ಬೆಂಗಳೂರಲ್ಲಿ 19 ಪೆಡ್ಲರ್‌ಗಳ ಬಂಧನ: 7 ಕೋಟಿ ರೂ. ಅಧಿಕ ಮೌಲ್ಯದ ಡ್ರಗ್ಸ್‌ ಜಪ್ತಿ

ರಾಜ್ಯ ವಿಧಾನಸಭೆ ಚುನಾವಣೆ ಕಾವು ಜೋರಾಗಿದ್ದು, ನಾಳೆ ಮತದಾನ ನಡೆಯಲಿದೆ. ಈ ಹಿನ್ನಲೆ ರಾಜ್ಯಾದ್ಯಂತ ಬೀಗಿ ಬಂದೋಬಸ್ತ್​ ಮಾಡಲಾಗಿದ್ದು, ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಮಧ್ಯೆ ಬೆಂಗಳೂರಿನಲ್ಲಿ ಸಿಸಿಬಿಯ ಮಾದಕ ದ್ರವ್ಯ ನಿಗ್ರಹದಳದಿಂದ ರಾಜ್ಯ, ಅಂತಾರಾಜ್ಯ, ಅಂತಾರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ಸ್ ಸೇರಿ 19 ಡ್ರಗ್ಸ್​​ ಪೆಡ್ಲರ್​​ಗಳನ್ನು ಬಂಧಿಸಿದ್ದಾರೆ.

ಬೆಂಗಳೂರಲ್ಲಿ 19 ಪೆಡ್ಲರ್‌ಗಳ ಬಂಧನ: 7 ಕೋಟಿ ರೂ. ಅಧಿಕ ಮೌಲ್ಯದ ಡ್ರಗ್ಸ್‌ ಜಪ್ತಿ
ಆರೋಪಿಗಳು
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 09, 2023 | 8:44 AM

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election) ಕಾವು ಜೋರಾಗಿದ್ದು, ನಾಳೆ ಮತದಾನ ನಡೆಯಲಿದೆ. ಈ ಹಿನ್ನಲೆ ರಾಜ್ಯಾದ್ಯಂತ ಬೀಗಿ ಬಂದೋಬಸ್ತ್​ ಮಾಡಲಾಗಿದ್ದು, ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಮಧ್ಯೆ ಬೆಂಗಳೂರಿನಲ್ಲಿ ಸಿಸಿಬಿ(CCB)ಯ ಮಾದಕ ದ್ರವ್ಯ ನಿಗ್ರಹದಳದಿಂದ ರಾಜ್ಯ, ಅಂತಾರಾಜ್ಯ, ಅಂತಾರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ಸ್ ಸೇರಿ 19 ಡ್ರಗ್ಸ್​​ ಪೆಡ್ಲರ್​​ಗಳನ್ನು ಬಂಧಿಸಿದ್ದಾರೆ. ನೈಜೀರಿಯಾದ ಇಬ್ಬರು, ಕೇರಳದ 12 ಜನ, ಪಶ್ಚಿಮ ಬಂಗಾಳದ ಓರ್ವ ಹಾಗೂ ಬೆಂಗಳೂರಿನ ಇಬ್ಬರು ಸೇರಿ ಒಟ್ಟು 19 ಅರೋಪಿಗಳನ್ನ ಅರೆಸ್ಟ್ ಮಾಡಲಾಗಿದ್ದು, ಬಂಧಿತರಿಂದ 7 ಕೋಟಿ 6 ಲಕ್ಷ ರೂ ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿದ್ದಾರೆ.

ಚುನಾವಣೆ ಹಿನ್ನೆಲೆ ಸ್ಲಂಗಳಲ್ಲಿ ಡ್ರಗ್ಸ್​ ಬಳಕೆ ಆಗುವ ಬಗ್ಗೆ ಮಾಹಿತಿ ಬಂದಿದ್ದು, ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಅಶೋಕನಗರ, ಕೆ.ಆರ್​.ಪುರ, ಆರ್​.ಟಿ.ನಗರ, ವಿಲ್ಸನ್​ಗಾರ್ಡನ್​, ಬಾಣಸವಾಡಿ, ಹೆಣ್ಣೂರು, ಯಲಹಂಕ, ಪುಲಿಕೇಶಿನಗರ, ಸಿದ್ದಾಪುರ ಸೇರಿ 10 ಕಡೆ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ವಶಕ್ಕೆ ಪಡೆದ ಎಂಡಿಎಂಎ, ಹಾಶ್ ಆಯಿಲ್, ಗಾಂಜಾ ಸೇರಿ ಸಿಂಥಟಿಕ್ ಡ್ರಗ್ಸ್ ಹಾಗೂ ಕೇಸ್ ಬಗ್ಗೆ ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಅವರು ಚುನಾವಣೆ ಆಯೋಗಕ್ಕೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಚಂದನವನದಲ್ಲಿ ಡ್ರಗ್ಸ್ ಬಿರುಗಾಳಿ ಮಧ್ಯೆ 3 ಫಾರಿನ್​ Drug​ ಪೆಡ್ಲರ್ಸ್ ಅರೆಸ್ಟ್​

ಬೆಂಗಳೂರಿನಲ್ಲಿ ನಟೋರಿಯಸ್ ವಿದೇಶಿ ಫೆಡ್ಲರ್​ಗಳ ಬಂಧನ; 7 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು: ಇನ್ನು ಕಳೆದ ತಿಂಗಳಷ್ಟೇ ನಟೋರಿಯಸ್ ವಿದೇಶಿ ಡ್ರಗ್ ಫೆಡ್ಲರ್​ಗಳನ್ನ ವಿವಿಪುರಂ ಪೊಲೀಸರು ಬಂಧಿಸಿದ್ದರು. ನೈಜೀರಿಯಾ ಮೂಲದ ಲಾರೆನ್ಸ್ ಹಾಗೂ ಚುಕ್ವೂನೇಜಿಮ್ ಬಂಧಿತ ಡ್ರಗ್ ಫೆಡ್ಲರ್​ಗಳು. ಇನ್ನು ಈ ಬಂಧಿತರಿಂದ ಸುಮಾರು 7 ಕೋಟಿ ಮೌಲ್ಯದ ಡ್ರಗ್ಸ್​ನ್ನು ಸೀಜ್ ಮಾಡಲಾಗಿತ್ತು. 1.85 ಕೆ.ಜಿ ಬಿಳಿ ಮೀಥೈಲ್ ಎಡಿಯಾಕ್ಸಿ ಮೆಥಾಂಫೆಟಮೈನ್ 1.15kg ಕಂದು ಮೀಥೈಲ್ ಎಡಿಯಾಕ್ಸಿ ಮೆಥಾಂಫೆಟಮೈನ್ 310 ಗ್ರಾಂ ಕೊಕೇನ್​ ಅನ್ನು ಜಫ್ತಿ ಮಾಡಲಾಗಿದ್ದು, ವಿವಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನು ಈ ವಿದೇಶಿ ಡ್ರಗ್ ಫೆಡ್ಲರ್​ಗಳು ಸಾಫ್ಟ್‌ವೇರ್ ಇಂಜನಿಯರ್, ದೊಡ್ಡ ದೊಡ್ಡ ಉದ್ಯಮಿಗಳನ್ನ ಟಾರ್ಗೆಟ್ ಮಾಡಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ನಗರದಲ್ಲಿ ಸುಮಾರು ಐದು ವರ್ಷಗಳಿಂದ ಮಾರಾಟ ಮಾಡುತ್ತಿದ್ದ ಫೆಡ್ಲರ್ಸ್​ಗಳು ಇದುವರೆಗೂ ನಗರದಲ್ಲಿ ಕೋಟ್ಯಾಂತರ ರೂಪಾಯಿ ಡ್ರಗ್ಸ್ ಮಾರಾಟ ಮಾಡಿದ್ದರು. ಇನ್ನು ಇದೇ ಮೊದಲ ಬಾರಿಗೆ ಕಂದು ಮೀಥೈಲ್ ಎಡಿಯಾಕ್ಸಿ ಮೆಥಾಂಫೆಟಮೈನ್​ನ್ನು ಪೊಲೀಸರು ಸೀಜ್ ಮಾಡಿದ್ದರು. ಸದ್ಯ ಇಬ್ಬರು ಫೆಡ್ಲರ್​ಗಳ ಮೊಬೈಲ್​ನ್ನು ವಶಕ್ಕೆ ಪಡೆದು, ಮಾಹಿತಿ ಕಲೆಹಾಕುತ್ತಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ