AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ 17 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣು, ಲಿಫ್ಟ್​ ಕುಸಿದುಬಿದ್ದು ಕಾರ್ಮಿಕ ಸಾವು

ಕನ್ಸ್ಟ್ರಕ್ಷನ್ ಲಿಫ್ಟ್​ ಕುಸಿದುಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ತಿಗಳರಪಾಳ್ಯದ ಅಪ್ನಾ ಮೆಡಿಕಲ್ ಪ್ರೈವೇಟ್​ ಲಿಮಿಟೆಡ್​ನಲ್ಲಿ ನಡೆದಿದೆ.

ಬೆಂಗಳೂರಲ್ಲಿ 17 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣು, ಲಿಫ್ಟ್​ ಕುಸಿದುಬಿದ್ದು ಕಾರ್ಮಿಕ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on: Dec 27, 2022 | 9:04 PM

Share

ಬೆಂಗಳೂರು: ನಗರದಲ್ಲಿ ಇತ್ತೀಚಿಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ವಯಸ್ಕರರೇ ಬಲಿಯಾಗುತ್ತಿರುವುದು ದುರದೃಷ್ಟಕರ. ಈಗ ಮತ್ತೆ ಬೆಂಗಳೂರಲ್ಲಿ 17 ವರ್ಷದ ಬಾಲಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ. ರಾಜಧಾನಿಯಲ್ಲೇ ಇನ್ನೊಂದೆಡೆ ಕನ್ಸ್ಟ್ರಕ್ಷನ್ ಲಿಫ್ಟ್​ ಕುಸಿದುಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬೆಂಗಳೂರಿನ ಬಸವೇಶ್ವರನಗರದ ಕಮಲಾನಗರದಲ್ಲಿ ಅಣ್ಣನ ಮನೆಯಲ್ಲಿ ನೇಣು ಬಿಗಿದುಕೊಂಡು 17 ವರ್ಷದ ರಕ್ಷಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿವಮೊಗ್ಗ ಮೂಲದ ರಕ್ಷಿತಾ ಅಣ್ಣನ ಜೊತೆಗೆ ವಾಸವಿದ್ದಳು. ಇತ್ತೀಚೆಗಷ್ಟೆ ರಕ್ಷಿತಾಗೆ ನಿಶ್ಚಿತಾರ್ಥ ಆಗಿತ್ತು. 18 ವರ್ಷ ತುಂಬಿದ ಬಳಿಕ ಮದುವೆ ಮಾಡೊ ಯೋಚನೆಯಲ್ಲಿದ್ದರು. ಅಷ್ಟರಲ್ಲಾಗಲೇ ಬಾಲಕಿ ರಕ್ಷಿತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಸವೇಶ್ವರನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಹಿಳೆಯ ಫೋಟೋ ಎಡಿಟ್​ ಮಾಡಿ ಆಕೆಯ ಸ್ನೇಹಿತರಿಗೆ ಕಳುಹಿಸುತ್ತಿದ್ದ ವಿಕೃತ ಮನಸ್ಥಿತಿಯ ಹ್ಯಾಕರ್​ ಬಂಧನ

ಕನ್ಸ್ಟ್ರಕ್ಷನ್ ಲಿಫ್ಟ್​ ಕುಸಿದುಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವು

ಕನ್ಸ್ಟ್ರಕ್ಷನ್ ಲಿಫ್ಟ್​ ಕುಸಿದುಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ತಿಗಳರಪಾಳ್ಯದ ಅಪ್ನಾ ಮೆಡಿಕಲ್ ಪ್ರೈವೇಟ್​ ಲಿಮಿಟೆಡ್​ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಕೂಲಿಕಾರ್ಮಿಕ ರಮೇಶ್(32) ಮೃತ ದುರ್ದೈವಿ. ಘಟನೆಯಲ್ಲಿ ಅನ್ಮೋಲ್, ನಿಶ್ಚಿತ್, ಪುನೀತ್, ಪ್ರದೀಪ್​ಗೆ ಎಂಬುವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು (ಡಿ.27) ಮಧ್ಯಾಹ್ನ ಮೆಡಿಕಲ್ ವೇರ್​ಹೌಸ್​ನಲ್ಲಿ ಕೆಲಸ ಮಾಡುತ್ತಿದ್ದ ಐವರು ಕಾರ್ಮಿಕರು, ಓಪನ್​ ಲೆಫ್ಟ್​ನಲ್ಲಿ ಔಷಧಿ ಸಾಗಿಸಿ ಕೆಳಕ್ಕೆ ಬರುತ್ತಿದ್ದ ವೇಳೆ ದುರಂತ ಸಂಭವಿಸಿದೆ. ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅವಿವಾಹಿತನ ಜೊತೆ ವಿವಾಹಿತೆಯ ಆಕ್ರಮ ಸಂಬಂಧ, ಕೊನೆಗೆ ಆ ವಿವಾಹಿತೆಯ ಕಾಟ ತಾಳದೆ ಹತ್ಯೆ ಮಾಡಿದ!

ಬಸ್​ ಹಾಗೂ ಕಾರ್​​ ನಡುವೆ ಅಪಘಾತ ಸಂಭವಿಸಿ ದಂಪತಿ ಸಾವು

ಹಾವೇರಿ: ಬಸ್​ ಹಾಗೂ ಕಾರ್​​ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಹುಣಸಿಕಟ್ಟೆ ಕ್ರಾಸ್ ಬಳಿ ನಡೆದಿದೆ. ಕೇರಳ ಮೂಲದ ಮೊಹಮ್ಮದ್‌(68), ಆಯಿಷಾ(60) ಮೃತ ದಂಪತಿಗಳು. ಪತಿ ಮೊಹಮ್ಮದ್‌ ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಪತ್ನಿ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ನಿಧನ ಹೊಂದಿದ್ದಾರೆ. ಕಾರಿನಲ್ಲಿದ್ದ ಉಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಂಪತಿ ಕಾರಿನಲ್ಲಿ ಕೇರಳದಿಂದ ಗದಗ ಜಿಲ್ಲೆಯ ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಹಾನಗಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ