AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆ ವಿರುದ್ಧ 108 ಆ್ಯಂಬುಲೆನ್ಸ್ ನೌಕರರ ಸಮರ: ಸಿಬ್ಬಂದಿಗೆ ಆರೋಗ್ಯ ಸಚಿವರಿಂದ ಖಡಕ್​​ ಎಚ್ಚರಿಕೆ

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ 108 ಆ್ಯಂಬುಲೆನ್ಸ್ ಸಿಬ್ಬಂದಿ ಸಾಮೂಹಿಕ ರಾಜೀನಾಮೆ ಎಚ್ಚರಿಕೆ ನೀಡಿದ್ದು, ರೋಗಿಗಳಿಗೆ ತೊಂದರೆಯಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರದಲ್ಲಿ ನಮಗೂ, ಕಂಪನಿಗೂ ಯಾವುದೇ ಸಂಬಂಧ ಇರಲ್ಲ. ಹೀಗಾಗಿ ನಮಗೆ ಆ್ಯಂಬುಲೆನ್ಸ್ ಸಿಬ್ಬಂದಿ ಮುಷ್ಕರ ನಡೆಸಿ ಸಮಸ್ಯೆ ಮಾಡಬಾರದು ಎಂದವರು ಹೇಳಿದ್ದಾರೆ.

ಆರೋಗ್ಯ ಇಲಾಖೆ ವಿರುದ್ಧ 108 ಆ್ಯಂಬುಲೆನ್ಸ್ ನೌಕರರ ಸಮರ: ಸಿಬ್ಬಂದಿಗೆ ಆರೋಗ್ಯ ಸಚಿವರಿಂದ ಖಡಕ್​​ ಎಚ್ಚರಿಕೆ
ಆರೋಗ್ಯ ಇಲಾಖೆ ವಿರುದ್ಧ 108 ಆ್ಯಂಬುಲೆನ್ಸ್ ನೌಕರರ ಸಮರImage Credit source: The Hindu
ವಿನಯ್​ ಕಾಶಪ್ಪನವರ್​
| Edited By: |

Updated on:Sep 07, 2026 | 12:35 PM

Share

ಬೆಂಗಳೂರು/ಮಂಗಳೂರು, ಸೆಪ್ಟೆಂಬರ್​​ 07: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆರೋಗ್ಯ ಇಲಾಖೆ ವಿರುದ್ಧ 108 ಆ್ಯಂಬುಲೆನ್ಸ್ ನೌಕರರು ಸಮರ ಸಾರಿದ್ದು, 15 ದಿನದೊಳಗೆ ಬೇಡಿಕೆ ಈಡೇರದೆ ಇದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ ನೀಡಿದ್ದಾರೆ. ಪ್ರತಿ ವರ್ಷ 108 ಆ್ಯಂಬುಲೆನ್ಸ್ ನೌಕರರ ವೇತನ ಪರಿಷ್ಕರಣೆ ಮಾಡಬೇಕು, 3 ಪಾಳಿಯಲ್ಲಿ ಆ್ಯಂಬುಲೆನ್ಸ್​ ವಾಹನದ ಸೌಕರ್ಯ ಮಾಡಬೇಕು ಮತ್ತು ⁠ವಲಯವಾರು ವಿಂಗಡಣೆ ಮಾಡಿ ನಿಗದಿ ಮಾಡಿರೋ ವೇತನ ರದ್ದು ಪಡಿಸಿ ಏಕರೂಪ ವಲಯವಾಗಿ ಬದಲಾವಣೆ ಮಾಡಬೇಕೆಂಬುದು ನೌಕರರ ಆಗ್ರಹವಾಗಿದೆ.

108 ಆ್ಯಂಬುಲೆನ್ಸ್ ನೌಕರರ ಪ್ರಮುಖ ಬೇಡಿಕೆಗಳು

    • ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ
    • ಜೇಷ್ಠತೆ ಆಧಾರದ ಮೇಲೆ ಸಿಬ್ಬಂದಿಗೆ ವೇತನ ನಿಗದಿ
    • ಕಾರ್ಮಿಕ ಇಲಾಖೆ ಪ್ರಕಾರ ಪ್ರತಿ ತಿಂಗಳು 7ರ ಒಳಗೆ ವೇತನ ನೀಡಬೇಕು
    • ಸಿಬ್ಬಂದಿಗೆ ವಿಶ್ರಾಂತಿ ಕೊಠಡಿ ನೀಡಬೇಕು
LIVE TV

ಇದನ್ನೂ ಓದಿ: ಸಿಕ್ಕ ಸಿಕ್ಕ ಕ್ಲಿನಿಕ್​ಗೆ ಹೋಗುವ ಮುನ್ನ ಎಚ್ಚರ! ರಾಜ್ಯದಲ್ಲಿದ್ದಾರೆ 583 ಕ್ಕೂ ಹೆಚ್ಚು ನಕಲಿ ವೈದ್ಯರು

‘ರೋಗಿಗಳ ನೆರವಿಗೆ ಬರದಿದ್ದರೆ ಸಿಬ್ಬಂದಿ ವಿರುದ್ಧ ಕ್ರಮ’

108 ಆ್ಯಂಬುಲೆನ್ಸ್ ಸಿಬ್ಬಂದಿ ಸಾಮೂಹಿಕ ರಾಜೀನಾಮೆ ಎಚ್ಚರಿಕೆ ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಯು.ಟಿ. ಖಾದರ್​​, ಸಿಬ್ಬಂದಿ ಮುಷ್ಕರ ಮಾಡಲಿ. ಆದರೆ ರೋಗಿಗಳಿಗೆ ಸಮಸ್ಯೆಯಾದರೆ ಕಠಿಣ ಕ್ರಮಕೈಗೊಳ್ಳಬೇಕಾಗುತ್ತೆ ಎಂದು ಎಚ್ಚರಿಸಿದ್ದಾರೆ. 108 ಆ್ಯಂಬುಲೆನ್ಸ್​ ವಾಹನಗಳ ನಿರ್ವಹಣೆ ಮಾಡೋಡದು ನಾವಲ್ಲ. ಕಂಪನಿಯು ಸಿಬ್ಬಂದಿಯ ವೇತನ ಸೇರಿ ಎಲ್ಲಾ ಕೆಲಸ ಮಾಡುತ್ತೆ. ಚಾಲಕರಿಗೆ ಸಮಸ್ಯೆ ಇದ್ದರೆ ಕಂಪನಿ ಜೊತೆ ಮಾತನಾಡಬೇಕು. ಅವರು ಸಮಸ್ಯೆ ಬಗೆಹರಿಸದಿದ್ದರೆ ನಮ್ಮ ಬಳಿ ಮಾತನಾಡಲಿ. ಈ ವಿಚಾರದಲ್ಲಿ ನಮಗೂ, ಕಂಪನಿಗೂ ಯಾವುದೇ ಸಂಬಂಧ ಇರಲ್ಲ. ಹೀಗಾಗಿ ನಮಗೆ ಆ್ಯಂಬುಲೆನ್ಸ್ ಸಿಬ್ಬಂದಿ ಮುಷ್ಕರ ನಡೆಸಿ ಸಮಸ್ಯೆ ಮಾಡಬಾರದು. ಸಿಬ್ಬಂದಿ ಮುಷ್ಕರ ಅಲ್ಲ ಏನೇ ಮಾಡಿದರೂ ನಾವು ಜವಾಬ್ದಾರಿ ಅಲ್ಲ. ಸಿಬ್ಬಂದಿಯನ್ನು ನಿಭಾಯಿಸಲು ಆಗದಿದ್ದರೆ ಕಂಪನಿಯು ಬಿಟ್ಟುಹೋಗಲಿ. ನಾವು ಬೇರೆ ಕಂಪನಿಗೆ ಟೆಂಡರ್ ಕೊಡುತ್ತೇವೆ. ಆ್ಯಂಬುಲೆನ್ಸ್ ಸಿಬ್ಬಂದಿ ವರ್ಗದವರು ನಮ್ಮ ಸಹೋದರರು ಇದ್ದಂತೆ. ಆದರೆ ಅವರಿಗಿಂತ ನಮಗೆ ರೋಗಿಗಳ ಆರೋಗ್ಯ ಮುಖ್ಯ. ಮುಷ್ಕರದ ವೇಳೆ ರೋಗಿಗೆ ಸಮಸ್ಯೆಯಾದರೆ ನಾವು ಸುಮ್ಮನಿರಲ್ಲ. ಮುಷ್ಕರದಲ್ಲಿ ಭಾಗಿಯಾಗುವ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತೆ. ರೋಗಿಗಳ ನೆರವಿಗೆ ಬರದಿದ್ದರೆ ಸಿಬ್ಬಂದಿ ವಿರುದ್ಧ ಯಾವುದೇ ಮುಲಾಜಿಲ್ಲದೆ ಕೂಡಲೇ ಕ್ರಮಕೈಗೊಳ್ಳಬೇಕಾಗುತ್ತೆ ಎಂದು ಸಚಿವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:34 pm, Mon, 7 September 26

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ