ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹರಿಸಲು ತಜ್ಞರಿಂದ 20 ಸೂತ್ರಗಳು!

ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಸಾವಿರಾರು ಹೊಸ ವಾಹನಗಳು ರೋಡಿಗಿಳಿಯುತ್ತಿವೆ. ಇದರಿಂದ ನಗರದಲ್ಲಿ ವಾಯು ಮಾಲಿನ್ಯ, ಟ್ರಾಫಿಕ್ ಸಮಸ್ಯೆ ವಿಪರೀತವಾಗುತ್ತಿದೆ. ಇದನ್ನು ತಡೆಯಲು ಟ್ರಾಫಿಕ್ ಪೋಲಿಸರು ಯಾವುದೇ ಕ್ರಮಗಳನ್ನು ತೆಗೆದುಕೊಂಡಂತೆ ಕಾಣಿಸುತ್ತಿಲ್ಲ. ಅದಕ್ಕೆ ಟ್ರಾಫಿಕ್ ತಜ್ಞರು 20 ಸೂತ್ರಗಳನ್ನು ಸಿದ್ದಪಡಿಸಿ ಸಲ್ಲಿಸಿದ್ದಾರೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹರಿಸಲು ತಜ್ಞರಿಂದ 20 ಸೂತ್ರಗಳು!
ಟ್ರಾಫಿಕ್ ತಜ್ಞ ಶ್ರೀ ಹರಿ
Follow us
Kiran Surya
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 22, 2024 | 9:34 PM

ಬೆಂಗಳೂರು, ಆ.22: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಟ್ರಾಫಿಕ್ ಸಮಸ್ಯೆ(traffic problem)ಗಳನ್ನು ಪರಿಹರಿಸಲು ಟ್ರಾಫಿಕ್ ತಜ್ಞ ಶ್ರೀ ಹರಿ ಎಂಬುವವರು ಟ್ರಾಫಿಕ್ ವಿಭಾಗದ ಜಂಟಿ ಪೋಲಿಸ್ ಆಯುಕ್ತ ಅನುಚೇತ್​ ಅವರಿಗೆ 20 ಸೂತ್ರಗಳ ವಿಶೇಷ ವರದಿ ಸಲ್ಲಿಸಿದ್ದಾರೆ. ಅದನ್ನು ಜಾರಿಗೆ ತಂದಲ್ಲಿ ಟ್ರಾಫಿಕ್​ ಸಮಸ್ಯೆ ಸ್ವಲ್ಪಮಟ್ಟಿಗೆ ಆದರೂ ನಿಯಂತ್ರಣಕ್ಕೆ ಬರುತ್ತದೆ ಎನ್ನಲಾಗಿದೆ. ಈ ವರದಿಯಲ್ಲಿರುವ ಪ್ರಮುಖ ಅಂಶಗಳ ಬಗ್ಗೆ ಇಲ್ಲಿದೆ ಮಾಹಿತಿ.

ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದೆ. ಪ್ರತಿ ರೋಡ್​ನಲ್ಲೂ ವಾಹನಗಳನ್ನು ಪಾರ್ಕಿಂಗ್ ಮಾಡಿರುತ್ತಾರೆ. ಇದರಿಂದ ಟ್ರಾಫಿಕ್ ಜಾಮ್ ಆಗುತ್ತದೆ. ಸುಗಮವಾಗಿ ವಾಹನಗಳು ಸಂಚಾರ ಮಾಡಲು ಆಗೋದಿಲ್ಲ.

  • ಪ್ರಥಮವಾಗಿ ಬೆಂಗಳೂರಿನ ನಗರದಲ್ಲಿರುವ ರಸ್ತೆಗಳ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು, ಇದರಿಂದ ಯಾವ ರೋಡ್ ನಲ್ಲಿ, ಯಾವ ಸಮಯದಲ್ಲಿ ಟ್ರಾಫಿಕ್ ಆಗುತ್ತದೆ ಎಂದು ತಿಳಿಯಲಿದೆ.
  • ಎರಡನೇಯದಾಗಿ ಬೆಂಗಳೂರಿನ ರಸ್ತೆಗಳನ್ನು ನಿರ್ಮಾಣ ಮಾಡಿದ ಗುತ್ತಿಗೆದಾರ ಯಾರು, ಯಾವಾಗ ಮತ್ತು ಎಷ್ಟು ವೆಚ್ಚ ಮಾಡಲಾಗಿದೆ ಎನ್ನುವ ಮಾಹಿತಿ ಹಾಕಬೇಕು. ಇದರಿಂದ ರಸ್ತೆ ರಿಪೇರಿ ಮಾಡಲು ಉಪಯೋಗವಾಗುತ್ತದೆ.
  • ಮೂರನೇಯದಾಗಿ ಬಿಬಿಎಂಪಿ, ಬೆಸ್ಕಾಂ, ಬಿಡಬ್ಲೂಎಸ್ಎಸ್ಬಿ ಮತ್ತು ಇತರ ಸರ್ಕಾರಿ ಸಂಸ್ಥೆಗಳು ರಸ್ತೆಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಬೇಕಾಬಿಟ್ಟಿ ಕಾಮಗಾರಿ ಮಾಡಿ ಬಿಟ್ಟು ಹೋಗುವುದು ತಪ್ಪುತ್ತದೆ.
  • ರಸ್ತೆ ಬದಿಯ ಪಾರ್ಕಿಂಗ್​ಗೆ ಅವಕಾಶ ನೀಡಬಾರದು.
  • ಪ್ರಯಾಣಿಕರಿಗೆ ಒಂದು ಸ್ಥಳದಿಂದ ಮತ್ತೊಂದು ಸ್ಥಳದ ಲಾಸ್ಟ್ ಮೇಲ್ ಕನೆಕ್ಟಿವಿಟಿ ವ್ಯವಸ್ಥೆ ಮಾಡಬೇಕು.
  • ಪಾದಚಾರಿಗಳಿಗೆ ಸೂಕ್ತವಾದ ಫುಟ್ ಪಾಥ್ ವ್ಯವಸ್ಥೆ ಕಲ್ಪಿಸಬೇಕು.
  • ವಾಹನ ಸವಾರರಿಗೆ ಬೆಂಗಳೂರಿನ ರೋಡ್ ಮತ್ತು ಸ್ಥಳಗಳ ಮಾಹಿತಿ ಗೊತ್ತಾಗುವಂತೆ ರೋಡ್​ನಲ್ಲಿ ಮಾಹಿತಿ ಫಲಕಗಳನ್ನು ಅಳವಡಿಸಬೇಕು.
  • 2 ನೇ ಮತ್ತು 3 ನೇ ಹಂತದ ನಗರಗಳ ಅಭಿವೃದ್ಧಿ ಮಾಡಬೇಕು, ಇದರಿಂದ ಬೆಂಗಳೂರಿನ ಸುತ್ತಮುತ್ತಲಿನ ಜನರು ಬೆಂಗಳೂರಿಗೆ ಬರುವುದು ತಪ್ಪುತ್ತದೆ.
  • ಇನ್ನು ಕಾರ್ ಪೂಲಿಂಗ್ ಅವಕಾಶ ಕೊಡಬೇಕು.
  • ಕೆಲ ರಸ್ತೆಗಳಲ್ಲಿ ಸಂಚಾರ ‌ಮಾಡುವ ವಾಹನಗಳಿಗೆ ‌ಟ್ಯಾಕ್ಸ್ ಹಾಕಬೇಕು.
  • ಮೆಟ್ರೋ ಪ್ರಯಾಣಕ್ಕೆ ಉತ್ತೇಜನ ನೀಡಬೇಕು.
  • ಟ್ರಾಫಿಕ್ ಪೋಲೀಸರ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು. ಹಾಗೂ ತಮ್ಮ ಕಾರುಗಳನ್ನು ಮನೆಯ ಮುಂಭಾಗದಲ್ಲಿ ನಿಲ್ಲಿಸಿ ಜನರಿಗೆ ತೊಂದರೆ ನೀಡಬಾರದು.
  • ಮನೆಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಳ್ಳಬೇಕು.
  • ಹೊಸದಾಗಿ ಡಿಎಲ್ ನೀಡುವ ವೇಳೆ ಕಠಿಣ ರೂಲ್ಸ್ ಫಾಲೋ ಮಾಡಬೇಕು.

ಇದನ್ನೂ ಓದಿ:ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಡಿಕೆಶಿಗೆ ತೇಜಸ್ವಿ ಸೂರ್ಯ ಮನವಿ

ಹೀಗೆ ಒಟ್ಟು 20 ಸೂತ್ರಗಳನ್ನು ಪಟ್ಟಿ ಮಾಡಿ ಸಲ್ಲಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಂಟಿ ಪೋಲಿಸ್ ಆಯುಕ್ತ ಎಂ.ಎನ್.ಅನುಚೇತ್, ‘ಬೆಂಗಳೂರು ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ ಟ್ರಾಫಿಕ್ ತಜ್ಙ ಪ್ರೊ.ಶ್ರೀಹರಿ ಕೆಲವು ಸೂತ್ರಗಳನ್ನು ಪಟ್ಟಿ ಮಾಡಿ ಕೊಟ್ಟಿದ್ದಾರೆ. ವರದಿ ನಮ್ಮ ಕೈ ಸೇರಿದೆ. ವರದಿಯನ್ನು ಪರಿಶೀಲನೆ ಮಾಡ್ತಿದ್ದೇವೆ ಎಂದರು. ಒಟ್ಟಿನಲ್ಲಿ ನಗರದಲ್ಲಿ ಹೆಚ್ಚಾಗುತ್ತಿರುವ ಟ್ರಾಫಿಕ್ ಸಮಸ್ಯೆ ಹಿನ್ನೆಲೆಯಲ್ಲಿ ಟ್ರಾಫಿಕ್ ತಜ್ಞರೇನೋ 20 ಸೂತ್ರಗಳನ್ನು ನೀಡಿದ್ದಾರೆ. ಆದರೆ, ಇದನ್ನು ಸರ್ಕಾರ ಮತ್ತು ಪೋಲಿಸ್ ಇಲಾಖೆ ಯಾವ ರೀತಿಯಲ್ಲಿ ಪರಿಗಣಿಸಲಿದೆ ಎಂದು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ