108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ: ಒಬ್ಬೊಬ್ಬರಿಂದ 3 ಲಕ್ಷ ರೂ ವಸೂಲಿ?

108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದೆ. ಜಿವಿಕೆ ಸಂಸ್ಥೆ ವಿರುದ್ಧ ರಾಜ್ಯ ಆ್ಯಂಬುಲೆನ್ಸ್ ಚಾಲಕರ ಸಂಘ ಗಂಭೀರ ಆರೋಪ ಮಾಡಿದೆ. ಸರ್ಕಾರದ ಆದೇಶ ಧಿಕ್ಕರಿಸಿ, ಒಬ್ಬರಿಂದ 3 ಲಕ್ಷ ರೂ. ಹಣ ಪಡೆದು ನೇಮಕ ಮಾಡಿರುವ ಆರೋಪ ಕೇಳಿಬಂದಿದೆ.

108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ: ಒಬ್ಬೊಬ್ಬರಿಂದ 3 ಲಕ್ಷ ರೂ ವಸೂಲಿ?
108 ಆ್ಯಂಬುಲೆನ್ಸ್ (ಸಂಗ್ರಹ ಚಿತ್ರ)
Follow us
Vinayak Hanamant Gurav
| Updated By: ಗಂಗಾಧರ​ ಬ. ಸಾಬೋಜಿ

Updated on: Dec 08, 2023 | 1:18 PM

ಬೆಂಗಳೂರು, ಡಿಸೆಂಬರ್​​ 08: ಇತ್ತೀಚೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ವಿವಿಧ ಸ್ಪರ್ಧಾತ್ಮಕ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಇದೀಗ 108 ಆ್ಯಂಬುಲೆನ್ಸ್ (108 Ambulance) ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದೆ. ಜಿವಿಕೆ ಸಂಸ್ಥೆ ವಿರುದ್ಧ ರಾಜ್ಯ ಆ್ಯಂಬುಲೆನ್ಸ್ ಚಾಲಕರ ಸಂಘ ಗಂಭೀರ ಆರೋಪ ಮಾಡಿದೆ. 250ಕ್ಕೂ ಹೆಚ್ಚು ಅಹರ್ತೆ ಇಲ್ಲದ ಚಾಲಕರನ್ನ ನೇಮಕ ಮಾಡಿಕೊಂಡ GVK ಕಂಪನಿ ಕೋಟ್ಯಾಂತರ ರೂ. ಭ್ರಷ್ಟಾಚಾರ ಮಾಡಿದೆ. ಸರ್ಕಾರದ ಆದೇಶ ಧಿಕ್ಕರಿಸಿ, ಒಬ್ಬರಿಂದ 3 ಲಕ್ಷ ರೂ. ಹಣ ಪಡೆದು ನೇಮಕ ಮಾಡಿರುವ ಆರೋಪ ಮಾಡಲಾಗಿದೆ.

ಅನರ್ಹತೆ ಚಾಲಕರ ನೇಮಕ ಹಿನ್ನೆಲೆ ಆ್ಯಂಬುಲೆನ್ಸ್ ಅಪಘಾತದಲ್ಲಿ ಏರಿಕೆ ಆಗುತ್ತಿದೆ. ಮಾನದಂಡ ಹಾಗೂ ಅರ್ಹತೆ, ಅನುಭವದ ಕೊರತೆ ಕಾರಣ ಒಂದೇ ತಿಂಗಳಲ್ಲಿ 10ಕ್ಕೂ ಹೆಚ್ಚು ಆ್ಯಂಬುಲೆನ್ಸ್ ಅಪಘಾತ ಉಂಟಾಗಿವೆ.

108 ಚಾಲಕರಿಗೆ ಇರಬೇಕಾದ ಅಹರ್ತೆಗಳೇನು?

  • SSLC  ವಿದ್ಯಾರ್ಹತೆ ಪೂರ್ಣಗೊಳಿಸರಬೇಕು.
  • DL ಪಡೆದು ಐದು ವರ್ಷ ಪೂರ್ಣಗೊಳಿಸರಬೇಕು.
  • ಹೇವಿ ವೆಹಿಕಲ್ ಚಾಲನಾ ಪರವಾನಗಿಯನ್ನು ಕಡ್ಡಾಯವಾಗಿ ಹೊಂದಿರಬೇಕು.
  • ನೇಮಕಾತಿ ಮಾಡುವ ಸಂಧರ್ಭದಲ್ಲಿ ಚಾಲಕರಿಗೆ ವಾಹನ ಚಾಲನಾ ತರಬೇತಿ ನೀಡಬೇಕು.
  • ನೇಮಕಾತಿಯಲ್ಲಿ ಹಲವು ಮಾನದಂಡ ಅನುಸರಿಸಬೇಕು.

ಆರೋಪವೇನು?

  • ನೇಮಕಾತಿ ಯಾವುದೇ ನಿಯಮ‌ ಪಾಲನೆ ಮಾಡಿಲ್ಲ.
  • ಒಬ್ಬರಿಂದ ಮೂರು ಲಕ್ಷ ರೂ. ಹಣ ಪಡೆದು ನೇಮಕ ಮಾಡಲಾಗಿದೆ.
  • 40 ಜನ ಹಣ ಕೊಟ್ಟಿಲ್ಲವೆಂದು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.
  • ಕಮಿಷನರ್ ಆದೇಶದಂತೆ 130 ಜನರ ನೇಮಕ ಮಾಡಿಕೊಳ್ಳಬೇಕು. ಆದರೆ ಚಾಲಕರ ಕೊರತೆ ನೆಪವೊಡ್ಡಿ 250 ಕ್ಕೂ ಅಧಿಕ ಚಾಲಕರ ನೇಮಕ ಮಾಡಿಕೊಳ್ಳಲಾಗಿದೆ.

ನೂತನ 262 ಆ್ಯಂಬುಲೆನ್ಸ್: ಸಿಎಂ ಸಿದ್ದರಾಮಯ್ಯ ಚಾಲನೆ

ರಾಜ್ಯದ ಆರೋಗ್ಯ ಇಲಾಖೆಯ ನೂತನ 262 ಆ್ಯಂಬುಲೆನ್ಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ಚಾಲನೆ ನೀಡಿದ್ದರು. ಕರ್ನಾಟಕದಲ್ಲಿ 108 ಆ್ಯಂಬುಲೆನ್ಸ್ ಸೇವೆಗೆ ಮತ್ತಷ್ಟು ಬಲ ನೀಡಲು 262 ಹೊಸ ಆ್ಯಂಬುಲೆನ್ಸ್ ಮತ್ತು ವೈದ್ಯಕೀಯ ಉಪಕರಣ ಖರೀದಿಸಲು ನಿರ್ಧರಿಸಲಾಗಿತ್ತು. ಅದರಂತೆ ಹೊಸ ಆ್ಯಂಬುಲೆನ್ಸ್ ಸೇವೆ ಚಾಲನೆ ನೀಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್