Bomb Threat: ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ!

Bengaluru Schools Bomb threat: ಬೆಂಗಳೂರಿನಲ್ಲಿ 15 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಕಿಡಿಕೇಡಿಗಳು ಇಮೇಲ್​ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. ವಿಷಯ ತಿಳಿದಯುತ್ತಿದ್ದಂತೆಯೇ ಶಾಲೆಗೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಸಹ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

Bomb Threat: ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ!
ಪ್ರಾತಿನಿಧಿಕ ಚಿತ್ರ
Follow us
Shivaprasad
| Updated By: ರಮೇಶ್ ಬಿ. ಜವಳಗೇರಾ

Updated on:Dec 01, 2023 | 10:32 AM

ಬೆಂಗಳೂರು, (ಡಿಸೆಂಬರ್ 01): ಸಿಲಿಕಾನ್ ಸಿಟಿ ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ(Bomb Threat) ಹಾಕಲಾಗಿದೆ. ಬೆಂಗಳೂರು, (ಡಿಸೆಂಬರ್ 01): ಸಿಲಿಕಾನ್ ಸಿಟಿ ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಬಸವೇಶ್ವರ ನಗರದ ಖಾಸಗಿ ಶಾಲೆಗಳಿಗೆ ಹಾಗೂ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗೂ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಇನ್ನು ಆತಂಕಗೊಂಡ ಪೋಷಕರು ಶಾಲೆ ಬಳಿ ಓಡೋಡಿ ಬಂದು ತಮ್ಮ-ತಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ.

ಕಳೆದ 1 ವರ್ಷದಿಂದ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.  ಕಳೆದ ವರ್ಷ ಒಂದೇ ದಿನ 30 ಶಾಲೆಗಳಿಗೆ ಇ-ಮೇಲ್ ಬೆದರಿಕೆ ಹಾಕಲಾಗಿತ್ತು. ಆದರೂ ಸಹ ಈವರೆಗೂ ಬಾಂಬ್ ಬೆದರಿಕೆ ಹಾಕಿರುವವರ ಬಂಧನವಾಗಿಲ್ಲ. ಇದೀಗ ಮತ್ತೆ ಅದೇ ಚಾಳಿ ಮುಂದುವರೆಸಿದ್ದಾರೆ. ಇನ್ನು ಇ-ಮೇಲ್ ಬಾಂಬ್​​​ ಬೆದರಿಕೆ ಸಂದೇಶ ಬಂದ ಹಿನ್ನೆಲೆಯುಲ್ಲಿ ಸದಾಶಿವನಗರದಲ್ಲಿರುವ ನೀವ್ ಅಕಾಡೆಮಿ ಶಾಲೆಗೆ ರಜೆ ನೀಡಲಾಗಿದೆ. ನೀವ್ ಅಕಾಡೆಮಿ ಶಾಲೆಗೆ ಇಂದು ಆಡಳಿತ ಮಂಡಳಿ ರಜೆ ಘೋಷಿಸಿದೆ.

ಇದನ್ನೂ ಓದಿ: ಬೆಂಗಳೂರು: ಕೆಲಸದಿಂದ ತೆಗೆದಿದ್ದಕ್ಕೆ ಕಂಪನಿಗೆ ಯುವತಿಯಿಂದ ಬಾಂಬ್ ಬೆದರಿಕೆ ಕರೆ, ಮುಂದೇನಾಯ್ತು?

ಹುಸಿ ಬಾಂಬ್ ಬೆದರಿಕೆ ಎಂದ ನಗರ ಪೊಲೀಸ್ ಆಯುಕ್ತರು

ಇನ್ನು ಈ ಬಾಂಬ್ ಬೆದರಿಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದಾರೆ. ಶಾಲೆಗಳಿಗೆ ಬಾಂಬ್ ಪತ್ತೆ ದಳ, ನಿಷ್ಕ್ರಿಯ ದಳವನ್ನು ಕಳಿಸಿದ್ದೇವೆ. ಬೆದರಿಕೆ ಬಂದಿರುವ ಶಾಲೆಗಳಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಾರೆ. ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಶಾಲೆಗೆ ಡಿಕೆ ಶಿವಕುಮಾರ್ ಭೇಟಿ

ಮಾಧ್ಯಮಗಳಲ್ಲಿನ ಸುದ್ದಿ ನೋಡಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸದಾಶಿವನಗರದಲ್ಲಿರುವ ನ್ಯೂ ಅಕಾಡೆಮಿ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿನ ಸುದ್ದಿ ನೋಡಿ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದಿರುವೆ. ಮನೆಯ ಬಳಿಯೇ ಇರುವ ಶಾಲೆ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಗರ ಪೊಲೀಸ್ ಕಮಿಷನರ್​ ಬಳಿಯೂ ಮಾಹಿತಿ ಪಡೆದಿದ್ದೇನೆ. ಯಾರು ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:48 am, Fri, 1 December 23

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್