ಬೆಂಗಳೂರು ಹೊರವಲಯದಲ್ಲಿ ತಡರಾತ್ರಿ 2 ಅಪಘಾತಗಳು, ಒಬ್ಬ ಯುವಕ ಸಾವು

Late night accidents : ರಾಜಧಾನಿ ಹೊರವಲಯದಲ್ಲಿರುವ ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸೋಮವಾರ ತಡರಾತ್ರಿ 2 ಅಪಘಾತಗಳು ಸಂಭವಿಸಿದ್ದು, ಒಬ್ಬ ಯುವಕ ಸಾವನ್ನಪ್ಪಿದ್ದಾನೆ. ಪಲ್ಸರ್ ಬೈಕ್ ಸವಾರಿ ಮಾಡುತ್ತಿದ್ದ ಮೋಹನ್, ವಾಟರ್ ಟ್ಯಾಂಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು ಸಾವಿಗೀಡಾಗಿದ್ದಾರೆ. ಮತ್ತೊಂದು ಅಪಘಾತ ನೈಸ್ ರಸ್ತೆಯಲ್ಲಿ ಸಂಭವಿಸಿದೆ. 

ಬೆಂಗಳೂರು ಹೊರವಲಯದಲ್ಲಿ ತಡರಾತ್ರಿ 2 ಅಪಘಾತಗಳು, ಒಬ್ಬ ಯುವಕ ಸಾವು
ಪ್ರಾತಿನಿಧಿಕ ಚಿತ್ರ
Follow us
Shivaprasad
| Updated By: ಸಾಧು ಶ್ರೀನಾಥ್​

Updated on:Aug 22, 2023 | 12:30 PM

ಬೆಂಗಳೂರು, ಆಸಗ್ಟ್​ 22: ರಾಜಧಾನಿ ಹೊರವಲಯದಲ್ಲಿರುವ ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸೋಮವಾರ ತಡರಾತ್ರಿ 2 ಅಪಘಾತಗಳು (late night accidents) ಸಂಭವಿಸಿದ್ದು, ಒಬ್ಬ ಯುವಕ (Youth) ಸಾವನ್ನಪ್ಪಿದ್ದಾನೆ (Death). ಕೂಡ್ಲು ಗೇಟ್ ಸಮೀಪ ನಡೆದಿದ್ದ ಈ ಅಪಘಾತದಲ್ಲಿ ಮೋಹನ್ (32) ಮೃತಪಟ್ಟ ವ್ಯಕ್ತಿ. ಪಲ್ಸರ್ ಬೈಕ್ ಸವಾರಿ ಮಾಡುತ್ತಿದ್ದ ಮೋಹನ್, ವಾಟರ್ ಟ್ಯಾಂಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಯಿತಾದರೂ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಇನ್ನು, ಮತ್ತೊಂದು ಅಪಘಾತ ನೈಸ್ ರಸ್ತೆಯಲ್ಲಿ ಸಂಭವಿಸಿದೆ. ಕಂಟೇನರ್ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಲಾರಿ ರಸ್ತೆಗೆ ಮುಗುಚಿಬಿದ್ದಿತ್ತು. ಚಾಲಕನ ಕಾಲು ಮುರಿದಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದುವರೆಗೆ ನಗರದಲ್ಲಿ 16 ಅಪಘಾತ ಪ್ರಕರಣಗಳು ಸಂಭವಿಸಿದ್ದು, ಐವರು ಮೃತಪಟ್ಟಿದ್ದು, 15 ಜನರಿಗೆ ಗಾಯಗಳಾಗಿವೆ.

ದೇವರಾಜು ಅರಸು ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ: ಓರ್ವ ಸಾವು

ಬೆಂಗಳೂರು ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ರಾತ್ರಿ ಸೋಮವಾರ ತಡರಾತ್ರಿ 11.20ರ ಸಮಯದಲ್ಲಿ ಬೊಲೆರೊ ಪಿಕಪ್ ವಾಹನಕ್ಕೆ ಹಿಂಬದಿಯಿಂದ ಕ್ಯಾಂಟರ್ ಗುದ್ದಿದ್ದು ಅಪಘಾತ ಸಂಭವಿಸಿದೆ.

ಇದನ್ನೂ ಓದಿ:ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ದಾನ: ದುಃಖದ ನಡುವೆ ಕುಟುಂಬಸ್ಥರ ಮಾನವೀಯತೆ 

ಬೊಲೆರೊ ಪಿಕಪ್ ವಾಹನದಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಬೊಲೆರೊ ಚಾಲಕ ಹರೀಶ್, ಕ್ಯಾಂಟರ್ ಚಾಲಕ ಮನ್ಸೂರ್​​ಗೆ ಗಾಯಗಳಾಗಿವೆ. ಇಬ್ಬರು ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:20 pm, Tue, 22 August 23

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು