AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಡ್ ಡೆಲಿವರಿ ಬಾಯ್ಸ್​ನ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ!

ಬೆಂಗಳೂರಿನಲ್ಲಿ ತಡರಾತ್ರಿ ವೇಳೆ ಫುಡ್ ಡೆಲಿವರಿ ಬಾಯ್‌ಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಮೂವರನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜುಲೈ 30ರ ರಾತ್ರಿ ಕಗ್ಗದಾಸಪುರ ಬಳಿ ಡೆಲಿವರಿ ಬಾಯ್‌ ತಡೆದು ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳಿಂದ 1.30 ಲಕ್ಷ ರೂ. ನಗದು ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ. ಆರೋಪಿಗಳು ಮತ್ತಷ್ಟು ಕೃತ್ಯಗಳಲ್ಲಿ ಭಾಗಿಯಾಗಿರುವ ಶಂಕೆಯಿದ್ದು ತನಿಖೆ ಮುಂದುವರಿದಿದೆ.

ಫುಡ್ ಡೆಲಿವರಿ ಬಾಯ್ಸ್​ನ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ!
ಸಾಂದರ್ಭಿಕ ಚಿತ್ರImage Credit source: Deccan herald
ಶಿವಪ್ರಸಾದ್​ ಬಿ.
| Edited By: |

Updated on: Aug 05, 2026 | 12:58 PM

Share

ಮುಖ್ಯಾಂಶಗಳು

  • ಫುಡ್ ಡೆಲಿವರಿ ಬಾಯ್‌ಗಳನ್ನು ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ
  • ಬಂಧಿತ ದರೋಡೆಕೋರರಿಂದ 1.30 ಲಕ್ಷ ರೂಪಾಯಿ ನಗದು, ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.
  • ಕಗ್ಗದಾಸಪುರದಲ್ಲಿ ನಡೆದಿದ್ದ ದರೋಡೆ ಪ್ರಕರಣ ಬೆನ್ನತ್ತಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಬೆಂಗಳೂರು, ಆಗಸ್ಟ್ 05: ತಡರಾತ್ರಿ ವೇಳೆ ಕಷ್ಟಪಟ್ಟು ಕೆಲಸ ಮಾಡುವ ಫುಡ್ ಡೆಲಿವರಿ ಬಾಯ್‌ಗಳನ್ನೇ (Delivery boy) ಗುರಿಯಾಗಿಸಿಕೊಂಡು ದರೋಡೆ ನಡೆಸುತ್ತಿದ್ದ ಜಾಲವೊಂದನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಸುಲಿಗೆ ಕೃತ್ಯದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಒಂದು ಮೊಬೈಲ್ ಫೋನ್ ಹಾಗೂ ಬರೋಬ್ಬರಿ 1.30 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಕಗ್ಗದಾಸಪುರ ಬಳಿ ತಡರಾತ್ರಿ ನಡೆದಿದ್ದ ದರೋಡೆ ಪ್ರಕರಣ!

ಜುಲೈ 30ರ ರಾತ್ರಿ ಕಗ್ಗದಾಸಪುರ ಒಂದನೇ ಕ್ರಾಸ್ ಬಳಿ ಈ ಘಟನೆ ನಡೆದಿತ್ತು. ಆಹಾರ ತಲುಪಿಸಲು ತೆರಳುತ್ತಿದ್ದ ಫುಡ್ ಡೆಲಿವರಿ ಸಿಬ್ಬಂದಿಯನ್ನು ನಿರ್ಜನ ಪ್ರದೇಶದಲ್ಲಿ ಹೊಂಚು ಹಾಕಿ ತಡೆದಿದ್ದ ಈ ಆರೋಪಿಗಳು, ಚಾಕು ತೋರಿಸಿ ಬೆದರಿಕೆ ಹಾಕಿದ್ದರು. ಸಂತ್ರಸ್ತ ಡೆಲಿವರಿ ಬಾಯ್ ಬಳಿಯಿದ್ದ ಬೆಲೆಬಾಳುವ ಮೊಬೈಲ್ ಹಾಗೂ ನಗದನ್ನು ಕಸಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದರು. ಈ ಕುರಿತು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಾರ್ಯಾಚರಣೆ ನಡೆಸಿ ಖದೀಮರನ್ನು ಬಂಧಿಸಿದ ಪೊಲೀಸರು!

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬೈಯಪ್ಪನಹಳ್ಳಿ ಪೊಲೀಸರು, ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಹಾಗೂ ತಾಂತ್ರಿಕ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ದೋಚಲಾಗಿದ್ದ ಮೊಬೈಲ್ ಹಾಗೂ ಸುಲಿಗೆ ಮಾಡಿದ್ದ ಹಣವನ್ನು ಜಪ್ತಿ ಮಾಡಲಾಗಿದೆ.

ಮತ್ತಷ್ಟು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ!

ಬಂಧಿತ ದರೋಡೆಕೋರರು ಕೇವಲ ಈ ಒಂದೇ ಕೃತ್ಯಕ್ಕೆ ಸೀಮಿತವಾಗಿರದೆ, ನಗರದ ವಿವಿಧ ಭಾಗಗಳಲ್ಲಿ ತಡರಾತ್ರಿ ಸಂಚರಿಸುವ ಡೆಲಿವರಿ ಬಾಯ್‌ಗಳನ್ನು ಗುರಿಯಾಗಿಸಿಕೊಂಡು ಹಲವು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರುವ ದಟ್ಟ ಶಂಕೆ ವ್ಯಕ್ತವಾಗಿದೆ. ರಾತ್ರಿ ವೇಳೆ ಒಂಟಿಯಾಗಿ ಸಿಗುವ ಕೆಲಸಗಾರರನ್ನು ಬೆದರಿಸಿ ಹಣ, ಮೊಬೈಲ್ ಕಸಿಯುವುದು ಇವರ ಕಾಯಕವಾಗಿತ್ತು. ಈ ಹಿನ್ನೆಲೆಯಲ್ಲಿ ಬೈಯಪ್ಪನಹಳ್ಳಿ ಪೊಲೀಸರು ಬಂಧಿತ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಕಾಯ್ದುಕೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ