Bengaluru Earthquake: ಬೆಂಗಳೂರಿನಲ್ಲಿ ಎರಡೆರಡು ಬಾರಿ ಭೂಕಂಪದ ಅನುಭವ; ಮಂಡ್ಯದಲ್ಲಿ ನಿಗೂಢ ಶಬ್ದಕ್ಕೆ ಬೆಚ್ಚಿಬಿದ್ದ ಜನ!

Earthquakes in Bengaluru: ಬೆಂಗಳೂರಿನಲ್ಲಿ ಇಂದು (ಶುಕ್ರವಾರ, ನವೆಂಬರ್ 26) ಎರಡೆರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಮಂಡ್ಯದಲ್ಲೂ ಕೇಳಿಬಂದ ನಿಗೂಢ ಶಬ್ದಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ.

Bengaluru Earthquake: ಬೆಂಗಳೂರಿನಲ್ಲಿ ಎರಡೆರಡು ಬಾರಿ ಭೂಕಂಪದ ಅನುಭವ; ಮಂಡ್ಯದಲ್ಲಿ ನಿಗೂಢ ಶಬ್ದಕ್ಕೆ ಬೆಚ್ಚಿಬಿದ್ದ ಜನ!
ಬೆಂಗಳೂರು (ಸಾಂದರ್ಭಿಕ ಚಿತ್ರ)


ಬೆಂಗಳೂರು: ಬೆಂಗಳೂರಿನ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ರಾಜರಾಜೇಶ್ವರಿ ನಗರ, ಕೆಂಗೇರಿ, ಕಗ್ಗಲೀಪುರ, ಹೆಮ್ಮಿಗೆಪುರ, ಜ್ಞಾನಭಾರತಿನಗರ, ಮೈಸೂರು ರಸ್ತೆಯ ಕೆಲ ಏರಿಯಾದಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿದೆ. ಎರಡು ಸಲ ಭೂಮಿ ಕಂಪಿಸಿದ ಅನುಭವವಾಗಿದೆ. ಮೊದಲ ಸಲ ಲಘುವಾಗಿ ಕಂಪಿಸಿದ ಅನುಭವವಾಗಿದ್ದು, ನಂತರ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ.

ಮಂಡ್ಯ: ಮಂಡ್ಯದಲ್ಲಿಯೂ ಭಾರೀ ಶಬ್ದ ಕೇಳಿ ಬಂದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. 11.50ರ ಸುಮಾರಿಗೆ ಮೊದಲ ಬಾರಿಗೆ ಜೋರು ಶಬ್ದ ಕೇಳಿ ಬಂದಿದೆ. 10-15 ನಿಮಿಷ ಅಂತರದಲ್ಲಿ 2 ಬಾರಿ ಕೇಳಿಬಂದ ಶಬ್ದ ಕೇಳಿ ಬಂದಿದೆ. ಕೆಲ ಕಾಲ ಭೂಕಂಪನದ ಅನುಭವವಾಗಿದ್ದು, ಶಬ್ಧಕ್ಕೆ ಮನೆ, ಕಚೇರಿ ಕಟ್ಟಡಗಳ ಕಿಟಕಿಗಳು, ವಸ್ತುಗಳು ನಲುಗಿವೆ. ಈ ಹಿಂದೆ ಕೆಆರ್‌ಎಸ್, ಪಾಂಡವಪುರ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ಶಬ್ಧ ಕೇಳಿಬಂದಿತ್ತು. ಇದೀಗ ಮಂಡ್ಯ ನಗರದಲ್ಲಿ ಭಾರೀ ಶಬ್ದ ಕೇಳಿ ಬಂದಿದೆ.

ಈ ಸುದ್ದಿ ಇದೀಗ ಬ್ರೇಕ್ ಆಗಿದ್ದು, ಹೆಚ್ಚಿನ ಮಾಹಿತಿಗೆ ಪುಟವನ್ನು ರೀಫ್ರೆಶ್ ಮಾಡಿ.

ಇದನ್ನೂ ಓದಿ:

Earthquake: ಭಾರತ- ಮ್ಯಾನ್ಮಾರ್ ಗಡಿಯಲ್ಲಿ 6 ತೀವ್ರತೆಯ ಭೂಕಂಪ; ಕೋಲ್ಕತ್ತಾ, ಗುವಾಹಟಿಯಲ್ಲೂ ಕಂಪನದ ಅನುಭವ

Tamil Nadu Rain: ಮಳೆಯಿಂದ ತಮಿಳುನಾಡಿನ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ; ಶಾಲಾ-ಕಾಲೇಜುಗಳು ಬಂದ್

Click on your DTH Provider to Add TV9 Kannada