AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಅಕ್ರಮವಾಗಿ ತಂಗಿದ್ದ 105 ವಿದೇಶಿಗರು ಗಡಿಪಾರು, 240 ಪ್ರಕರಣಗಳು ದಾಖಲು: ಜಿ ಪರಮೇಶ್ವರ್​​

ವೀಸಾ ಅವಧಿ ಮುಗಿದ ನಂತರವೂ ನಗರದಲ್ಲಿ ಉಳಿದುಕೊಂಡಿದ್ದ ವಿದೇಶಿ ಪ್ರಜೆಗಳ ವಿರುದ್ಧ ಬೆಂಗಳೂರು ನಗರ ಪೊಲೀಸರು ಸುಮಾರು 240 ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಪ್ರಕರಣಗಳು ಕಳೆದ 30 ತಿಂಗಳುಗಳಲ್ಲಿ (ಜನವರಿ 2021 ಮತ್ತು ಜೂನ್ 2023 ರ ನಡುವೆ) ದಾಖಲಾಗಿವೆ ಎಂದು ಗೃಹ ಸಚಿವ ಜಿ ಪರಮೇಶ್ವರ್​​ ತಿಳಿಸಿದ್ದಾರೆ.

Bengaluru News: ಅಕ್ರಮವಾಗಿ ತಂಗಿದ್ದ 105 ವಿದೇಶಿಗರು ಗಡಿಪಾರು, 240 ಪ್ರಕರಣಗಳು ದಾಖಲು: ಜಿ ಪರಮೇಶ್ವರ್​​
ಗೃಹ ಸಚಿವ ಜಿ ಪರಮೇಶ್ವರ್​​
Follow us
ವಿವೇಕ ಬಿರಾದಾರ
|

Updated on:Jul 10, 2023 | 10:54 AM

ಬೆಂಗಳೂರು: 2023ರ ಮೇ ಅಂತ್ಯದವರೆಗೆ ಅಧ್ಯಯನ, ವ್ಯಾಪಾರ ಮತ್ತು ಇತರ ಉದ್ದೇಶಗಳಿಗಾಗಿ ಬೆಂಗಳೂರಿಗೆ (Bengaluru) ಬಂದಿದ್ದ 678 ವಿದೇಶಿ ಪ್ರಜೆಗಳು (Foreign Nationals) ವೀಸಾ (Visa) ಅವಧಿ ಮುಗಿದ ನಂತರವೂ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ ಎಂದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ ನೀಡಿದ ಮಾಹಿತಿಯನ್ನು ಉಲ್ಲೇಖಿಸಿ ರಾಜ್ಯ ಸರ್ಕಾರ (Karnataka Government) ತಿಳಿಸಿದೆ. ಗುರುವಾರ ವಿಧಾನ ಪರಿಷತ್ತಿನಲ್ಲಿ ಎಂಎಲ್​​ಸಿ ಎಂ ನಾಗರಾಜು (M Nagaraju) ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಜಿ ಪರಮೇಶ್ವರ (G Parameshwara) ಅವರು, ವೀಸಾ ಅವಧಿ ಮುಗಿದ ನಂತರವೂ ನಗರದಲ್ಲಿ ಉಳಿದುಕೊಂಡಿದ್ದ ವಿದೇಶಿ ಪ್ರಜೆಗಳ ವಿರುದ್ಧ ಬೆಂಗಳೂರು ನಗರ ಪೊಲೀಸರು ಸುಮಾರು 240 ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಪ್ರಕರಣಗಳು ಕಳೆದ 30 ತಿಂಗಳುಗಳಲ್ಲಿ (ಜನವರಿ 2021 ಮತ್ತು ಜೂನ್ 2023 ರ ನಡುವೆ) ದಾಖಲಾಗಿವೆ. ಅದೇ ಅವಧಿಯಲ್ಲಿ ರಾಜ್ಯ ಸರ್ಕಾರ 105 ವಿದೇಶಿ ಪ್ರಜೆಗಳನ್ನು ಗಡಿಪಾರು ಮಾಡಲಾಗಿದೆ ಎಂದು ತಿಳಿಸಿದರು.

ಗೃಹ ಇಲಾಖೆಯ ಅಂಕಿಅಂಶಗಳ ಪ್ರಕಾರ ಬೆಂಗಳೂರು ನಗರ ಪೊಲೀಸರು 2021 ರಲ್ಲಿ 121, 2022 ರಲ್ಲಿ 104 ಮತ್ತು 2023 ರಲ್ಲಿ 15 (ಜೂನ್ ಅಂತ್ಯದವರೆಗೆ) ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಸರ್ಕಾರವು 2021 ರಲ್ಲಿ 56, 2022 ರಲ್ಲಿ 41 ಮತ್ತು 2023 ರಲ್ಲಿ ಎಂಟು ವಿದೇಶಿಯರನ್ನು ಗಡೀಪಾರು ಮಾಡಿದೆ.

ಇದನ್ನೂ ಓದಿ: ಪೊಲೀಸ್​ ಆಕಾಂಕ್ಷಿಗಳಿಗೆ ಗುಡ್​ನ್ಯೂಸ್​: ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶ: ಗೃಹ ಸಚಿವ ಜಿ ಪರಮೇಶ್ವರ್​​

ಕೆಲವು ವಿದೇಶಿ ಪ್ರಜೆಗಳು ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಈ ಬಗ್ಗೆ ಸರ್ಕಾರ ಯಾವ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಸರ್ಕಾರಕ್ಕೆ ತಿಳಿದಿದೆಯೇ ಎಂದು ಎಂಎಲ್ಸಿ ಎಂ ನಾಗರಾಜು ಪ್ರಶ್ನಿಸಿದರು.

ಸರ್ಕಾರವು ಈ ಬಗ್ಗೆ ತಿಳಿದಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಪ್ರಯತ್ನದಲ್ಲಿ, ವಿವಿಧ ಉದ್ದೇಶಗಳಿಗಾಗಿ ಬೆಂಗಳೂರಿಗೆ ಬರುವ ವಿದೇಶಿ ಪ್ರಜೆಗಳ ಮೇಲೆ ತೀವ್ರ ನಿಗಾ ಇರಿಸಿದೆ ಎಂದು ಗೃಹ ಸಚಿವರು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:52 am, Mon, 10 July 23

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್