AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMPಯ ಪೌರಕಾರ್ಮಿಕರು ಕಾಯಂ, ಮುಂದಿನ ಸರದಿ ಚಾಲಕರು, ಹೆಲ್ಪರ್ಸ್​, ಆಪರೇಟರ್ಸ್​: ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿಯ 12,692 ಪೌರಕಾರ್ಮಿಕರಿಗೆ ಶಾಶ್ವತ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿದ್ದಾರೆ. ಇದರೊಂದಿಗೆ ಬಿಬಿಎಂಪಿ ವಾಹನ ಚಾಲಕರು, ಸಹಾಯಕರು ಮತ್ತು ಆಪರೇಟರ್‌ಗಳನ್ನು ಕೂಡ ಶೀಘ್ರದಲ್ಲೇ ಕಾಯಂಗೊಳಿಸುವುದಾಗಿ ಘೋಷಿಸಿದ್ದಾರೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಈ ಕಾರ್ಮಿಕರನ್ನು ಮುಖ್ಯವಾಹಿನಿಗೆ ತರುವ ಈ ಕ್ರಮ ಸಮಾಜದಲ್ಲಿ ಸಮಾನತೆ ಸಾಧಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಲಾಗಿದೆ.

BBMPಯ ಪೌರಕಾರ್ಮಿಕರು ಕಾಯಂ, ಮುಂದಿನ ಸರದಿ ಚಾಲಕರು, ಹೆಲ್ಪರ್ಸ್​, ಆಪರೇಟರ್ಸ್​: ಸಿಎಂ
ಸಿಎಂ ಸಿದ್ದರಾಮಯ್ಯ
ಶಾಂತಮೂರ್ತಿ
| Edited By: |

Updated on: May 01, 2025 | 2:54 PM

Share

ಬೆಂಗಳೂರು, ಮೇ 01: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ನೇರ ವೇತನದಡಿಯಲ್ಲಿ ಕೆಲಸ ಮಾಡುತ್ತಿರುವ 12,692 ಪೌರಕಾರ್ಮಿಕರನ್ನು ಕಾಯಂಗೊಳಿಸಿ, ನೇಮಕ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನೀಡಿದರು. ಅಲ್ಲದೇ, ಬಿಬಿಎಂಪಿ ವಾಹನ ಚಾಲಕರು ಡ್ರೈವರ್ಸ್, ಪೌರಕಾರ್ಮಿಕರ ಸಹಾಯಕರು ಮತ್ತು ಆಪರೇಟರ್​ಗಳನ್ನು ಕೂಡ ಮುಂದಿನ ದಿನಗಳಲ್ಲಿ ಕಾಯಂ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅರಮನೆ ಮೈದಾನದಲ್ಲಿ ನಡೆದ ಪೌರ-ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಣೆ 12,692 ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತರಣೆ ಮಾಡಿದರು. ಬಳಿಕ, ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 38 ಸಾವಿರ ಪೌರಕಾರ್ಮಿಕರಿದ್ದಾರೆ ಎಂದು ತಿಳಿಸಿದರು.

ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದಾರೆ ಅಂತ ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಪೌರಕಾರ್ಮಿಕರು ದೂರು ನೀಡಿದ್ದರು. ಮಿನಿಮಮ್ ವೇಜಸ್ ಆ್ಯಕ್ಟ್ ಅಡಿ ಕನಿಷ್ಠ ವೇತನ ಕೊಡಿಸುವ ಕೆಲಸ ಮಾಡಿದೆ. ಮಧ್ಯವರ್ತಿಗಳ ಹಾವಳಿಯಿಂದ ನೀವು ಇವತ್ತು ಮುಕ್ತರಾಗಿದ್ದೀರಿ ಎಂದರು.

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಏರಿಕೆ ಖಚಿತ, ಮೇ 13ಕ್ಕೆ ಆದೇಶ ಸಾಧ್ಯತೆ
Image
ಬಸ್​ ನಿಲ್ಲಿಸಿ ನಮಾಜ್​ ಮಾಡಿದ NWKRTC ಚಾಲಕನ ವಿರುದ್ಧ ತನಿಖೆಗೆ ಆದೇಶ
Image
ಕೇಂದ್ರ ವಿರುದ್ಧ ಹುಬ್ಬಳ್ಳಿಯಲ್ಲಿ ಕೈ ಧರಣಿ: ಸಿಎಂಗೆ ಜೋಶಿ ಸಪ್ತ ಪ್ರಶ್ನೆ
Image
ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಮಧ್ಯಂತರ ತಡೆ

ನೀವೆಲ್ಲ ಶುಚಿತ್ವ ಕಾಪಾಡುವರು. ಶುಚಿತ್ವದಲ್ಲೇ ದೈವತ್ವ ಕಾಣುತ್ತೇವೆ. ಅಂತಾ ಮಹಾತ್ಮ ಗಾಂಧೀಜಿ ಹೇಳಿದ್ದಾರೆ. ಶುಚಿತ್ವ ಮಾಡುವ ಕೆಲಸ ಬಹಳ ಶ್ರೇಷ್ಠವಾದದ್ದು. ಬಸವಣ್ಣ ಅವರು ಕಾಯಕವೇ ಕೈಲಾಸ ಅಂದಿದ್ದರು. ಯಾವ ಕೆಲಸವೂ ಕೀಳಲ್ಲ, ಯಾವ ಕೆಲಸವೂ ಮೇಲಲ್ಲ ಎಂದರು.

ನಿಮ್ಮನ್ನು ಮುಖ್ಯವಾಹಿನಿಗೆ ತರುವುದು ನಮ್ಮ ಉದ್ದೇಶವಾಗಿದೆ. ಪೌರಕಾರ್ಮಿಕರನ್ನು ಮುಖ್ಯವಾಹಿನಿಗೆ ತರಬೇಕು. ನಮ್ಮ ಉದ್ದೇಶ ಸಮಸಮಾಜ ನಿರ್ಮಾಣ ಮಾಡುವುದು. ಎಲ್ಲರಿಗೂ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಶಕ್ತಿ ಕೊಡಬೇಕು. ಆ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.

ನೀವೆಲ್ಲ ನಿಮಗೆ ಸಹಾಯ ಮಾಡುವ ಪಕ್ಷ, ಸರ್ಕಾರದ ಪರ ನಿಲ್ಲಬೇಕು. ನಾವು ಅನೇಕ ಜನಪರ ಕೆಲಸ ಮಾಡುತ್ತಿದ್ದೇವೆ. ನಿಮ್ಮ ಮಕ್ಕಳನ್ನು ವಿದ್ಯಾವಂತರಾಗಿ ಮಾಡುತ್ತಿದ್ದೇವೆ. ನೂರಕ್ಕೆ ನೂರರಷ್ಟು ಮಕ್ಕಳು ವಿದ್ಯಾವಂತರಾಗಬೇಕು. ನೀವೆಲ್ಲ ವಿದ್ಯಾವಂತರಾದರೆ ಬಿಆರ್​ ಅಂಬೇಡ್ಕರ್, ಬುದ್ಧ, ಬಸವಣ್ಣ ಹೇಳಿದಂತೆ ಸಮಾಜ ನಿರ್ಮಾಣವಾಗುತ್ತದೆ. ಸಂವಿಧಾನದ ಆಶಯ ಈಡೇರಿಕೆಗೆ ನೀವೆಲ್ಲ ವಿದ್ಯಾವಂತರಾಗಬೇಕು ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ: ಬೆಂಗಳೂರು ಮೆಟ್ರೋ ಹಳದಿ ಮಾರ್ಗ: ಮೂರು ಹೆಚ್ಚುವರಿ ಹೊಸ ಬೋಗಿಗಳ ರವಾನೆ

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಹೆಚ್ ಸಿ ಮಹದೇವಪ್ಪ, ಸಚಿವ ಭೈರತಿ ಸುರೇಶ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಭಾಗಿಯಾಗಿದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?