ಕೆಎಸ್​ಆರ್​ಟಿಸಿ ಗೆ ಒಲಿದ 16 ರಾಷ್ಟ್ರ ಮಟ್ಟದ ಪ್ರಶಸ್ತಿಗಳು; ಇಲ್ಲಿದೆ ವಿವರ

ಕೆಎಸ್​ಆರ್​ಟಿಸಿ ಗೆ ರಾಷ್ಟ್ರ ಮಟ್ಟದ 8 ವೀಡಿಯಾ(ViDEA), 5 ಎಮ್ಕ್ಯೂಬ್(mCUBE) ಮತ್ತು 2 ಸ್ಕೋಚ್ ಆರ್ಡರ್ ಆಫ್ ಮೆರಿಟ್ ಹಾಗೂ 1 ಸ್ಕೋಚ್ ಪ್ರಶಸ್ತಿಗಳು ಲಭಿಸಿದ್ದು, ಇಂದು(ಶುಕ್ರವಾರ) ಗುರುಗಾಂವ್​ನಲ್ಲಿ ಪ್ರಧಾನ ಮಾಡಲಾಯಿತು. ಇನ್ನು ಸ್ಕೋಚ್ ಪ್ರಶಸ್ತಿ ಸಮಾರಂಭವು 2024 ಸೆಪ್ಟೆಂಬರ್ 21ರಂದು ನವದೆಹಲಿಯಲ್ಲಿ ನಡೆಯಲಿದೆ.

ಕೆಎಸ್​ಆರ್​ಟಿಸಿ ಗೆ ಒಲಿದ 16 ರಾಷ್ಟ್ರ ಮಟ್ಟದ ಪ್ರಶಸ್ತಿಗಳು; ಇಲ್ಲಿದೆ ವಿವರ
ಕೆಎಸ್​ಆರ್​ಟಿಸಿಗೆ ಒಲಿದ ರಾಷ್ಟ್ರ ಮಟ್ಟದ ಪ್ರಶಸ್ತಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Aug 30, 2024 | 9:14 PM

ಬೆಂಗಳೂರು, ಆ.30: ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ವು ಒಂದಿಲ್ಲೊಂದು ಸಾಧನೆಯ ಮೂಲಕ ಪ್ರಶಸ್ತಿಯನ್ನು ಮೂಡಿಗೇರಿಸಿಕೊಳ್ಳುತ್ತಲೇ ಇರುತ್ತದೆ. ಅದರಂತೆ ಇದೀಗ ಕೆಎಸ್​ಆರ್​ಟಿಸಿ ಗೆ ರಾಷ್ಟ್ರ ಮಟ್ಟದ 8 ವೀಡಿಯಾ (ViDEA), 5 ಎಮ್ಕ್ಯೂಬ್(mCUBE) ಮತ್ತು 2 ಸ್ಕೋಚ್ ಆರ್ಡರ್ ಆಫ್ ಮೆರಿಟ್ ಹಾಗೂ 1 ಸ್ಕೋಚ್ ಪ್ರಶಸ್ತಿಗಳು ಲಭಿಸಿದೆ.

ಈ ಕೆಳಗಿನ ವಿಭಾಗಗಳಲ್ಲಿ ವೀಡಿಯಾ ಪ್ರಶಸ್ತಿ ಪಡೆದುಕೊಂಡ ನಿಗಮ

  1. ಪಲ್ಲಕ್ಕಿ ಬ್ರಾಂಡಿಂಗ್ ಗಾಗಿ ಪ್ರಾಡಕ್ಟ್ ಪ್ಲೇಸ್ಮೆಂಟ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.
  2. ಅಶ್ವಮೇಧ ಬ್ರಾಂಡಿಂಗ್ ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ (ಆಫ್ಲೈನ್) ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.
  3. ಶಕ್ತಿ ಯೋಜನೆಗೆ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಪಾರಂಪರಿಕ ಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್.
  4. ಅಶ್ವಮೇಧ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಬಹುಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್.
  5. ಪಲ್ಲಕ್ಕಿ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಡಿಜಿಟಲ್ ಕ್ಯಾಂಪೇನ್ ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.
  6. ಅಂಬಾರಿ ಉತ್ಸವದ ಬ್ರಾಂಡಿಂಗ್ ಗಾಗಿ ಇನ್ಸ್ಟಾಗ್ರಾಮ್ ಕ್ಯಾಂಪೇನ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.
  7. ಅಶ್ವಮೇಧ ಬ್ರಾಂಡಿಂಗ್ ಗಾಗಿ ಮೊಬೈಲ್ ಮಾರ್ಕೆಟಿಂಗ್ ಕ್ಯಾಂಪೇನ್ – ಒಟ್ಟಾರೆ ಅತ್ಯುತ್ತಮ ವೀಡಿಯೊ ಕಂಟೆಂಟ್.
  8. ಶ್ರೇಷ್ಠ ವೀಡಿಯೊ ಕಂಟೆಂಟ್ ಬ್ರಾಂಡ್ಸ್ ಎಂಟರ್ಪ್ರೈಸ್ – ಕೆ ಎಸ್ ಆರ್ ಟಿ ಸಿ.

ಇದನ್ನೂ ಓದಿ:ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ, ನೌಕರರಿಗೆ ಒಂದು ಕೋಟಿ ಪರಿಹಾರ

ಎಮ್ಕ್ಯೂಬ್ ಪ್ರಶಸ್ತಿ ಗಳು ಈ ಕೆಳಕಂಡ ವಿಭಾಗಗಳಲ್ಲಿ

  1. ಬ್ರಾಂಡಿಂಗ್ ಗಾಗಿ ಶ್ರೇಷ್ಠ ಪಿಆರ್ ಕ್ಯಾಂಪೇನ್.
  2. ಬ್ರಾಂಡಿಂಗ್ ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ (ಆಫ್ಲೈನ್).
  3. ಪ್ರವಾಸ ಮತ್ತು ಪ್ರಯಾಣದ ಶ್ರೇಷ್ಠ ಎಟಿಎಲ್ ಕ್ಯಾಂಪೇನ್.
  4. ಶಕ್ತಿ ಯೋಜನೆಗಾಗಿ ಶ್ರೇಷ್ಠ ಬ್ರಾಂಡ್ ಕಂಟೆಂಟ್.
  5. ಬ್ರಾಂಡಿಂಗ್ ಗಾಗಿ ಶ್ರೇಷ್ಠ ಆನ್ಲೈನ್ ಪಿಆರ್ ಕ್ಯಾಂಪೇನ್.

ಇನ್ನು ನಿಗಮವು ಸಾರಿಗೆ ಸಂಜೀವಿನಿ- ನೌಕರರ ಹೃದಯ ರೋಗ ತಪಾಸಣೆಗಾಗಿ ಮತ್ತು ರಸ್ತೆ ಸುರಕ್ಷತೆ ಉಪಕ್ರಮ ಗಳಿಗಾಗಿ 2 ಸ್ಕೋಚ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಗಳನ್ನು ಮತ್ತು 1 ಸ್ಕೋಚ್ ಪ್ರಶಸ್ತಿಯನ್ನು ಪಡೆದಿದೆ. ViDEA ಪ್ರಶಸ್ತಿ ಮತ್ತು mCUBE ಪ್ರಶಸ್ತಿಗಳನ್ನು ಗುರುಗಾಂವ್​ನಲ್ಲಿ ಪ್ರಧಾನ ಮಾಡಲಾಯಿತು. ಸ್ಕೋಚ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಗಳನ್ನು ಆನ್ ಲೈನ್ ನಲ್ಲಿ ನೀಡಲಾಯಿತು. ಇನ್ನು ಸ್ಕೋಚ್ ಪ್ರಶಸ್ತಿ ಸಮಾರಂಭವು 2024 ಸೆಪ್ಟೆಂಬರ್ 21ರಂದು ನವದೆಹಲಿಯಲ್ಲಿ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:12 pm, Fri, 30 August 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ