ರಾಜ್ಯದಲ್ಲಿ ಇಂದು 173 ಜನರಿಗೆ ಕೊರೊನಾ ಸೋಂಕು ದೃಢ; ಬೆಂಗಳೂರಿನಲ್ಲಿಯೇ ಇಬ್ಬರು ಬಲಿ

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 8349 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 173 ಜನರಿಗೆ ಕೊರೊನಾ ಸೋಂಕು(Corona Virus) ದೃಢಪಟ್ಟಿದೆ. ಅದರಲ್ಲಿ ಬೆಂಗಳೂರಿನಲ್ಲಿಯೇ  82 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 173 ಜನರಿಗೆ ಕೊರೊನಾ ಸೋಂಕು ದೃಢ; ಬೆಂಗಳೂರಿನಲ್ಲಿಯೇ ಇಬ್ಬರು ಬಲಿ
ಕೊರೊನಾ ಕೇಸ್​
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 29, 2023 | 8:27 PM

ಬೆಂಗಳೂರು, ಡಿ.29: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 8349 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 173 ಜನರಿಗೆ ಕೊರೊನಾ ಸೋಂಕು(Corona Virus) ದೃಢಪಟ್ಟಿದೆ. ಅದರಲ್ಲಿ ಬೆಂಗಳೂರಿನಲ್ಲಿಯೇ  82 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 2.07 ರಷ್ಟಿದ್ದು, ಒಟ್ಟು 702 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜೊತೆಗೆ 37 ಸೋಂಕಿತರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಆತಂಕ ಹೆಚ್ಚಿಸಿದ ಒಮಿಕ್ರಾನ್ ರೂಪಾಂತರಿ  JN.1

ರಾಜ್ಯದಲ್ಲಿ ದಾಖಲಾಗುತ್ತಿರುವ ಹೊಸ ಕೊರೊನಾ ಪ್ರಕರಣಗಳಲ್ಲಿ ಶೇ 90 ರಷ್ಟು ಒಮಿಕ್ರಾನ್ ರೂಪಾಂತರಿ JN.1 ಅಂಶ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇದರಿಂದ ಆರೋಗ್ಯ ಇಲಾಖೆಗೂ ಟೆನ್ಷನ್ ಶುರುವಾಗಿದೆ. ಈ ಹಿನ್ನಲೆ 197 ಸ್ಯಾಂಪಲ್ಸ್​ಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಮಾಡಲು ಕಳುಹಿಸಲಾಗಿದೆ. ಸದ್ಯ ಬಂದಿರುವ 60 ಸ್ಯಾಂಪಲ್ಸ್​ಗಳ ವರದಿ ಪ್ರಕಾರ ಶೇ.50 ರಷ್ಟು ರೋಗಿಗಳಲ್ಲಿ ಉಪತಳಿ JN.1 ರೋಗದ ಅಂಶಗಳು ಕಂಡು ಬಂದಿವೆ.

ಇದನ್ನೂ ಓದಿ:ಕೊರೊನಾವೈರಸ್ ಜೆಎನ್​1 ಸೋಶಿಯೋ ಎಕಾನಮಿಕ್ ವೈರಸ್ ಎಂದ ತಜ್ಞರು: ತ್ಯಾಜ್ಯ ನೀರಿನ ಮೇಲೂ ನಿಗಾ!

ಇನ್ನು ಕೋವಿಡ್‌ನ ಜೆಎನ್.1 ರೂಪಾಂತರದ ಪ್ರಕರಣಗಳು ದೇಶದಲ್ಲಿ ಪ್ರತಿದಿನ ಹೆಚ್ಚಾಗುತ್ತಿವೆ. ಅದರಂತೆ ಗೋವಾದಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಜೊತೆಗೆ ಮಹಾರಾಷ್ಟ್ರ ಮತ್ತು ಕೇರಳದಲ್ಲಿಯೂ ಪ್ರಕರಣಗಳು ವರದಿಯಾಗಿವೆ. ಈ ಹೊಸ ರೂಪಾಂತರವು ಸಾಂಕ್ರಾಮಿಕವಾಗಿದೆ. ಆದರೆ, ಮಾರಣಾಂತಿಕವಲ್ಲ ಎಂದು ತಜ್ಞರು ಹೇಳುತ್ತಾರೆ. ಇನ್ನು ಡಿಸೆಂಬರ್ 15 ರಿಂದ ಇಲ್ಲಿಯವರೆಗೆ ರಾಜ್ಯದಲ್ಲಿ 12 ಜನರು ಕೊವಿಡ್​ಗೆ ಮೃತಪಟ್ಟಿದ್ದಾರೆ. ಜೊತೆಗೆ ಯಾವ ಕಾರಣಕ್ಕೆ ರೋಗಿ ಮೃತಪಟ್ಟಿದ್ದಾರೆ ಎಂಬ ಖಚಿತ ಮಾಹಿತಿ ಪಡೆಯಲು ಆರೋಗ್ಯ ಇಲಾಖೆ ಮುಂದಾಗಿದ್ದು, ಸಾವಿಗೆ ಕೊವಿಡ್ ಮುಖ್ಯ ಕಾರಣವಾಗಿತ್ತಾ ಎಂಬ ಮಾಹಿತಿ ಕಲೆ ಹಾಕಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು