AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ 13 ವರ್ಷದ ಬಾಲಕನ ಕಿಡ್ನ್ಯಾಪ್​ ಮಾಡಿ ಕೊಲೆ: ಕಾರಿನ ಡಿಕ್ಕಿಯಲ್ಲಿ ಶವಕಂಡು ಪೊಲೀಸರಿಗೇ ಶಾಕ್​​!

ಹಣಕ್ಕಾಗಿ 13 ವರ್ಷದ ಬಾಲಕನನ್ನು ಅಪಹರಿಸಿ ಹಾಲೋಬ್ರಿಕ್ಸ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮೃತ ಬಾಲಕನ ಏರಿಯಾದ್ದೇ ನಿವಾಸಿಯಾಗಿರುವ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದು, ಘಟನೆ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.

ಹಣಕ್ಕಾಗಿ 13 ವರ್ಷದ ಬಾಲಕನ ಕಿಡ್ನ್ಯಾಪ್​ ಮಾಡಿ ಕೊಲೆ: ಕಾರಿನ ಡಿಕ್ಕಿಯಲ್ಲಿ ಶವಕಂಡು ಪೊಲೀಸರಿಗೇ ಶಾಕ್​​!
ಸಾಂದರ್ಭಿಕ ಚಿತ್ರImage Credit source: Getty Images
ಪ್ರದೀಪ್​ ಚಿಕ್ಕಾಟಿ
| Edited By: |

Updated on:Sep 18, 2026 | 10:33 AM

Share

ಬೆಂಗಳೂರು, ಸೆಪ್ಟೆಂಬರ್​​ 18: ಹಣಕ್ಕಾಗಿ 13 ವರ್ಷದ ಬಾಲಕನ ಕಿಡ್ನ್ಯಾಪ್​ ಮಾಡಿ ಕೊಲೆಗೈದಿರುವ ಅಮಾನವೀಯ ಘಟನೆ ಬೆಂಗಳೂರಲ್ಲಿ ನಡೆದಿದೆ. ಬಾಲಕ ಪ್ರಜ್ವಲ್​​ ಮೃತ ದುರ್ದೈವಿಯಾಗಿದ್ದು, ಪ್ರಕರಣ ಸಂಬಂಧ ಆರೋಪಿ ಭಾಸ್ಕರ್​​ ರೆಡ್ಡಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕ ಮತ್ತು ಆರೋಪಿ ಇಬ್ಬರೂ ಯಲಹಂಕದ ವಿನಾಯಕನಗರ ನಿವಾಸಿಗಳಾಗಿದ್ದಾರೆ. ಕೃತ್ಯ ಎಸಗುವ ವೇಳೆ ಆರೋಪಿ ಮದ್ಯದ ನಶೆಯಲ್ಲಿದ್ದ ಎಂಬುದೂ ತನಿಖೆ ವೇಳೆ ಗೊತ್ತಾಗಿದೆ.

ಪಟಾಕಿ ತರಬೇಕೆಂದು ಹೇಳಿ ಬಾಲಕ ಕರೆದೊಯ್ದಿದ್ದ ಆರೋಪಿ

ಗಣಪತಿ ಮೆರವಣಿಗೆಗೆ ಪಟಾಕಿ ತರಬೇಕೆಂದು ಹೇಳಿ ಆರೋಪಿ ಭಾಸ್ಕರ್ ರೆಡ್ಡಿ ಮೊನ್ನೆ ಸಂಜೆ ಬಾಲಕ ಪ್ರಜ್ವಲ್​​ನ ಕರೆದೊಯ್ದಿದ್ದ. ಆದರೆ ಕಾರಿನಲ್ಲಿ ಪ್ರಜ್ವಲ್​ನನ್ನು ಇಟ್ಟುಕೊಂಡು ಹಣಕ್ಕಾಗಿ ಆತನ ಮನೆಯವರ ಬಳಿ ಬೇಡಿಕೆ ಇಟ್ಟಿದ್ದ. ಬಾಲಕನಿಂದಲೂ ವಿಡಿಯೋ ಮಾಡಿಸಿ ಪೋಷಕರಿಗೆ ಬೆದರಿಕೆ ಹಾಕಿದ್ದ. ಆದರೆ ಎಣ್ಣೆ ಮತ್ತಿನಲ್ಲಿದ್ದ ಭಾಸ್ಕರ್​​ ಹಾಲೋಬ್ರಿಕ್ಸ್​ನಿಂದ ಹೊಡೆದು ಕಾರಿನಲ್ಲೇ ಬಾಲಕನಿಗೆ ಹೊಡೆದು ಕೊಲೆ ಮಾಡಿದ್ದಾನೆ. ಕೊಲೆ ನಂತರ ಬಾಲಕನ ಶವವನ್ನು ಕಾರಿನ ಡಿಕ್ಕಿಯಲ್ಲಿಟ್ಟುಕೊಂಡು ಎಸ್ಕೇಪ್ ಆಗಲು ಯತ್ನಿಸಿದ್ದ ಎನ್ನಲಾಗಿದೆ.

LIVE TV

ಇದನ್ನೂ ಓದಿ: 8 ಲಕ್ಷ ರೂ. ಲಂಚ ಪಡೆಯುವಾಗಲೇ ಬೆಂಗಳೂರಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

ಕಾರಿನ ಡಿಕ್ಕಿಯಲ್ಲಿ ಶವಕಂಡು ಪೊಲೀಸರೇ ಶಾಕ್​

ಆಂಧ್ರಪ್ರದೇಶದ ಕಡೆ ಎಸ್ಕೇಪ್ ಆಗ್ತಿದ್ದ ಆರೋಪಿ ಭಾಸ್ಕರ್ ರೆಡ್ಡಿ, ಈ ವೇಳೆ ಗಾಬರಿಯಲ್ಲಿ ಗೋಡೆಗೆ ಕಾರು ಡಿಕ್ಕಿ ಹೊಡೆದಿದ್ದಾನೆ. ಬಳಿಕ ಬಳ್ಳಾರಿ ಸರ್ವೀಸ್ ರಸ್ತೆಯಲ್ಲಿ ಸರಣಿ ಅಪಘಾತ ಮಾಡಿ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾನೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದ ಚಿಕ್ಕಜಾಲ ಪೊಲೀಸರು ಕಾರು ಪರಿಶೀಲನೆ ಮಾಡುವಾಗ ಡಿಕ್ಕಿ ಓಪನ್ ಮಾಡಿದ್ದಾರೆ. ಈ ವೇಳೆ ಕಾರಿನ ಡಿಕ್ಕಿಯಲ್ಲಿ ಬಾಲಕನ​ ಶವ ನೋಡಿ ಪೊಲೀಸರೇ ಅರೆ ಕ್ಷಣ ಶಾಕ್ ಆಗಿದ್ದಾರೆ. ಈ ಬಗ್ಗೆ ವಿಚಾರಣೆ ವೇಳೆ ಆರೋಪಿ ಭಾಸ್ಕರ್ ರೆಡ್ಡಿ ಅಪಘಾತದ ನಾಟಕವಾಡಿದ್ದ. ದಾರಿಯಲ್ಲಿ ಬರುವಾಗ ಬಾಲಕ ಕಾರಿಗೆ ಅಡ್ಡ ಸಿಕ್ಕಿ ಮೃತಪಟ್ಟಿದ್ದ. ತನ್ನ ಗೆಳೆಯನ ಸೂಚನೆಯಂತೆ ಆಂಧ್ರದ ಕಡೆ ಮೃತದೇಹದ ಜೊತೆಗೆ ಹೋಗ್ತಿದ್ದೆ ಎಂದು ಬುರುಡೆ ಬಿಟ್ಟಿದ್ದ.

ಆದರೆ ಪ್ರಾಥಮಿಕ ತನಿಖೆಯಲ್ಲಿ ಭಾಸ್ಕರ್​​ ರೆಡ್ಡಿಯೇ ಬಾಲಕನ ಕೊಲೆ ಮಾಡಿರುವುದು ಪತ್ತೆಯಾಗಿದೆ. ಹೀಗಾಗಿ ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪರಾರಿಯಾಗಿರುವ ಮತ್ತೋರ್ವ ಆರೋಪಿ ಏಳುಕುಂಡಲವಾಡಗಾಗಿ ಚಿಕ್ಕಜಾಲ ಪೊಲೀಸರಿಂದ ಹುಡುಕಾಟ ಮುಂದುವರಿದಿದ್ದು, ಇನ್ನಷ್ಟು ಮಾಹಿತಿ ಪೊಲೀಸರಿಂದ ಹೆಚ್ಚಿನ ತನಿಖೆ ಬಳಿಕವೇ ಗೊತ್ತಾಗಬೇಕಿದೆ. ಆದರೆ ಈ ದುರುಳರ ಹಣದಾಯಕ್ಕೆ ಬಾಳಿ ಬದುಕಬೇಕಿದ್ದ ಬಾಲಕನ ಉಸಿರು ನಿಂತಿರುವುದು ನಿಜಕ್ಕೂ ದುರ್ದೈವವೇ ಸರಿ ಎಂಬ ಮಾತುಗಳು ಕೇಳಿಬಂದಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 9:47 am, Fri, 18 September 26

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’