ಬೆಂಗಳೂರಿನಲ್ಲಿ ದೀಪಾವಳಿ ಪಟಾಕಿಯಿಂದ ಈವರೆಗೆ 115 ಜನರಿಗೆ ಗಾಯ

ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ ಸಿಡಿತದಿಂದ 115 ಜನರು ಗಾಯಗೊಂಡಿದ್ದಾರೆ. ಮಿಂಟೋ ಮತ್ತು ನಾರಾಯಣ ನೇತ್ರಾಲಯಗಳಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಹೆಚ್ಚಿನ ಗಾಯಾಳುಗಳು ಮಕ್ಕಳಾಗಿದ್ದು, ಕಣ್ಣುಗಳಿಗೆ ಗಾಯಗಳಾಗಿವೆ.

ಬೆಂಗಳೂರಿನಲ್ಲಿ ದೀಪಾವಳಿ ಪಟಾಕಿಯಿಂದ ಈವರೆಗೆ 115 ಜನರಿಗೆ ಗಾಯ
ಸಾಂದರ್ಭಿಕ ಚಿತ್ರ
Follow us
Kiran Surya
| Updated By: ವಿವೇಕ ಬಿರಾದಾರ

Updated on:Nov 03, 2024 | 12:55 PM

ಬೆಂಗಳೂರು, ನವೆಂಬರ್​ 03: ಕರ್ನಾಟಕದಾದ್ಯಂತ ಸಂಭ್ರಮ-ಸಡಗರದಿಂದ ದೀಪಾವಳಿ (Deepavali) ಹಬ್ಬವನ್ನು ಆಚರಿಸಲಾಯಿತು. ದೀಪಾವಳಿ ಹಬ್ಬದ (Deepavali Festival) ಸಂಭ್ರಮದಲ್ಲಿ ಪಟಾಕಿ ಸಿಡಿಸುವಾಗ ಹಲವರು ಗಾಯಗೊಂಡಿದ್ದಾರೆ. ಕಳೆದ‌ ವರ್ಷಕ್ಕಿಂತ ಈ ವರ್ಷ ಪಟಾಕಿ ಸಿಡಿತದಿಂದ ಗಾಯಗೊಂಡ ಪ್ರಕರಣ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಈವರಗೆ 115 ಜನರು ಪಟಾಕಿಯಿಂದ ಗಾಯಗೊಂಡಿದ್ದಾರೆ. ಮಿಂಟೋ ಹಾಗೂ ನಾರಾಯಣ ನೇತ್ರಾಲಯ ಆಸ್ಪತ್ರೆಯಲ್ಲಿ ಒಟ್ಟು 115 ಕೇಸ್​ಗಳು ದಾಖಲಾಗಿವೆ.

ನಾರಾಯಣ ನೇತ್ರಾಲಯ ಆಸ್ಪತ್ರೆ ಒಂದರಲ್ಲೇ ಮೂರು ದಿನದಲ್ಲಿ 66 ಕೇಸ್​ಗಳು ದಾಖಲಾಗಿವೆ. ಇದರಲ್ಲಿ 49 ಗಂಡು ಮಕ್ಕಳು, 17 ಹೆಣ್ಣು ಮಕ್ಕಳಿದ್ದಾರೆ. 33 ಜನ ವಯಸ್ಕರಿಗೆ, 33 ಜನ ಮಕ್ಕಳಿಗೆ ಪಟಾಕಿ ಕಿಡಿ ಸಿಡಿದು ಗಾಯವಾಗಿದೆ. 10 ವರ್ಷದೊಳಗಿನ 14 ಮಕ್ಕಳು ಪಟಾಕಿಯಿಂದ ಗಾಯಗೊಂಡಿದ್ದಾರೆ. 10-18 ವರ್ಷದೊಳಗಿನ 19 ಜನ ಮಕ್ಕಳಿಗೆ ಗಾಯವಾಗಿದೆ. ಪಟಾಕಿಯಿಂದ ಗಂಡು ಮಕ್ಕಳೇ ಹೆಚ್ಚು ಗಾಯಗೊಂಡಿದ್ದಾರೆ. ಪಟಾಕಿ ಹೊಡೆಯುವ ವೇಳೆ ಅಕ್ಕಪಕ್ಕದಲ್ಲಿದ್ದ 33 ಮಂದಿಗೆ ಗಾಯವಾಗಿದೆ. ನಾಲ್ಕು ಮಂದಿಗೆ ಈಗಾಗಲೇ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

ಆಕ್ಟೋಬರ್ -31 ರಂದು 14 ಕೇಸ್

ನವೆಂಬರ್- 1 ರಂದು 27 ಕೇಸ್

ನವೆಂಬರ್- 2 ರಂದು 25

ಮಿಂಟೋ ಆಸ್ಪತ್ರಗೆ ಇಲ್ಲಿಯವರೆಗೆ 49 ಜನರು ದಾಖಲಾಗಿದ್ದಾರೆ. 49ರಲ್ಲಿ 27 ಮಂದಿ ಪಟಾಕಿ ಸಿಡಿಸುವಾಗ ಗಾಯ ಮಾಡಿಕೊಂಡಿದ್ದಾರೆ. 22 ಮಂದಿ ಅಕ್ಕಪಕ್ಕ ಇದ್ದವರು ಪಟಾಕಿ ಸಿಡಿತಕ್ಕೆ ಒಳಗಾಗಿದ್ದಾರೆ. ಶನಿವಾರ ಒಂದೇ ದಿನ 20 ಮಂದಿ ದಾಖಲಾಗಿದ್ದಾರೆ. 20ರಲ್ಲಿ 15 ಜನ ಮಕ್ಕಳು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ದೀಪಾವಳಿಯಂದೇ ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ರೋಗಿಗಳು ಶಿಫ್ಟ್‌

35 ಮಂದಿ‌ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ. 14 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪಟಾಕಿಯಿಂದ 32 ಮಕ್ಕಳು ಕಣ್ಣಿಗೆ ಏಟು ಮಾಡಿಕೊಂಡಿದ್ದಾರೆ. 17 ಮಂದಿ ವಯಸ್ಕರೂ ಸಹ ಪಟಾಕಿ‌ ಸಿಡಿತಕ್ಕೆ ಒಳಗಾಗಿದ್ದಾರೆ. 23 ಮಂದಿಗೆ ಪಟಾಕಿಯಿಂದ ಗಂಭೀರ ಸಮಸ್ಯೆಯಾಗಿದೆ. 26 ಮಂದಿಗೆ ಸಣ್ಣ ಪ್ರಮಾಣದ ಗಾಯವಾಗಿದೆ. ನಾಲ್ವರಿಗೆ ಈಗಾಗಲೇ ಸರ್ಜರಿ‌ ಮಾಡಲಾಗಿದೆ. ಇನ್ನೂ 10 ಮಂದಿಗೆ ಸರ್ಜರಿಯ ಅವಶ್ಯಕತೆಯಿದೆ.

ಮಿಂಟೋ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಸುರೇಶ್ ಬಾಬು ಮಾತನಾಡಿ, ಪಟಾಕಿ ಸಿಡಿದು ಗಾಯಗೊಂಡು 49 ಜನರು ಚಿಕಿತ್ಸೆಗೆ ಬಂದಿದ್ದಾರೆ. 49 ಜನರ ಪೈಕಿ ಒಟ್ಟು 10 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಾಲ್ವರಿಗೆ ಸರ್ಜರಿ ಮಾಡಲಾಗಿದೆ. ಅತಿ ಹೆಚ್ಚು ಹೂಕುಂಡ ಹಚ್ಚುವಾಗ ತೊಂದರೆಯಾಗಿದೆ. ಪಟಾಕಿಯಿಂದಾಗಿ ಒಟ್ಟು 32 ಜನ ಮಕ್ಕಳಿಗೆ ಕಣ್ಣಿಗೆ ಗಾಯ. ಇಂದು ಮತ್ತು ನಾಳೆ ಮತ್ತಷ್ಟು ಪ್ರಕರಣ ಬರುವ ಸಾಧ್ಯತೆ ಇದೆ ಎಂದು ಹೇಳಿದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:21 pm, Sun, 3 November 24

ಕಾಂಗ್ರೆಸ್ ಒಂದು ದೇಶ ಒಂದು ಚುನಾವಣೆ ಮಸೂದೆ ವಿರೋಧಿಸುತ್ತದೆ: ಶಿವಕುಮಾರ್
ಕಾಂಗ್ರೆಸ್ ಒಂದು ದೇಶ ಒಂದು ಚುನಾವಣೆ ಮಸೂದೆ ವಿರೋಧಿಸುತ್ತದೆ: ಶಿವಕುಮಾರ್
ಶ್ರೀಲಂಕಾದ ರೈಲಿನಲ್ಲಿ ರೀಲ್ಸ್​ ಮಾಡಲು ಹೋಗಿ ಚೀನಾ ಯುವತಿಗೆ ಏನಾಯ್ತು ನೋಡಿ
ಶ್ರೀಲಂಕಾದ ರೈಲಿನಲ್ಲಿ ರೀಲ್ಸ್​ ಮಾಡಲು ಹೋಗಿ ಚೀನಾ ಯುವತಿಗೆ ಏನಾಯ್ತು ನೋಡಿ
Live: ಬೆಳಗಾವಿ ಅಧಿವೇಶನದ ಐದನೇ ದಿನದ ಕಲಾಪ ನೇರ ಪ್ರಸಾರ
Live: ಬೆಳಗಾವಿ ಅಧಿವೇಶನದ ಐದನೇ ದಿನದ ಕಲಾಪ ನೇರ ಪ್ರಸಾರ
ಅಂಜನಾದ್ರಿ ಬೆಟ್ಟದಲ್ಲಿ ನೆರೆದಿದ್ದಾರೆ ಮಾಲೆ ಧರಿಸಿರುವ ಸಾವಿರಾರು ಭಕ್ತರು
ಅಂಜನಾದ್ರಿ ಬೆಟ್ಟದಲ್ಲಿ ನೆರೆದಿದ್ದಾರೆ ಮಾಲೆ ಧರಿಸಿರುವ ಸಾವಿರಾರು ಭಕ್ತರು
ಮೈಸೂರು ಜಯಲಕ್ಷ್ಮಿ ವಿಲಾಸ ಅರಮನೆ ಕಾಯಕಲ್ಪಕ್ಕೆ ಅಮೆರಿಕ ನೆರವು
ಮೈಸೂರು ಜಯಲಕ್ಷ್ಮಿ ವಿಲಾಸ ಅರಮನೆ ಕಾಯಕಲ್ಪಕ್ಕೆ ಅಮೆರಿಕ ನೆರವು
ಹೇಗಿದೆ ನೋಡಿ ನಟಿ ಶ್ರುತಿ ಹೊಸ ಮನೆ; ಪ್ರಶಸ್ತಿ ಇಡಲು ಪ್ರತ್ಯೇಕ ಶೋಕೇಸ್
ಹೇಗಿದೆ ನೋಡಿ ನಟಿ ಶ್ರುತಿ ಹೊಸ ಮನೆ; ಪ್ರಶಸ್ತಿ ಇಡಲು ಪ್ರತ್ಯೇಕ ಶೋಕೇಸ್
ಧನರಾಜ್ ಮೇಲೆ ಕೈ ಮಾಡಿ ಹೊರ ಹೋದ್ರಾ ರಜತ್?
ಧನರಾಜ್ ಮೇಲೆ ಕೈ ಮಾಡಿ ಹೊರ ಹೋದ್ರಾ ರಜತ್?
ಮೃತ್ಯುಂಜಯ ಮಂತ್ರದ ಅರ್ಥ ಮತ್ತು ಜಪಿಸುವ ವಿಧಾನ ತಿಳಿಯಿರಿ
ಮೃತ್ಯುಂಜಯ ಮಂತ್ರದ ಅರ್ಥ ಮತ್ತು ಜಪಿಸುವ ವಿಧಾನ ತಿಳಿಯಿರಿ
ಶುಕ್ರವಾರದ ದಿನಭವಿಷ್ಯ; ಗ್ರಹಗಳ ಸಂಚಾರ, ಶುಭ, ಅಶುಭ ಬಗ್ಗೆ ತಿಳಿಯಿರಿ
ಶುಕ್ರವಾರದ ದಿನಭವಿಷ್ಯ; ಗ್ರಹಗಳ ಸಂಚಾರ, ಶುಭ, ಅಶುಭ ಬಗ್ಗೆ ತಿಳಿಯಿರಿ
ಹಿಮಾಲಯದಲ್ಲಿ ಸಿಕ್ಕಿ ಬಿದ್ದ ಕಂದು ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು
ಹಿಮಾಲಯದಲ್ಲಿ ಸಿಕ್ಕಿ ಬಿದ್ದ ಕಂದು ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು