ಸಾವಿನಲ್ಲೂ ಸಾರ್ಥಕತೆ ಮೆರದ ಕೃತಿ: 9 ಜನರ ಪ್ರಾಣ ಉಳಿಸಿದ 14 ವರ್ಷದ ಬಾಲಕಿ

ಆಟ ಆಡುವಾಗ ಟೆರೇಸ್ ಮೇಲಿಂದ ಬಿದ್ದು ಮೆದುಳು ನಿಷ್ಕ್ರಯಗೊಂಡಿದ್ದ 14 ವರ್ಷ ಮಗಳ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರದಿದ್ದಾರೆ.

ಸಾವಿನಲ್ಲೂ ಸಾರ್ಥಕತೆ ಮೆರದ ಕೃತಿ: 9 ಜನರ ಪ್ರಾಣ ಉಳಿಸಿದ 14 ವರ್ಷದ ಬಾಲಕಿ
ಅಂಗಾಂಗ ದಾನ ಮಾಡಿದ ಕೃತಿ
Follow us
ವಿವೇಕ ಬಿರಾದಾರ
|

Updated on: May 31, 2023 | 1:57 PM

ಬೆಂಗಳೂರು: ಆಟ ಆಡುವಾಗ ಟೆರೇಸ್ ಮೇಲಿಂದ ಬಿದ್ದು ಮೆದುಳು ನಿಷ್ಕ್ರಿಯಗೊಂಡಿದ್ದ (Brain Dead) 14 ವರ್ಷ ಮಗಳ ಅಂಗಾಂಗಗಳನ್ನು ದಾನ (Organs Donet) ಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರದಿದ್ದಾರೆ. ಕೃತಿ ಜೈನ್‌ ಮೃತ ಬಾಲಕಿ. ವೀರೇಂದ್ರ ಕುಮಾರ್‌ ಜೈನ್‌ ಮತ್ತು ಮೋನಿಕಾ ವೀರೇಂದ್ರ ಕುಮಾರ್‌ ಜೈನ್‌ ದಂಪತಿಯ ಪ್ರೀತಿಯ ಮಗಳು ಕೃತಿ ಜೈನ್‌ (14) ಬಾಲ್ಡ್‌ವಿನ್‌ ಬಾಲಕಿಯರ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದಳು. ಬಾಲಕಿ ಮೇ 24 ರಂದು ಸಂಜೆ ನಗರ ಕಾಟನ್‌ಪೇಟೆಯಲ್ಲಿರುವ ತನ್ನ ಕುಟುಂಬದ ಮನೆಯ ಟೆರೇಸ್‌ನಲ್ಲಿ ತನ್ನ ಸೋದರಸಂಬಂಧಿಗಳೊಂದಿಗೆ ಆಟವಾಡುತ್ತಿದ್ದಳು.

ಈ ವೇಳೆ ಕೃತಿ 8 ರಿಂದ 10 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದಾಳೆ. ತಕ್ಷಣವೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ತೀರ್ವವಾಗಿ ಗಾಯಗೊಂಡಿದ್ದ ಕೃತಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೃತಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದೆ ಎಂದು ಮೇ 28 ರಂದು ಬಿಜಿಎಸ್​ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯರು ಪೋಷಕರಿಗೆ ತಿಳಿಸಿದ್ದಾರೆ.

ಬಳಿಕ ಪೊಷಕರು ಕೃತಿಯ ಅಂಗಾಗಳನ್ನು ದಾನ ಮಾಡಲು ನಿಶ್ಚಯಿಸಿದ್ದಾರೆ. ನಂತರ ಬಿಜಿಎಸ್​​ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯು ಕೃತಿಯ ಶ್ವಾಸಕೋಶಗಳು, ಯಕೃತ್ತು, ಮೂತ್ರಪಿಂಡಗಳು, ಹೃದಯ ಕವಾಟಗಳು ಮತ್ತು ಕಾರ್ನಿಯಾಗಳನ್ನು ಯಶಸ್ವಿಯಾಗಿ ಕಸಿ ಮಾಡಿದ್ದಾರೆ. ಶ್ವಾಸಕೋಶವನ್ನು ಚೆನ್ನೈಗೆ ಕಳಸಲಾಯಿತು. ಉಳಿದ ಅಂಗಗಳನ್ನು ರಾಜ್ಯದ ವಿವಿಧ ರೋಗಿಗಳಿಗೆ ಅಳವಡಿಸಲಾಗಿದೆ. ಒಟ್ಟಿನಲ್ಲಿ 9 ರೋಗಿಗಳ ಪ್ರಾಣ ಉಳಿದಿದೆ.

ಈ ಬಗ್ಗೆ ಬಿಜಿಎಸ್ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯ ಮುಖ್ಯ ಮುಖ್ಯ ಶೋಕ ಸಮಾಲೋಚಕಿ ಮತ್ತು ಕಸಿ ಸಂವಾಹಕಿ ಸರಳಾ ಅನಂತರಾಜ್ ಮಾತನಾಡಿ ಅವರು ಜೈನ ಕುಟುಂಬಕ್ಕೆ ಕೃತಜ್ಞತೆ ಸಲ್ಲಿಸಿದರು. ಇಂತಹ ದುರಂತದ ಸಂದರ್ಭದಲ್ಲಿ ಕುಟುಂಬದ ಉದಾರತೆ ಗಮನಾರ್ಹವಾದುದು. ಕೃತಿಯ ಅಂಗಾಂಗಳ ಮೂಲಕ 9 ಜೀವಗಳ ಪ್ರಾಣ ಉಳಿದಿದೆ ಎಂದು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪದೇ ಪದೇ ಹಾವುಗಳು ಕಣ್ಣಿಗೆ ಕಾಣಿಸುತ್ತಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಪದೇ ಪದೇ ಹಾವುಗಳು ಕಣ್ಣಿಗೆ ಕಾಣಿಸುತ್ತಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಕೊಂಡುಕೊಳ್ಳುವ ಯೋಗವಿದೆ
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಕೊಂಡುಕೊಳ್ಳುವ ಯೋಗವಿದೆ
4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ
4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ
ರಿಲ್ಯಾಕ್ಸ್ ಮೂಡ್​ನಲ್ಲಿರುವ ಕಾಡಾನೆ ಹಿಂಡಿನ ದೃಶ್ಯ ಡ್ರೋನ್​ನಲ್ಲಿ ಸೆರೆ​
ರಿಲ್ಯಾಕ್ಸ್ ಮೂಡ್​ನಲ್ಲಿರುವ ಕಾಡಾನೆ ಹಿಂಡಿನ ದೃಶ್ಯ ಡ್ರೋನ್​ನಲ್ಲಿ ಸೆರೆ​
ನನ್ನನ್ನು ಕೆಳಗಿಳಿಸುವ ಪ್ರಯತ್ನಗಳಿಗೆ ಜನರೇ ಉತ್ತರ ನೀಡಬೇಕು: ಸಿದ್ದರಾಮಯ್ಯ
ನನ್ನನ್ನು ಕೆಳಗಿಳಿಸುವ ಪ್ರಯತ್ನಗಳಿಗೆ ಜನರೇ ಉತ್ತರ ನೀಡಬೇಕು: ಸಿದ್ದರಾಮಯ್ಯ
ಜೋಡಿ ಬದಲಾಯಿಸಲು ಅನುಷಾ ರೈಗೆ ಆಫರ್​ ನೀಡಿದ ಬಿಗ್ ಬಾಸ್; ಕಾದಿದೆ ಟ್ವಿಸ್ಟ್
ಜೋಡಿ ಬದಲಾಯಿಸಲು ಅನುಷಾ ರೈಗೆ ಆಫರ್​ ನೀಡಿದ ಬಿಗ್ ಬಾಸ್; ಕಾದಿದೆ ಟ್ವಿಸ್ಟ್
ಕಾಮಗಾರಿಗಳಲ್ಲಿ ಮೀಸಲಾತಿಯ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ: ಖರ್ಗೆ
ಕಾಮಗಾರಿಗಳಲ್ಲಿ ಮೀಸಲಾತಿಯ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ: ಖರ್ಗೆ
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗಲೇ ಹೃದಯಾಘಾತದಿಂದ ಸಾವು!
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗಲೇ ಹೃದಯಾಘಾತದಿಂದ ಸಾವು!
ಮೈಸೂರಿನ ಎಲ್ಲ ಕಾರ್ಯಕ್ರಮಗಳಲ್ಲಿ ತಂದೆಯನ್ನು ಹಿಂಬಾಲಿಸುತ್ತಿರುವ ಯತೀಂದ್ರ
ಮೈಸೂರಿನ ಎಲ್ಲ ಕಾರ್ಯಕ್ರಮಗಳಲ್ಲಿ ತಂದೆಯನ್ನು ಹಿಂಬಾಲಿಸುತ್ತಿರುವ ಯತೀಂದ್ರ
ಮುಳ್ಳಯ್ಯನಗಿರಿಯಲ್ಲಿ ಎಣ್ಣೆ ಪಾರ್ಟಿ ಮಾಡಿ ಪ್ರವಾಸಿಗರ ಹುಚ್ಚಾಟ
ಮುಳ್ಳಯ್ಯನಗಿರಿಯಲ್ಲಿ ಎಣ್ಣೆ ಪಾರ್ಟಿ ಮಾಡಿ ಪ್ರವಾಸಿಗರ ಹುಚ್ಚಾಟ