ಬೆಂಗಳೂರು, (ಜುಲೈ 25): ಮೊನ್ನೇ ಅಷ್ಟೇ ಬೆಂಗಳೂರಿನ (Bengaluru) ಪಿಇಎಸ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ (Student) ಸಾವು ಪ್ರಕರಣ ಸಂಬಂಧ ದೊಡ್ಡ ಮಟ್ಟದ ಗಲಾಟೆ ನಡೆದ ಬೆನ್ನಲ್ಲೇ ಇದೀಗ ಮತ್ತೋರ್ವ ಕಾಲೇಜು ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿನ್ಸೆಂಟ್ ಪೆಲ್ಲೋಟಿ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಮಾರ್ವೇಶ್(19) ಎನ್ನುವ ವಿದ್ಯಾರ್ಥಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾನೆ. ವಾಂತಿ ಮಾಡಿಕೊಂಡಿದ್ದಾನೆ ಎಂದು ಮಾರ್ವೇಶ್ನನ್ನು ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದ್ರೆ, ಅಷ್ಟರಾಗಲೇ ಮಾರ್ವೇಶ್ ಮೃತಪಟ್ಟಿದ್ದ ಎಂದು ತಿಳಿದುಬಂದಿದೆ.
ವಾಂತಿ ಮಾಡಿಕೊಂಡಿದ್ದಾನೆ ಎಂದು ಗೆಳೆಯರು, ಮಾರ್ವೇಶ್ನನ್ನು ಅಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದ್ರೆ, ಮಾರ್ವೇಷ್ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದು, ಬಳಿಕ ಹೆಣ್ಣೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಆಸ್ಪತ್ರೆಗೆ ದೌಡಾಯಿಸಿದ ಪೊಲೀಸರು , ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಅಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಮೃತ ದೇಹದ ಮೇಲೆ ಯಾವುದೇ ಗುರುತುಗಳು ಪತ್ತೆಯಾಗಿಲ್ಲ. ಆದ್ರೆ, ಕಾಲೇಜಿಗೆ ತೆರಳದೆ ಗೆಳೆಯರ ಜೊತೆಗ ಬೇರೆ ಕಡೆ ಹೋಗಿದ್ದ ಎಂದು ತಿಳಿದುಬಂದಿದೆ. ಇನ್ನು ಯುವತಿ ವಿಚಾರಕ್ಕೆ ಗೆಳೆಯರ ನಡುವೆ ಗಲಾಟೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಹೆಣ್ಣೂರು ಪೊಲೀಸರು ತನಿಖೆ ನಡೆಸಿದ್ದಾರೆ.
ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 1:13 pm, Wed, 26 July 23