ಫಿಟ್ನೆಸ್ ಸೆಂಟರ್ 3ನೇ ಮಹಡಿಯಿಂದ ಬಿದ್ದು ರಿಸೆಪ್ಷನಿಸ್ಟ್ ಸಾವು: ಸಾವಿನ ಸುತ್ತ ಅನುಮಾನದ ಹುತ್ತ
ಫಿಟ್ನೆಸ್ ಸೆಂಟರ್ ನಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಒಬ್ಬರು ಅದೇ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಜೀವ ಕಳೆದುಕೊಂಡಿದ್ದಾಳೆ. ಇದ್ದಕ್ಕಿದ್ದಂತೆ ಮೂರನೇ ಮಹಡಿಯಲ್ಲಿದ್ದ ಫಿಟ್ನೆಸ್ ಸೆಂಟರ್ ಕಟ್ಟಡದ ಮೇಲಿನಿಂದ ಬಿದ್ದು ರಕ್ಷಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಯುವತಿ ಜೀವ ಕಳೆದುಕೊಳ್ಳಲು ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ಈ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿವೆ.

ಬೆಂಗಳೂರು, (ಆಗಸ್ಟ್ 05): ಫಿಟ್ನೆಸ್ ಸೆಂಟರ್ ನಲ್ಲಿ (fitness centre) ರಿಸೆಪ್ಷನಿಸ್ಟ್ ( receptionist)ಆಗಿ ಕೆಲಸ ಮಾಡುತ್ತಿದ್ದ ಯುವತಿ, ಅದೇ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ಕಡಬಗೆರೆಯಲ್ಲಿ ಈ ಘಟನೆ ನಡೆದಿದೆ. ರಿಸೆಪ್ಷನಿಸ್ಟ್ ರಕ್ಷಿತಾ (20) ಮೃತ ಯುವತಿ. ಕಡಬಗೆರೆಯಲ್ಲಿರುವ ಜುನಿಫರ್ ಫಿಟ್ನೆಸ್ ಸೆಂಟರ್‌ನಲ್ಲಿ ರಿಸೆಪ್ಷನಿಸ್ಟ್ ಆಗಿ ಯುವತಿ ಕೆಲಸ ಮಾಡುತ್ತಿದ್ದರು. ಕಳೆದ ಎಂಟು ತಿಂಗಳಿನಿಂದ ಇಲ್ಲಿಯೇ ಕೆಲಸ ಮಾಡಿಕೊಂಡು ಇದ್ದರು. ಆದರೆ ಫಿಟ್ನೆಸ್ ಸೆಂಟರ್‌ನ ಮೂರನೇ ಮಹಡಿಗೆ ಹೋಗಿ ಅಲ್ಲಿಂದ ಬಿದ್ದು ಜೀವ ಕಳೆದುಕೊಂಡಿದ್ದಾರೆ. ಈ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಇನ್ನು ಯುವತಿ ಜೀವ ಕಳೆದುಕೊಳ್ಳಲು ಏನು ಕಾರಣ ಎಂಬುದು ಸ್ಪಷ್ಟವಾಗಿಲ್ಲ. ಮೂರನೇ ಮಹಡಿಯಿಂದ ಬಿದ್ದಿದ್ದರಿಂದ ಸ್ಥಳದಲ್ಲೇ ಜೀವ ಹೋಗಿದೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದ್ದು, ಪೊಲೀಸರ ತನಿಖೆಯಿಂದ ಸತ್ಯ ಏನು ಎಂಬುದು ಗೊತ್ತಾಗಬೇಕಿದೆ.
ಬಸ್- ಕ್ಯಾಂಟರ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವು
ಚಿಕ್ಕಮಗಳೂರು: ಚಿಕ್ಕಮಗಳೂರು (Chikkamagaluru News) ಜಿಲ್ಲೆಯಲ್ಲಿ ಭೀಕರವಾದ ಅಪಘಾತ (Road Accident) ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್ ಹಾಗೂ ಕ್ಯಾಂಟರ್ ಮುಖಾಮುಖಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ಶಿವಪುರ ಗೇಟ್ ಬಳಿ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಶಿವಪುರದಲ್ಲಿ ನಿದ್ದೆಯ ಮಂಪರಿನಲ್ಲಿ ಕ್ಯಾಂಟರ್ ಚಾಲಕ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ. ಕ್ಯಾಂಟರ್ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಹುಬ್ಬಳ್ಳಿಯಿಂದ ಕ್ಯಾಂಟರ್ ವಾಹನ ಮೈಸೂರಿಗೆ ತೆರಳುತ್ತಿತ್ತು. ಕೆಎಸ್ಆರ್ಟಿಸಿ ಬಸ್ಸು ಕಡೂರಿನಿಂದ ಹೂವಿನಹಡಗಲಿಗೆ ತೆರಳುತ್ತಿತ್ತು. ಮೃತಪಟ್ಟ ಇಬ್ಬರೂ ಹುಬ್ಬಳ್ಳಿ ಮೂಲದ ಚಾಲಕ ಹಾಗೂ ಕ್ಲೀನರ್ ಎಂದು ತಿಳಿದುಬಂದಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಅಪಘಾತ ಕುರಿತು ಪ್ರಕರಣ ದಾಖಲಾಗಿದೆ.
ಗುಂಡಿಗೆ ಬಿದ್ದು ಇಬ್ಬರು ಬೈಕ್ ವಾಹನ ಸವಾರರ ದುರ್ಮರಣ
ಚಿಂತಾಮಣಿ: ದ್ಚಿಚಕ್ರವಾಹನ ರಸ್ತೆಯ ಬದಿಯ ಗುಂಡಿಗೆ ಬಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಕೆಂಚಾರ್ಹಳ್ಳಿ ಸರ್ಕಾರಿ ಪ್ರೌಢಶಾಲೆ ಬಳಿ ಭಾನುವಾರ ರಾತ್ರಿ ನಡೆದಿದೆ. ಚಿಂತಾಮಣಿ ತಾಲೂಕು ಪಲಿಗಡ್ಡ ಗ್ರಾಮದ ನಿವಾಸಿ ಹಾಗೂ ಹಾಲಿ ಚಿಂತಾಮಣಿ ನಗರದ ವೆಂಕಟಗಿರಿಕೋಟೆಯಲ್ಲಿ ವಾಸವಾಗಿರುವ ಪ್ರಭಾಕರ ಆಚಾರಿ ಹಾಗೂ ಪಲ್ಲಿಗಡ್ಡ ಗ್ರಾಮದ ವೆಂಕಟರವಣಪ್ಪ ಮೃತರು.
Published On - 8:41 pm, Tue, 5 August 25




