2016ರ ಬಂದ್​ ವೇಳೆ ಗಲಾಟೆ ಮಾಡಿದ್ದ ಕೆಲ ರೌಡಿಶೀಟರ್​ ಸೇರಿ 150 ಜನ ಪೊಲೀಸ್​​ ವಶಕ್ಕೆ

| Updated By: ರಮೇಶ್ ಬಿ. ಜವಳಗೇರಾ

Updated on: Sep 29, 2023 | 7:49 AM

ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಅಖಂಡ ಕರ್ನಾಟಕ ಬಂದ್​ ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಇದಕ್ಕೆ ನಿನ್ನೆ (ಸೆ.28 ರಾತ್ರಿಯೇ ಕೆಲ ರೌಡಿಶೀಟರ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

2016ರ ಬಂದ್​ ವೇಳೆ ಗಲಾಟೆ ಮಾಡಿದ್ದ ಕೆಲ ರೌಡಿಶೀಟರ್​ ಸೇರಿ 150 ಜನ ಪೊಲೀಸ್​​ ವಶಕ್ಕೆ
ಬೆಂಗಳೂರು ಪೊಲೀಸ್
Follow us on

ಬೆಂಗಳೂರು, (ಸೆಪ್ಟೆಂಬರ್ 29): ತಮಿಳುನಾಡಿಗೆ(Tamil Nadu) ಕಾವೇರಿ ನೀರು(Cauvery Water Dispute) ಹರಿಸುತ್ತಿರುವುದನ್ನು ವಿರೋಧಿ ಕನ್ನಡ ಪರ ಸಂಘಟನೆಗಳು ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಕರ್ನಾಟಕ ಬಂದ್​ ಆಚರಿಸುತ್ತಿದೆ. ಹೀಗಾಗಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಪೊಲೀಸರು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು, ಬೆಂಗಳೂರಿನಲ್ಲಿ ನಿನ್ನೆ(ಸೆ.28) ರಾತ್ರಿಯೇ 150 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

2016ರಲ್ಲಿ ಕಾವೇರಿ ನೀರಿಗಾಗಿ ನೀಡಿದ್ದ ಬಂದ್​ ವೇಳೆ ಗಲಾಟೆ ಮಾಡಿದ್ದವರು ಹಾಗೂ ಕೆಲ ರೌಡಿಶೀಟರ್​ಗಳ ಸೇರಿದಂತೆ ಒಟ್ಟು 150 ಜನರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 2016ರಲ್ಲಿ ಕಾವೇರಿ ನೀರಿಗಾಗಿ ಕರೆ ನೀಡಿದ್ದ ಬಂದ್​​ ವೇಳೆ ಕಲ್ಲು ತೂರಿ, ಬೆಂಕಿ ಹಚ್ಚಿ ಗಲಾಟೆ ಮಾಡಿದ್ದರು. ಹೀಗಾಗಿ ಇಂದಿನ ಬಂದ್​​ ವೇಳೆ ಆ ರೀತಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ನಿನ್ನೆ ರಾತ್ರಿ ಹಲವು ರೌಡಿಶೀಟರ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Karnataka Bandh Live: ಸಿಎಂ ನಿವಾಸಕ್ಕೆ ಸಂಪರ್ಕ ಕಲ್ಪಿಸುವ ಸ್ಥಳಗಳಲ್ಲಿ ಪೊಲೀಸ್ ಹೈಅಲರ್ಟ್

ಮೊನ್ನೆ ಅಂದ್ರೆ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್​ ವೇಳೆಯಲ್ಲೂ ಸಹ ಪೊಲೀಸರು ಕೆಲವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇನ್ನು ಬೆಂಗಳೂರಿನಲ್ಲಿ ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು 144 ಸೆಕ್ಷನ್ ಜಾರಿ ಮಾಡಿದ್ದಾರೆ. ನಿನ್ನೆ (ಗುರುವಾರ) ಮಧ್ಯರಾತ್ರಿಯಿಂದಲೇ ಜಾರಿಯಲ್ಲಿದ್ದು, ಯಾವುದೇ ಪ್ರತಿಭಟನೆ, ರ್ಯಾಲಿಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಆದರೂ ಸಹ ಕನ್ನಡ ಪರ ಸಂಘಟನೆಗಳು ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ರ್ಯಾಲಿ ಹಮ್ಮಿಕೊಂಡಿವೆ.

ಕರ್ನಾಟಕದ ಕ್ಷಣ ಕ್ಷಣದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ