ಲೋಕಸಭೆ ಚುನಾವಣೆ ಮತ ಎಣಿಕೆ: ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

| Updated By: ರಮೇಶ್ ಬಿ. ಜವಳಗೇರಾ

Updated on: May 27, 2024 | 10:33 PM

ಜೂನ್ 4ರಂದು ಲೋಕಸಭಾ ಚುನಾವಣೆ ಮತೆಎಣಿಕೆ ಕಾರ್ಯ ನಡೆಯಲಿದೆ. ಹೀಗಾಗಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಲೋಕಸಭೆ ಚುನಾವಣೆ ಮತ ಎಣಿಕೆ: ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು, (ಮೇ 27): ಲೋಕಸಭೆ ಚುನಾವಣೆ ಮತ ಎಣಿಕೆ (Lok Sabha Election Results 2024) ಹಿನ್ನೆಲೆಯಲ್ಲಿ ಜೂನ್‌ 4ರಂದು ಬೆಂಗಳೂರು (Bengaluru) ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ (Prohibitory order) ಜಾರಿ ಮಾಡಿ ನಗರ ಪೊಲೀಸ್ ಕಮೀಷನರ್ ಬಿ. ದಯಾನಂದ್ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಏ. 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆದಿದೆ. ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಿಗೂ ಸಹ ಏಪ್ರಿಲ್ 26ರಂದು ಮತದಾನ ನಡೆದಿದ್ದು, ಮತಯಂತ್ರಗಳನ್ನು ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು, ವಿಠಲ್ ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಹಾಗೂ ಜಯನಗರದ ಎಸ್.ಎಸ್.ಎಂ.ಆರ್.ವಿ. ಕಾಲೇಜಿನಲ್ಲಿ ಇರಿಸಲಾಗಿದೆ. ಇನ್ನು ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೂ.4ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಇದನ್ನೂ ಓದಿ: ಮದ್ಯಪ್ರಿಯರಿಗೆ ಶಾಕ್​! ಅಯ್ಯೋ, ಜೂನ್ ಮೊದಲ ವಾರ ಎಣ್ಣೆ ಸಿಗಲ್ಲ

ಮತ ಎಣಿಕೆ ನಡೆಯುವ ಸಮಯದಲ್ಲಿ ಕೆಲ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು, ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಪರ, ವಿರುದ್ಧ ಪ್ರತಿಭಟನೆ ನಡೆಸಿ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ನಷ್ಟವುಂಟುಮಾಡುವ ಸಾಧ್ಯತೆಗಳು ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್​ ಮಾಡಲಾಗಿದೆ.

ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಯಾವುದೇ ಮಾರಕಾಸ್ತ್ರಗಳೊಂದಿಗೆ ತಿರುಗಾಡಬಾರದು, ಬ್ಯಾನರ್‌ಗಳು ಹಾಕುವಂತಿಲ್ಲ,‌ ಪಟಾಕಿ ಸಿಡಿಸುವಂತಿಲ್ಲ. ಹಾಗೆಯೇ ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ ಸೇರಿದಂತೆ ಒಟ್ಟು ಹನ್ನೆರಡು ಷರತ್ತು ಗಳನ್ನು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ