ: ಮಕ್ಕಳಲ್ಲಿ ಹೆಚ್ಚಿದ ವೈರಲ್ ಫೀವರ್, ಡೆಂಗ್ಯೂ

ಬೆಂಗಳೂರಿನಲ್ಲಿ ಮಳೆ ಹೆಚ್ಚಾದಂತೆ ಮಕ್ಕಳಲ್ಲಿ ಡೆಂಗ್ಯೂ, ವೈರಲ್ ಜ್ವರ, ಶೀತ, ಕೆಮ್ಮಿನಂತಹ ಸಾಂಕ್ರಾಮಿಕ ರೋಗಗಳು ಹೆಚ್ಚಾಗಿವೆ. ಮಳೆ ನೀರು ನಿಂತು ಸೊಳ್ಳೆಗಳ ಉತ್ಪತ್ತಿಯಿಂದ ಡೆಂಗ್ಯೂ ಪ್ರಕರಣಗಳು ಏರಿಕೆ ಆಗಿವೆ. ಹೀಗಾಗಿ ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಆತಂಕ ತಂದ ಹವಮಾನ ಬದಲಾವಣೆ: ಮಕ್ಕಳಲ್ಲಿ ಹೆಚ್ಚಿದ ವೈರಲ್ ಫೀವರ್, ಡೆಂಗ್ಯೂ
ವೈರಲ್ ಫೀವರ್
ವಿನಯ್​ ಕಾಶಪ್ಪನವರ್​
| Edited By: |

Updated on: Oct 26, 2026 | 9:39 PM

Share

ಬೆಂಗಳೂರು, ಅಕ್ಟೋಬರ್​​ 26: ಬೆಂಗಳೂರಿನಲ್ಲಿ ಯಾವ ಘಳಿಗೆಯಲ್ಲಿ ಮಳೆ ಬರುತ್ತೋ, ಬಿಸಿಲು ಬರುತ್ತೋ ಗೊತ್ತಿಲ್ಲ. ಆದರೆ ಬದಲಾಗುತ್ತಿರುವ ಈ ಹವಮಾನದಿಂದ ಪೋಷಕರು ಮಾತ್ರ ತಮ್ಮ ಮಕ್ಕಳ ಬಗ್ಗೆ ಎಚ್ಚರ ವಹಿಸಲೇಬೇಕಾಗಿದೆ. ಏಕೆಂದರೆ ನಗರದಲ್ಲಿ ಮಳೆ ಶುರುವಾದ ಬೆನ್ನಲ್ಲೇ ಇದೀಗ ಸಾಂಕ್ರಾಮಿಕ ಖಾಯಿಲೆಗಳ ಸಮಸ್ಯೆ ಶುರುವಾಗಿದೆ. ಮಕ್ಕಳಲ್ಲಿ ಡೆಂಗ್ಯೂ, ವೈರಲ್ ಫೀವರ್ ಹೆಚ್ಚಿದೆ.

ಪೋಷಕರಿಗೆ ಆತಂಕ ಶುರು

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿದ್ದ ಮಳೆ, ಕೊಂಚ ಬ್ರೇಕ್ ಕೊಟ್ಟಿದೆ. ಮಳೆ ಕಡಿಮೆಯಾಯ್ತು ಅಂತ ನಿಟ್ಟುಸಿರು ಬಿಡುವುದರಲ್ಲೇ ಪೋಷಕರಿಗೆ ಆತಂಕ ಶುರುವಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದಾಗಿ ಚಳಿ ವಾತಾವರಣ ಹಿನ್ನೆಲೆ, ಮಕ್ಕಳಲ್ಲಿ ಡೆಂಗ್ಯೂ ಪ್ರಕರಣಗಳು ಪತ್ತೆಯಾಗುತ್ತಿವೆ.

ಮಕ್ಕಳಲ್ಲಿ ಶೀತ, ಕೆಮ್ಮು, ನೆಗಡಿ, ಜ್ವರ ಹೆಚ್ಚಳ 

ಪ್ರತಿ ವರ್ಷ ಅಕ್ಟೋಬರ್ ವೇಳೆಗೆ ಕಡಿಮೆಯಾಗಬೇಕಿದ್ದ ಡೆಂಗ್ಯೂ ಪ್ರಕರಣಗಳು, ಈ ಬಾರಿ ಅಕ್ಟೋಬರ್​ನಲ್ಲಿ ಹೆಚ್ಚಳವಾಗಿದೆ. ಕೇವಲ ಡೆಂಗ್ಯೂ ಮಾತ್ರವಲ್ಲ, ಮಕ್ಕಳಲ್ಲಿ ಶೀತ, ಕೆಮ್ಮು, ನಿಮೋನಿಯ, ನೆಗಡಿ, ಜ್ವರ ಕೂಡ ಕಂಡುಬರುತ್ತಿವೆ. ಕಳೆದ ನಾಲ್ಕೈದು ದಿನಗಳಿಂದ ಬರುತ್ತಿರುವ ಮಳೆಯಿಂದಾಗಿ ನಗರದ ಕೆಲವು ಕಡೆಗಳಲ್ಲಿ ಕಲುಷಿತ ನೀರು ನಿಂತು ಸಮಸ್ಯೆ ಉಲ್ಬಣವಾಗುತ್ತಿದೆ. ಅತಿಯಾದ ಮಳೆಯಿಂದ ಅಲ್ಲಲ್ಲಿ ನೀರು ನಿಲ್ಲುತ್ತಿದ್ದು, ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಇದರಿಂದ ಡೆಂಗ್ಯೂ, ಚಿಕೂನ್ ಗುನ್ಯಾದಂತಹ ಖಾಯಿಲೆ ಹರಡುತ್ತಿವೆ. ಶೇ. 15 ರಿಂದ 20% ಜ್ವರ ಪ್ರಕರಣಗಳು ಹೆಚ್ಚಳವಾಗಿವೆ. ಈ ಬೆನ್ನಲ್ಲೇ ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ ವಹಿಸುವಂತೆ ಮಕ್ಕಳ ತಜ್ಞರು ಸಲಹೆ ನೀಡಿದ್ದಾರೆ.

LIVE TV

ಪೋಷಕರು ಕೈಗೊಳ್ಳಬೇಕಾದ ಮುಂಜಾಗೃತೆ ಏನು?

  • ಮಕ್ಕಳಿಗೆ ಬಿಸಿ ನೀರು ಕುಡಿಸಬೇಕು
  • ⁠ಸೊಳ್ಳೆಗಳು ಬಾರದಂತೆ ಮನೆ ಬಳಿ ಸ್ವಚ್ಛತೆ ಕಾಪಾಡಬೇಕು
  • ಮಕ್ಕಳಿಗೆ ಮೈ ಮುಚ್ಚುವಂತೆ ಬಟ್ಟೆ ಹಾಕುವುದು
  • ಚಳಿಯಲ್ಲಿ ಮಕ್ಕಳನ್ನ ಹೊರಗೆ ಕಳುಹಿಸದಿರುವುದು
  • ⁠ಖಾಯಿಲೆ ಗುಣಲಕ್ಷಣಗಳು ಇದ್ದಲ್ಲಿ ವೈದ್ಯರನ್ನ ಸಂಪರ್ಕಿಸುವುದು

ಇದನ್ನೂ ಓದಿ: ಕ್ಯಾನ್ಸರ್ ಬಳಿಕ ಹಾರ್ಟ್‌, ಕಿಡ್ನಿ ಔಷಧಗಳ ದರ ನಿಯಂತ್ರಣಕ್ಕೆ ಚಿಂತನೆ: ರಾಜ್ಯದಿಂದ ಕೇಂದ್ರಕ್ಕೆ ಮನವಿ

ಒಟ್ಟಿನಲ್ಲಿ ಬೆಂಗಳೂರಿಲ್ಲಿ ಚಳಿ ವಾತಾವರಣದಿಂದ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಪೋಷಕರು ಆತಂಕಕ್ಕೆ ಒಳಗಾಗದೆ, ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
‘ಬರೀ ಟಾಸ್ಕ್ ಆಡಿದರೆ ಸಾಲದು’: ಧನುಷ್ ಆಟದ ಬಗ್ಗೆ ಲಕ್ಷ್ಮಿ ನೇರ ಮಾತು
‘ಬರೀ ಟಾಸ್ಕ್ ಆಡಿದರೆ ಸಾಲದು’: ಧನುಷ್ ಆಟದ ಬಗ್ಗೆ ಲಕ್ಷ್ಮಿ ನೇರ ಮಾತು
ಹಾಸನದಲ್ಲೊಂದು ಅಪರೂಪದ ಘಟನೆ: ಎರಡು ಕಾಡಾನೆಗಳ ಜಗಳ ಬಿಡಿಸಿದ ಶ್ವಾನ
ಹಾಸನದಲ್ಲೊಂದು ಅಪರೂಪದ ಘಟನೆ: ಎರಡು ಕಾಡಾನೆಗಳ ಜಗಳ ಬಿಡಿಸಿದ ಶ್ವಾನ
ಧನ್ವೀರ್ ಗೌಡ ಮನೆಗೆ ಮುತ್ತಿಗೆ ಹಾಕುತ್ತೇವೆ’: ಝೈದ್ ಖಾನ್ ಫ್ಯಾನ್ಸ್ ಗರಂ
ಧನ್ವೀರ್ ಗೌಡ ಮನೆಗೆ ಮುತ್ತಿಗೆ ಹಾಕುತ್ತೇವೆ’: ಝೈದ್ ಖಾನ್ ಫ್ಯಾನ್ಸ್ ಗರಂ
ಪಿ.ಎಸ್.ಲೇನ್ ರಸ್ತೆಯಲ್ಲಿ ಏಕಾಏಕಿ ಕುಸಿದ ಕಾಂಪೌಂಡ್​​: ಬೈಕ್​​ಗಳು ಜಖಂ
ಪಿ.ಎಸ್.ಲೇನ್ ರಸ್ತೆಯಲ್ಲಿ ಏಕಾಏಕಿ ಕುಸಿದ ಕಾಂಪೌಂಡ್​​: ಬೈಕ್​​ಗಳು ಜಖಂ
ಶೂನಲ್ಲಿ ಹೈಡ್ರೋಪೋನಿಕ್ ಗಾಂಜಾ ಇಟ್ಟುಕೊಂಡು ಬಂದು ಬೆಂಗಳೂರಿನಲ್ಲಿ ಲಾಕ್
ಶೂನಲ್ಲಿ ಹೈಡ್ರೋಪೋನಿಕ್ ಗಾಂಜಾ ಇಟ್ಟುಕೊಂಡು ಬಂದು ಬೆಂಗಳೂರಿನಲ್ಲಿ ಲಾಕ್
ಸೀಗೆಗುಡ್ಡದಲ್ಲಿ ಜನವೋ ಜನ,ಜಿಲ್ಲಾಡಳಿತಕ್ಕೆ ಟೆನ್ಷನ್ ತಂದಿಟ್ಟ ಪ್ರೇಮದ ಊರಲಿ
ಸೀಗೆಗುಡ್ಡದಲ್ಲಿ ಜನವೋ ಜನ,ಜಿಲ್ಲಾಡಳಿತಕ್ಕೆ ಟೆನ್ಷನ್ ತಂದಿಟ್ಟ ಪ್ರೇಮದ ಊರಲಿ
ಧನ್ವೀರ್ ಫೋಟೋಗೆ ಮಸಿ ಬಳಿದು ಝೈದ್ ಖಾನ್ ಅಭಿಮಾನಿಗಳ ಆಕ್ರೋಶ
ಧನ್ವೀರ್ ಫೋಟೋಗೆ ಮಸಿ ಬಳಿದು ಝೈದ್ ಖಾನ್ ಅಭಿಮಾನಿಗಳ ಆಕ್ರೋಶ
ಅವಾಂಟ್ ಬಿಕೆಜಿ ಆಸ್ಪತ್ರೆಯಲ್ಲಿ AI ತಂತ್ರಜ್ಞಾನ ಪರಿಚಯ
ಅವಾಂಟ್ ಬಿಕೆಜಿ ಆಸ್ಪತ್ರೆಯಲ್ಲಿ AI ತಂತ್ರಜ್ಞಾನ ಪರಿಚಯ
ರೈತನ ಮೆಣಸಿನಕಾಯಿ ಹೊಲಕ್ಕೆ ರಚಿತಾ ರಾಮ್‌, ರಶ್ಮಿಕಾ ಮಂದಣ್ಣ ಕಣ್ಗಾವಲು!
ರೈತನ ಮೆಣಸಿನಕಾಯಿ ಹೊಲಕ್ಕೆ ರಚಿತಾ ರಾಮ್‌, ರಶ್ಮಿಕಾ ಮಂದಣ್ಣ ಕಣ್ಗಾವಲು!
ಮಕ್ಕಳು ಅಂಗಳ ಅಗೆಯುವಾಗ ಕುಡಿಕೆಯಲ್ಲಿ ಪ್ರಾಚೀನ ನಾಣ್ಯಗಳು ಪತ್ತೆ
ಮಕ್ಕಳು ಅಂಗಳ ಅಗೆಯುವಾಗ ಕುಡಿಕೆಯಲ್ಲಿ ಪ್ರಾಚೀನ ನಾಣ್ಯಗಳು ಪತ್ತೆ