AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಒಂದು ಕೆಜಿ ಚಿನ್ನಾಭರಣ ಕಳ್ಳತನ

ಬೆಂಗಳೂರಿನ ಕಟ್ಟಿಗೆನಹಳ್ಳಿಯಲ್ಲಿ ಖಾಸಗಿ ಕಂಪನಿ ಉದ್ಯೋಗಿಯ ಮನೆಯಲ್ಲಿ 1 ಕೆಜಿ ಚಿನ್ನಾಭರಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗಲು ಯತ್ನಿಸಿದ್ದ ನೇಪಾಳಿ ಗ್ಯಾಂಗ್‌ನ ನಾಲ್ವರನ್ನು ಯಲಹಂಕ ಪೊಲೀಸರು ನೇಪಾಳ ಬಾರ್ಡರ್‌ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 55 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಮುಖ ಆರೋಪಿಗಳಿಗೆ ಹುಡುಕಾಟ ಮುಂದುವರಿದಿದೆ.

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಒಂದು ಕೆಜಿ ಚಿನ್ನಾಭರಣ ಕಳ್ಳತನ
ಬಂಧಿತ ಆರೋಪಿಗಳು
ವಿಕಾಸ್​ ಬಿಎಂ
| Edited By: |

Updated on:Aug 25, 2026 | 6:40 PM

Share

ಮುಖ್ಯಾಂಶಗಳು

  • ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ
  • ಒಂದು ಕೆಜಿ ಚಿನ್ನಾಭರಣ ಕಳ್ಳತನ ಮಾಡಿ ಎಸ್ಕೇಪ್​​ ಆದ ಗ್ಯಾಂಗ್​​
  • ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಿಗೆನಹಳ್ಳಿಯಲ್ಲಿ ಘಟನೆ

ಬೆಂಗಳೂರು, ಆಗಸ್ಟ್​​ 25: ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಿಗೆನಹಳ್ಳಿಯಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ ತೋರಿದ್ದು, ಚಂದ್ರಮೌಳಿ ಎಂಬ ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಬರೋಬ್ಬರಿ ಒಂದು ಕೆಜಿ ಚಿನ್ನಾಭರಣ ಕಳ್ಳತನ ನಡೆಸಿದೆ. ಆರೋಪಿಗಳು ಸೆಕ್ಯೂರಿಟಿ ಗಾರ್ಡ್​​ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಆರೋಪಿಗಳಾದ ಧೀರೇಂದ್ರ ಪ್ರೇಮ್, ಅಭಿಷೇಕ್, ಅಂಬರೆ ಧಮೈ ಹಾಗೂ ದೀಪಕ್ ಶಾಹಿ ಎಂಬವರನ್ನು ಬಂಧಿಸಲಾಗಿದೆ. ಮತ್ತಿಬ್ಬರು ಪ್ರಮುಖ ಆರೋಪಿಗಳು ಎಸ್ಕೇಪ್ ಆಗಿದ್ದಾರೆ.

ಕಳ್ಳತನಕ್ಕೆ 6 ತಿಂಗಳಿನಿಂದ ಪ್ಲ್ಯಾನ್

ಚಂದ್ರಮೌಳಿ ಅವರ ಮನೆಯಲ್ಲಿ ಕಳ್ಳತನ ನಡೆಸಲು ನೇಪಾಳಿ ಗ್ಯಾಂಗ್​​ ಬರೋಬ್ಬರಿ 6 ತಿಂಗಳಿನಿಂದ ಪ್ಲ್ಯಾನ್​​ ಮಾಡಿತ್ತು. ಪ್ರಮುಖ ಆರೋಪಿ ಸಂಜಯ್ ಮತ್ತು ಆತನ ಪತ್ನಿ ಚಂದ್ರಮೌಳಿ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಕಳೆದ ವರ್ಷ ಚಂದ್ರಮೌಳಿ ಮನೆಯಲ್ಲಿ ವರಮಹಾಲಕ್ಷ್ಮೀ ಪೂಜೆ ವೇಳೆ ಚಿನ್ನಾಭರಣಗಳು ಪ್ರಮುಖ ಆರೋಪಿ ಸಂಜಯ್ ಪತ್ನಿ ಕಣ್ಣಿಗೆ ಬಿದ್ದಿದ್ದವು. ಆ ಬಳಿಕ ಕಳೆದ ಆಗಸ್ಟ್ 16ರಂದು ಚಂದ್ರಮೌಳಿ ಮನೆಯವರು ಸಂಬಂಧಿಯ ತಿಥಿ ಕಾರ್ಯಕ್ಕೆಂದು ಹೋಗಿದ್ದರು. ತಿಥಿಗೆ ಹೋಗುತ್ತಿರುವ ಕಾರಣ ಚಿನ್ನಾಭರಣ ಹಾಕಿಕೊಂಡು ಹೋಗಿರಲಿಲ್ಲ. ಇದೇ ಸಮಯ ನೋಡಿಕೊಂಡು ರಾತ್ರಿ 2 ಗಂಟೆ ಸುಮಾರಿಗೆ ಸಂಜಯ್ ಚಿನ್ನಾಭರಣ ಕಳ್ಳತನ ಮಾಡಿದ್ದ. ಕಳ್ಳತನದ ಬಳಿಕ ಸಂಬಂಧಿಕರ ಬಳಿ ಚಿನ್ನ ಕೊಟ್ಟು ಬೆಳಿಗ್ಗೆ ವಿಮಾನದಲ್ಲಿ ದಂಪತಿ ಎಸ್ಕೇಪ್ ಆಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಕದ್ದ ಹಣದಲ್ಲೇ ಸ್ನೇಹಿತರಿಗೆ ಪಾರ್ಟಿ, ಬಡವರಿಗೆ ಸಹಾಯ! ಖತರ್ನಾಕ್ ಮನೆಗಳ್ಳ ಅರೆಸ್ಟ್

ಇತ್ತ ಉಳಿದ ಆರೋಪಿಗಳುಚಿನ್ನಾಭರಣದೊಂದಿದೆ ಬಸ್ ಹತ್ತಿ ಹೊರಟಿದ್ದರು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಯಲಹಂಕ ಪೊಲೀಸರು ಫೇಸ್​​ಬುಕ್ ಮೂಲಕ ಆರೋಪಿಗಳ ಸುಳಿವು ಪತ್ತೆ ಮಾಡಿದ್ದು, ಅಷ್ಟೊತ್ತಿಗಾಗಲೇ ಅವರೆಲ್ಲ ನೇಪಾಳ ಬಾರ್ಡರ್ ತಲುಪಿದ್ದರು. ತಕ್ಷಣ SSBಗೆ( ಶಶಸ್ತ್ರ ಸೀಮಾ ಬಾಲ) ಯಲಹಂಕ ಪೊಲೀಸರು ಮಾಹಿತಿ ನೀಡಿದ್ದು, ಅವರು ಆರೋಪಿಗಳಿದ್ದ ಬಸ್​​ ತಡೆದು ನಿಲ್ಲಿಸಿದ್ದರು. ವಿಮಾನದಲ್ಲಿ ತೆರಳಿದ್ದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಬಂಧಿತ ಆರೋಪಿಗಳಿಂದ 55 ಲಕ್ಷ ಮೌಲ್ಯದ 360 ಗ್ರಾಂ ಚಿನ್ನ, 960 ಗ್ರಾಂ ಬೆಳ್ಳಿ ವಶಕ್ಕೆ ಪಡೆಯಲಾಗಿದೆ. ಪ್ರಮುಖ ಆರೋಪಿ ಸಂಜಯ್ ಮತ್ತು ಆತನ‌ ಪತ್ನಿಗಾಗಿ ಹುಡುಕಾಟ ಮುಂದುವರಿದಿದೆ.

ಪ್ರಮುಖ ಆರೋಪಿಗಿದೆ ಕ್ರೈಂ ಹಿನ್ನೆಲೆ

ಇನ್ನು ಈ ಕಳ್ಳತನ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಜಯ್​​ ಕ್ರೈಂ ಹಿನ್ನೆಲೆ ಹೊಂದಿದ್ದಾನೆ ಎಂಬುದೂ ತನಿಖೆ ವೇಳೆ ಬಯಲಾಗಿದೆ. ಈ ಹಿಂದೆ ಕೂಡ 2021ರಲ್ಲಿ ಕೆಜಿ ಹಳ್ಳಿ ಪೊಲೀಸರಿಂದ ಮನೆಗಳ್ಳತನ ಕೇಸ್​​ ಸಂಬಂಧ ಈತ ಅರೆಸ್ಟ್ ಆಗಿದ್ದ. ಜೈಲಿಗೆ ಹೋಗಿ ಹೊರಬಂದು ಬುದ್ಧಿ ಕಲಿಯದೆ ಮತ್ತೆ ಅಂತಹುದ್ದೇ ಕೆಲಸ ಮಾಡಿದ್ದಾನೆ ಎಂಬುದು ತಿಳಿದುಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:44 pm, Tue, 25 August 26

Follow Us
ವಿಕಾಸ್​ ಬಿಎಂ
ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು