ಬೆಂಗಳೂರು, ಡಿಸೆಂಬರ್ 28: ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ಪ್ರತಿಭಟನೆ ಸಂಬಂಧ 10 ಎಫ್ಐಆರ್ ದಾಖಲು ಮಾಡಲಾಗಿದ್ದು, ಅಧ್ಯಕ್ಷ ನಾರಾಯಣಗೌಡ ಸೇರಿ 53 ಜನರನ್ನ ಅರೆಸ್ಟ್ ಮಾಡಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಬೆಂಗಳೂರು ಕಮಿಷನರ್ ಬಿ.ದಯಾನಂದ್ ಹೇಳಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಬಂಧನ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕದಡುವ ಕೆಲಸ ಮಾಡಬಾರದು ಎಂದು ಹೇಳಿದ್ದಾರೆ.
ಮಹಾಲಕ್ಷ್ಮೀ ಲೇಔಟ್ ಪೊಲೀಸರಿಂದ ವಂಚಕ ಸಂತೋಷ್ ಬಂಧನ ಪ್ರಕರಣವಾಗಿ ಮಾತನಾಡಿದ ಅವರು, ಮಹಾಲಕ್ಷ್ಮೀ ಲೇಔಟ್ನಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಕಂಪನಿಯ ಪಾರ್ಟ್ನರ್ ಶಿಪ್ ತೆಗೆದುಕೊಂಡು ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದ ಎಂದಿದ್ದಾರೆ.
ಇದನ್ನೂ ಓದಿ: ಕನ್ನಡ ಭಾಷೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ, ಬೋರ್ಡ್ ಬದಲಾವಣೆಗೆ ಫೆ.28 ಡೆಡ್ಲೈನ್ ನೀಡಿದ ಸಿಎಂ
ದೊಡ್ಡವರ ಕಚೇರಿ ಹೆಸರು ಹೇಳಿಕೊಂಡು ಬಹಳಷ್ಟು ಜನರಿಗೆ ವಂಚನೆ ಮಾಡಿರುವ ಮಾಹಿತಿ ಬಂದಿತ್ತು. ಮಠ ಮಾನ್ಯಗಳಿಗೂ ಭೇಟಿ ಕೊಟ್ಟು ನಂಬಿಕೆ ಬರುವಂತೆ ನಾಟಕ ಮಾಡುತ್ತಿದ್ದ. ಯಾರಿಗಾದರು ವಂಚನೆ ಮಾಡಿರುವ ಮಾಹಿತಿ ಕೊಟ್ಟರೆ ಪ್ರಕರಣ ದಾಖಲು ಮಾಡುತ್ತೇವೆ ಎಂದು ಹೇಳಿದ್ದಾರೆ.
ಹೊಸವರ್ಷ ದಿನಾಚರಣೆ ಆಚರಣೆಗೆ ಪೊಲೀಸ್ ಭದ್ರತೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕಟ್ಟೆಚ್ಚರ ವಹಿಸಲಾಗಿದೆ. ಹೊಸ ವರ್ಷದಂದು ಡ್ರಂಕ್ ಮತ್ತು ಡ್ರೈವ್ ಟೆಸ್ಟ್ ಮಾಡಲಾಗುವುದು. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಕಬ್ಬನ್ಪಾರ್ಕ್ನಲ್ಲಿ ಬಂದೋಬಸ್ತ್ ಕೈಗೊಳ್ಳಲಾಗುತ್ತೆ. ನಗರದಾದ್ಯಂತ 400 ಸಿಸಿಕ್ಯಾಮರಾ ಅಳವಡಿಸಲಾಗುವುದು ಎಂದು ತಿಳಿಸಿದ್ದಾರೆ.
ಮೈಸೂರು: ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಬಂಧನ ಖಂಡಿಸಿ ನಗರದಲ್ಲಿ ಪ್ರತಿಭಟನೆ ಮಾಡಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಮೈಸೂರು ಜಿಲ್ಲಾ ಘಟಕದ ವತಿಯಿಂದ ಮೈಸೂರಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಮಾಡಲಾಗಿದೆ.
ನಾರಾಯಣಗೌಡರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪ್ರತಿಭಟಿಸಿದ್ದು, ಕನ್ನಡ ಪರ ಹೋರಾಟಗಾರರನ್ನು ಹತ್ತಿಕ್ಕುವ ಕೆಲಸ ರಾಜ್ಯ ಸರ್ಕಾರದಿಂದ ನಡೆಯುತ್ತಿದೆ. ಕನ್ನಡದ ಉಳಿವಿಗಾಗಿ ಹೋರಾಟ ಮಾಡುವುದು ತಪ್ಪಾ ಎಂದು ರಾಜ್ಯ ಸರ್ಕಾರಕ್ಕೆ ಕನ್ನಡಪರ ಹೋರಾಟಗಾರರು ಪ್ರಶ್ನೆ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.