ಕೆಎಸ್ಆರ್ಟಿಸಿ ಗೆ ಒಲಿದ 16 ರಾಷ್ಟ್ರ ಮಟ್ಟದ ಪ್ರಶಸ್ತಿಗಳು; ಇಲ್ಲಿದೆ ವಿವರ
ಕೆಎಸ್ಆರ್ಟಿಸಿ ಗೆ ರಾಷ್ಟ್ರ ಮಟ್ಟದ 8 ವೀಡಿಯಾ(ViDEA), 5 ಎಮ್ಕ್ಯೂಬ್(mCUBE) ಮತ್ತು 2 ಸ್ಕೋಚ್ ಆರ್ಡರ್ ಆಫ್ ಮೆರಿಟ್ ಹಾಗೂ 1 ಸ್ಕೋಚ್ ಪ್ರಶಸ್ತಿಗಳು ಲಭಿಸಿದ್ದು, ಇಂದು(ಶುಕ್ರವಾರ) ಗುರುಗಾಂವ್ನಲ್ಲಿ ಪ್ರಧಾನ ಮಾಡಲಾಯಿತು. ಇನ್ನು ಸ್ಕೋಚ್ ಪ್ರಶಸ್ತಿ ಸಮಾರಂಭವು 2024 ಸೆಪ್ಟೆಂಬರ್ 21ರಂದು ನವದೆಹಲಿಯಲ್ಲಿ ನಡೆಯಲಿದೆ.
ಕೆಎಸ್ಆರ್ಟಿಸಿಗೆ ಒಲಿದ ರಾಷ್ಟ್ರ ಮಟ್ಟದ ಪ್ರಶಸ್ತಿ
ಕಿರಣ್ ಹನುಮಂತ್ ಮಾದಾರ್
Updated on:
Aug 30, 2024 | 9:14 PM
ಬೆಂಗಳೂರು, ಆ.30: ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ವು ಒಂದಿಲ್ಲೊಂದು ಸಾಧನೆಯ ಮೂಲಕ ಪ್ರಶಸ್ತಿಯನ್ನು ಮೂಡಿಗೇರಿಸಿಕೊಳ್ಳುತ್ತಲೇ ಇರುತ್ತದೆ. ಅದರಂತೆ ಇದೀಗ ಕೆಎಸ್ಆರ್ಟಿಸಿ ಗೆ ರಾಷ್ಟ್ರ ಮಟ್ಟದ 8 ವೀಡಿಯಾ (ViDEA), 5 ಎಮ್ಕ್ಯೂಬ್(mCUBE) ಮತ್ತು 2 ಸ್ಕೋಚ್ ಆರ್ಡರ್ ಆಫ್ ಮೆರಿಟ್ ಹಾಗೂ 1 ಸ್ಕೋಚ್ ಪ್ರಶಸ್ತಿಗಳು ಲಭಿಸಿದೆ.
ಈ ಕೆಳಗಿನ ವಿಭಾಗಗಳಲ್ಲಿ ವೀಡಿಯಾ ಪ್ರಶಸ್ತಿ ಪಡೆದುಕೊಂಡ ನಿಗಮ
ಪಲ್ಲಕ್ಕಿ ಬ್ರಾಂಡಿಂಗ್ ಗಾಗಿ ಪ್ರಾಡಕ್ಟ್ ಪ್ಲೇಸ್ಮೆಂಟ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.
ಅಶ್ವಮೇಧ ಬ್ರಾಂಡಿಂಗ್ ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ (ಆಫ್ಲೈನ್) ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.
ಶಕ್ತಿ ಯೋಜನೆಗೆ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಪಾರಂಪರಿಕ ಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್.
ಅಶ್ವಮೇಧ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಬಹುಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್.
ಪಲ್ಲಕ್ಕಿ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಡಿಜಿಟಲ್ ಕ್ಯಾಂಪೇನ್ ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.
ಅಂಬಾರಿ ಉತ್ಸವದ ಬ್ರಾಂಡಿಂಗ್ ಗಾಗಿ ಇನ್ಸ್ಟಾಗ್ರಾಮ್ ಕ್ಯಾಂಪೇನ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.
ಅಶ್ವಮೇಧ ಬ್ರಾಂಡಿಂಗ್ ಗಾಗಿ ಮೊಬೈಲ್ ಮಾರ್ಕೆಟಿಂಗ್ ಕ್ಯಾಂಪೇನ್ – ಒಟ್ಟಾರೆ ಅತ್ಯುತ್ತಮ ವೀಡಿಯೊ ಕಂಟೆಂಟ್.
ಶ್ರೇಷ್ಠ ವೀಡಿಯೊ ಕಂಟೆಂಟ್ ಬ್ರಾಂಡ್ಸ್ ಎಂಟರ್ಪ್ರೈಸ್ – ಕೆ ಎಸ್ ಆರ್ ಟಿ ಸಿ.
ಬ್ರಾಂಡಿಂಗ್ ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ (ಆಫ್ಲೈನ್).
ಪ್ರವಾಸ ಮತ್ತು ಪ್ರಯಾಣದ ಶ್ರೇಷ್ಠ ಎಟಿಎಲ್ ಕ್ಯಾಂಪೇನ್.
ಶಕ್ತಿ ಯೋಜನೆಗಾಗಿ ಶ್ರೇಷ್ಠ ಬ್ರಾಂಡ್ ಕಂಟೆಂಟ್.
ಬ್ರಾಂಡಿಂಗ್ ಗಾಗಿ ಶ್ರೇಷ್ಠ ಆನ್ಲೈನ್ ಪಿಆರ್ ಕ್ಯಾಂಪೇನ್.
ಇನ್ನು ನಿಗಮವು ಸಾರಿಗೆ ಸಂಜೀವಿನಿ- ನೌಕರರ ಹೃದಯ ರೋಗ ತಪಾಸಣೆಗಾಗಿ ಮತ್ತು ರಸ್ತೆ ಸುರಕ್ಷತೆ ಉಪಕ್ರಮ ಗಳಿಗಾಗಿ 2 ಸ್ಕೋಚ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಗಳನ್ನು ಮತ್ತು 1 ಸ್ಕೋಚ್ ಪ್ರಶಸ್ತಿಯನ್ನು ಪಡೆದಿದೆ. ViDEA ಪ್ರಶಸ್ತಿ ಮತ್ತು mCUBE ಪ್ರಶಸ್ತಿಗಳನ್ನು ಗುರುಗಾಂವ್ನಲ್ಲಿ ಪ್ರಧಾನ ಮಾಡಲಾಯಿತು. ಸ್ಕೋಚ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಗಳನ್ನು ಆನ್ ಲೈನ್ ನಲ್ಲಿ ನೀಡಲಾಯಿತು. ಇನ್ನು ಸ್ಕೋಚ್ ಪ್ರಶಸ್ತಿ ಸಮಾರಂಭವು 2024 ಸೆಪ್ಟೆಂಬರ್ 21ರಂದು ನವದೆಹಲಿಯಲ್ಲಿ ನಡೆಯಲಿದೆ.
ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.