AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಚಳಿ ಮುಗಿಯುತ್ತಾ ಬಂತು, ಬೇಸಿಗೆ ಆರಂಭ ಆಗುವ ಮುನ್ಸೂಚನೆ

Karnataka Weather: ಬೆಂಗಳೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಫೆ.5ರ ಹವಾಮಾನ ಹೀಗಿದೆ. ಬೆಂಗಳೂರಿನಲ್ಲಿ ದಟ್ಟ ಮಂಜು, 30°C ತಾಪಮಾನ. ಕರಾವಳಿಯಲ್ಲಿ 33°C ಸೆಕೆ, ಉತ್ತರ ಕರ್ನಾಟಕದಲ್ಲಿ ಚಳಿಯ ಅನುಭವ. ಸದ್ಯ ಮಳೆಯ ಮುನ್ಸೂಚನೆ ಇಲ್ಲ, ಬಿಸಿಲು ಹೆಚ್ಚಾಗಲಿದೆ. ಫೆ.4-9ರವರೆಗೆ ಬೆಂಗಳೂರಿನಲ್ಲಿ ನಿತ್ಯ 4 ಗಂಟೆ ವಿದ್ಯುತ್ ಕಡಿತವಿರುವುದರಿಂದ ಮುನ್ನೆಚ್ಚರಿಕೆ ಅಗತ್ಯ.

ಕರ್ನಾಟಕ ಹವಾಮಾನ ವರದಿ: ಚಳಿ ಮುಗಿಯುತ್ತಾ ಬಂತು, ಬೇಸಿಗೆ ಆರಂಭ ಆಗುವ ಮುನ್ಸೂಚನೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Feb 05, 2026 | 6:55 AM

Share

ಬೆಂಗಳೂರು, ಫೆ.5: ಬೆಂಗಳೂರಿನ ಸೇರಿದಂತೆ ರಾಜ್ಯದಲ್ಲಿ ಇಂದಿನ ವಾತಾವರಣ (Karnataka Weathe) ಹೇಗಿದೆ? ಯಾವೆಲ್ಲ ಜಿಲ್ಲೆಯ ಜನ ಎಚ್ಚರಿಕೆಯಿಂದ ಇರಬೇಕು ಎಂಬುದು ಇಲ್ಲಿದೆ ನೋಡಿ. ನಗರದಲ್ಲಿ ಇಂದು ಮುಂಜಾನೆ ದಟ್ಟವಾದ ಮಂಜು ಮುಸುಕಿದ ವಾತಾವರಣವಿತ್ತು. ದಿನವಿಡೀ ಆಕಾಶವು ಭಾಗಶಃ ಮೋಡದಿಂದ ಕೂಡಿರುತ್ತದೆ. ಗರಿಷ್ಠ ತಾಪಮಾನ 30°C ಮತ್ತು ಕನಿಷ್ಠ ತಾಪಮಾನ 17°C ಆಸುಪಾಸಿನಲ್ಲಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೈಸೂರು ಮತ್ತು ಹಾಸನ ಭಾಗದಲ್ಲಿ ಹವಾಮಾನವು ತುಂಬಾ ಪ್ರಶಾಂತವಾಗಿದ್ದು, ಸಂಜೆಯ ವೇಳೆಗೆ ತಂಪಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಗರಿಷ್ಠ ತಾಪಮಾನವು 33°C ವರೆಗೆ ಏರಿಕೆಯಾಗುವ ಸಾಧ್ಯತೆಯಿದ್ದು, ಮಧ್ಯಾಹ್ನದ ಸಮಯದಲ್ಲಿ ಸೆಕೆ ಹೆಚ್ಚಿರಲಿದೆ. ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ಮುಂಜಾನೆ ಚಳಿಯ ಅನುಭವವಾಗಲಿದೆ. ಗರಿಷ್ಠ ತಾಪಮಾನವು 31°C – 33°C ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: ಬೆಂಗಳೂರಿಗರೇ ಗಮನಿಸಿ: ಫೆ.4 ರಿಂದ 9 ರವರೆಗೆ ಈ ಪ್ರದೇಶಗಳಲ್ಲಿ ಪ್ರತಿದಿನ 4 ಗಂಟೆಗಳ ಕಾಲ ವಿದ್ಯುತ್ ಕಡಿತ

ರಾಜ್ಯದ ಕೆಲವು ಪ್ರಮುಖ ನಗರಗಳ ಹವಾಮಾನ ಮಾಹಿತಿ ಇಲ್ಲಿದೆ:

ನಗರ ಗರಿಷ್ಠ ತಾಪಮಾನ ಕನಿಷ್ಠ ತಾಪಮಾನ ಸ್ಥಿತಿ
ಬೆಂಗಳೂರು 29°C 17°C ಮುಂಜಾನೆ ಮಂಜು, ದಿನವಿಡೀ ಬಿಸಿಲು
ಮೈಸೂರು 31°C 18°C ಶುಭ್ರ ಆಕಾಶ, ಆಹ್ಲಾದಕರ ವಾತಾವರಣ
ಮಂಗಳೂರು 33°C 23°C ಸೆಕೆ ಮತ್ತು ಆರ್ದ್ರತೆ ಹೆಚ್ಚು
ಹುಬ್ಬಳ್ಳಿ-ಧಾರವಾಡ 32°C 16°C ಒಣ ಹವೆ, ಮುಂಜಾನೆ ಲಘು ಚಳಿ
ಕಲಬುರಗಿ 34°C 19°C ಮಧ್ಯಾಹ್ನ ಹೆಚ್ಚು ಬಿಸಿಲು

ಉತ್ತರ ಕರ್ನಾಟಕ ಮತ್ತು ಬೆಂಗಳೂರಿನ ಸುತ್ತಮುತ್ತಲಿನ ಬಯಲು ಪ್ರದೇಶಗಳಲ್ಲಿ ಮುಂಜಾನೆ ದೃಷ್ಟಿಗೋಚರ ಕಡಿಮೆ ಇರಲಿದ್ದು, ವಾಹನ ಸವಾರರು ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನು ರಾಜ್ಯದ ಯಾವುದೇ ಭಾಗದಲ್ಲಿ ಸದ್ಯಕ್ಕೆ ಮಳೆಯ ಮುನ್ಸೂಚನೆ ಇಲ್ಲ. ಒಣಹವೆ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಫೆಬ್ರವರಿ ಮೊದಲ ವಾರ ಮುಗಿಯುತ್ತಿದ್ದಂತೆ ಹಗಲಿನ ತಾಪಮಾನವು ಕ್ರಮೇಣ ಏರಿಕೆಯಾಗುತ್ತಿದ್ದು, ಬೇಸಿಗೆ ಆರಂಭ ಆಗುವ ಮುನ್ಸೂಚನೆ ಸಿಗುತ್ತಿದೆ ಎಂದು ಹೇಳಲಾಗಿದೆ. ಇಂದಿನಿಂದ ಬೆಂಗಳೂರಿನ ಕೆಲವು ಭಾಗಗಳಲ್ಲಿ ವಿದ್ಯುತ್​​ ಕಡಿತವಾಗಲಿದೆ. 4 ಗಂಟೆಗಳ ಕಾಲ ವಿದ್ಯುತ್ ವ್ಯಯ್ಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ. ಆ ಕಾರಣದಿಂದ ಬೆಂಗಳೂರಿನಲ್ಲಿ ಇಂದು ಸೆಕೆಯಿಂದ ಕೂಡಿದ್ದರೆ ಮುನ್ನೆಚ್ಚರಿಕೆ ವಹಿಸುವಂತೆ ಹೇಳಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು