Corona Virus: ರಾಜ್ಯದಲ್ಲಿಂದು 106 ಜನರಿಗೆ ಕೊರೊನಾ ಸೋಂಕು ದೃಢ; ಸಕ್ರಿಯ ಕೇಸ್​ಗಳೆಷ್ಟು?

| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 24, 2023 | 7:27 PM

ರಾಜ್ಯದಲ್ಲಿ ಇಂದು 106 ಜನರಿಗೆ ಹೊಸದಾಗಿ ಕೊರೊನಾ ಸೋಂಕು(Corona Virus)ದೃಢಪಟ್ಟಿದ್ದು, ಬೆಂಗಳೂರಿನಲ್ಲಿಯೇ 95 ಜನರಿಗೆ ಹರಡಿದೆ. ಇನ್ನುಳಿದಂತೆ  ಮೈಸೂರು 6, ದಕ್ಷಿಣ ಕನ್ನಡ ಇಬ್ಬರಿಗೆ ಹಾಗೂ ಮಂಡ್ಯ, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಯಲ್ಲಿ ತಲಾ ಒಬ್ಬರಲ್ಲಿ ಕೊರೊನಾ ಸೋಂಕು ಕಂಡುಬಂದಿದೆ.

Corona Virus: ರಾಜ್ಯದಲ್ಲಿಂದು 106 ಜನರಿಗೆ ಕೊರೊನಾ ಸೋಂಕು ದೃಢ; ಸಕ್ರಿಯ ಕೇಸ್​ಗಳೆಷ್ಟು?
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಡಿ.24: ರಾಜ್ಯದಲ್ಲಿ ಇಂದು 106 ಜನರಿಗೆ ಹೊಸದಾಗಿ ಕೊರೊನಾ ಸೋಂಕು(Corona Virus)ದೃಢಪಟ್ಟಿದ್ದು, ಬೆಂಗಳೂರಿನಲ್ಲಿಯೇ 95 ಜನರಿಗೆ ಹರಡಿದೆ. ಇನ್ನುಳಿದಂತೆ  ಮೈಸೂರು 6, ದಕ್ಷಿಣ ಕನ್ನಡ ಇಬ್ಬರಿಗೆ ಹಾಗೂ ಮಂಡ್ಯ, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಯಲ್ಲಿ ತಲಾ ಒಬ್ಬರಲ್ಲಿ ಕೊರೊನಾ ಸೋಂಕು ಕಂಡುಬಂದಿದೆ. ಈ ಮೂಲಕ ಕರ್ನಾಟಕದಲ್ಲಿ 344 ಕೊರೊನಾ ಸಕ್ರಿಯ ಕೇಸ್​ಗಳಿವೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿ ರೇಟ್ ಶೇಕಡಾ 7.35ರಷ್ಟಿದೆ  ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 322 ಹೊಸ ಕೋವಿಡ್ ಕೇಸ್​

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 322 ಹೊಸ ಕೊರೊನಾ ಪ್ರಕರಣಗಳು ಮತ್ತು ಒಂದು ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿತ್ತು. ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 3,742 ಆಗಿದೆ. ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ  ಪ್ರಕರಣಗಳು ವರದಿಯಾಗಿವೆ. ದೆಹಲಿಯಲ್ಲಿ ಇದೇ ಅವಧಿಯಲ್ಲಿ 16 ಹೊಸ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ:Covid Cases in India: ಭಾರತದಲ್ಲಿ 322 ಹೊಸ ಕೊರೊನಾ ಪ್ರಕರಣಗಳು ಪತ್ತೆ

ದಾಖಲಾಗುವ ಕೊರೊನಾ ಪ್ರಕರಣಗಳಲ್ಲಿ ಹೆಚ್ಚಿನ ಪ್ರಮಾಣ ಬೆಂಗಳೂರಿನಲ್ಲಿಯೇ ಬೆಳಕಿಗೆ ಬರುತ್ತಿವೆ. ಅದರಂತೆ ಬೆಂಗಳೂರಿನ ವಾಣಿ ವಿಲಾಸ, ವಿಕ್ಟೋರಿಯಾ, ಮಿಂಟೋ ಆಸ್ಪತ್ರೆಗಳಲ್ಲಿ ಈಗಾಗಲೇ ಕೊರೊನಾ ಮುನ್ನೇಚರಿಕೆ ಕ್ರಮವಾಗಿ ಸಿ‌ದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿನಿತ್ಯ ಆಸ್ಪತ್ರೆ ಕ್ಯಾಂಪಸ್​ನಲ್ಲಿ ಸಿಬ್ಬಂದಿಗಳು RT-PCR ಟೆಸ್ಟ್ ಮಾಡುತ್ತಿದ್ದಾರೆ. ಕೊವಿಡ್ ಸೋಂಕಿತರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಪುರುಷರು, ಮಹಿಳೆಯರು, ಮಕ್ಕಳಿಗೆ ಪ್ರತ್ಯೇಕ ವಾರ್ಡ್​ ನಿರ್ಮಾಣ ಮಾಡಲಾಗಿದೆ. ಐಸಿಯುನಲ್ಲಿ 6 ಬೆಡ್​ಗಳನ್ನು ಇರಿಸಲಾಗಿದೆ. ಜೊತೆಗೆ ಚಿಕಿತ್ಸೆ ನೀಡಲು ನರ್ಸ್, ವೈದ್ಯರು, ಟೆಕ್ನಷಿಯನ್ಸ್​​​ಗಳನ್ನು ಆಸ್ಪತ್ರೆ ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:17 pm, Sun, 24 December 23