AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIR: ಎಸ್‌ಐಆರ್ ಫಾರ್ಮ್‌ಗಳಲ್ಲಿ 2002ರ ಮಾಹಿತಿ ಕಡ್ಡಾಯವಲ್ಲ; ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸ್ಪಷ್ಟನೆ

ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ ಮನೆ-ಮನೆ ಸಮೀಕ್ಷೆಯ ಫಾರ್ಮ್‌ಗಳಲ್ಲಿ 2002ರ ವಿವರಗಳನ್ನು ಭರ್ತಿ ಮಾಡುವುದು ಕಡ್ಡಾಯವಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ 8ರ ಒಳಗೆ ಫಾರ್ಮ್ ಸಲ್ಲಿಸಲು ಅವಕಾಶವಿದ್ದು, ರಾಜ್ಯಾದ್ಯಂತ ಶೇ 98.89ರಷ್ಟು ಫಾರ್ಮ್ ವಿತರಿಸಲಾಗಿದೆ. ಬೆಂಗಳೂರಿನಲ್ಲಿ ಸ್ಥಳಾಂತರಗೊಂಡ ಮತದಾರರ ಸಂಖ್ಯೆ ಹೆಚ್ಚಿರುವುದರಿಂದ ಪ್ರಕ್ರಿಯೆ ವಿಳಂಬವಾಗಿದೆ.

SIR: ಎಸ್‌ಐಆರ್ ಫಾರ್ಮ್‌ಗಳಲ್ಲಿ 2002ರ ಮಾಹಿತಿ ಕಡ್ಡಾಯವಲ್ಲ; ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸ್ಪಷ್ಟನೆ
ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್
ಭಾವನಾ ಹೆಗಡೆ
|

Updated on:Jul 24, 2026 | 7:38 AM

Share

ಮುಖ್ಯಾಂಶಗಳು

  • ಮಾಹಿತಿ ಇಲ್ಲದಿದ್ದರೂ ಫಾರ್ಮ್ ಸಲ್ಲಿಸಬಹುದು, ನಂತರ ERO ನೋಟಿಸ್ ನೀಡಿ ಸೂಕ್ತ ದಾಖಲೆ ಪಡೆಯಲಿದ್ದಾರೆ.
  • ರಾಜ್ಯದಲ್ಲಿ ಶೇ 98.89ರಷ್ಟು ಫಾರ್ಮ್ ಹಂಚಿಕೆ ಪೂರ್ಣಗೊಂಡಿದ್ದು, ಶೇ 66.35 ರಷ್ಟು ಡಿಜಿಟಲೀಕರಣ ಮುಕ್ತಾಯ.
  • ರಾಜಧಾನಿಯಲ್ಲಿ ಹೆಚ್ಚಿನ ಮತದಾರರು ಮನೆ ಬದಲಾಯಿಸಿರುವುದರಿಂದ ಡಿಜಿಟಲೀಕರಣ ಪ್ರಕ್ರಿಯೆ ಕೊಂಚ ವಿಳಂಬ.

ಬೆಂಗಳೂರು, ಜುಲೈ 24: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತಪಟ್ಟಿ ಪರಿಷ್ಕರಣೆ (SIR) ಫಾರ್ಮ್‌ಗಳಲ್ಲಿ ನಾಗರಿಕರು ತಮ್ಮ ಹಾಗೂ ತಮ್ಮ ಪೂರ್ವಜರ 2002ರ ವಿವರಗಳನ್ನು ಭರ್ತಿ ಮಾಡುವುದು ಕಡ್ಡಾಯವಲ್ಲ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸ್ಪಷ್ಟಪಡಿಸಿದ್ದಾರೆ. ಬುಧವಾರ (ಜು.22) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಜಿಟಲೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ಆಗಸ್ಟ್ 8ರ ಒಳಗೆ ಸಾರ್ವಜನಿಕರು ಫಾರ್ಮ್‌ಗಳನ್ನು ಸಲ್ಲಿಸಬೇಕು. 2002ರ ಮಾಹಿತಿ ಲಭ್ಯವಿಲ್ಲದಿದ್ದರೂ ಫಾರ್ಮ್ ಸಲ್ಲಿಸಬಹುದು. ಅಂತಹ ಸಂದರ್ಭಗಳಲ್ಲಿ ಮತದಾರರ ನೋಂದಣಾಧಿಕಾರಿಗಳು (ERO) ನಂತರದ ಹಂತದಲ್ಲಿ ಸೂಚಿಸಲಾದ 12 ಅಧಿಕೃತ ದಾಖಲೆಗಳಲ್ಲಿ ಒಂದನ್ನು ಕೋರಿ ನೋಟಿಸ್ ನೀಡಲಿದ್ದಾರೆ. ಈ ವಿಷಯದಲ್ಲಿ EROಗಳ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ತಿಳಿಸಿದ್ದಾರೆ.

ಭರ್ಜರಿ ಪ್ರಗತಿ ಕಾಣುತ್ತಿರುವ ಸಮೀಕ್ಷೆ

ಜುಲೈ 22 ರವರೆಗಿನ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 5,53,70,473 (98.89%) ಫಾರ್ಮ್‌ಗಳನ್ನು ವಿತರಿಸಲಾಗಿದ್ದು, ಇನ್ನು ಒಂದೆರಡು ದಿನಗಳಲ್ಲಿ ಶೇ 100ರಷ್ಟು ಸಾಧನೆಯಾಗಲಿದೆ. ಇದುವರೆಗೆ ಒಟ್ಟು 3,67,81,041 (66.35%) ಫಾರ್ಮ್‌ಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಒಟ್ಟು 5,93,787 (1.07%) ಫಾರ್ಮ್‌ಗಳು ಆನ್‌ಲೈನ್ ಮೂಲಕ ಸಲ್ಲಿಕೆಯಾಗಿವೆ. ಸಂಗ್ರಹಿಸಿದ ಫಾರ್ಮ್‌ಗಳಲ್ಲಿ ಶೇ 28.14 ಸ್ವಯಂ ಮ್ಯಾಪ್ (Self-mapped) ಆಗಿದ್ದರೆ, ಶೇ 34.87 ರಷ್ಟು ಸಲ್ ಸಂತತಿಯ ಆಧಾರದಲ್ಲಿ (Progeny) ಮ್ಯಾಪ್ ಆಗಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್​ ವರದಿ ಮಾಡಿದೆ.

ಗೈರುಹಾಜರಿ ಮತ್ತು ಸ್ಥಳಾಂತರಗೊಂಡ ಮತದಾರರ ಪರಿಶೀಲನೆ

ಸಮೀಕ್ಷೆ ವೇಳೆ ಇದುವರೆಗೆ ಶೇ 8.09ರಷ್ಟು (44,84,331) ಮತದಾರರು ಗೈರುಹಾಜರಿ, ಮರಣ ಹೊಂದಿದ, ಕಾಯಂ ಸ್ಥಳಾಂತರಗೊಂಡ ಅಥವಾ ನಕಲಿ (ASDDO) ಪಟ್ಟಿಗೆ ಸೇರಿದ್ದಾರೆ. ಇದರಲ್ಲಿ 26.32 ಲಕ್ಷ ಜನರು ಕಾಯಂ ಸ್ಥಳಾಂತರಗೊಂಡಿದ್ದರೆ, 9.81 ಲಕ್ಷಕ್ಕೂ ಹೆಚ್ಚು ಮತದಾರರು ಮೃತರಾಗಿದ್ದಾರೆ.

ಈ ಪ್ರತಿಯೊಂದು ಪ್ರಕರಣದಲ್ಲೂ ಬೂತ್ ಮಟ್ಟದ ಅಧಿಕಾರಿಗಳು (BLO) ಮತ್ತು ಬೂತ್ ಮಟ್ಟದ ಏಜೆಂಟರು (BLA) ನೆರೆಹೊರೆಯವರ ಸಹಿಯೊಂದಿಗೆ ಸ್ಥಳ ಮಹಜರು ನಡೆಸುತ್ತಿದ್ದಾರೆ. ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಿ ಈ ದತ್ತಾಂಶಗಳನ್ನು ಪರಿಶೀಲಿಸಲು ವಿನಂತಿಸಲಾಗಿದೆ ಎಂದು ಅನ್ಬುಕುಮಾರ್ ಹೇಳಿದರು.

ಇದನ್ನೂ ಓದಿ ಮತದಾರರ ಪಟ್ಟಿ ಪರಿಷ್ಕರಣೆ; ಆ. 8ರೊಳಗೆ ಫಾರ್ಮ್ ಸಲ್ಲಿಸದಿದ್ದರೆ ವೋಟರ್ ಐಡಿಯಿಂದ ಹೆಸರು ಔಟ್; 17.19 ಲಕ್ಷ ಫಾರ್ಮ್‌ಗಳಲ್ಲಿ ಸರಿಯಾದ ಮಾಹಿತಿ ಇಲ್ಲ

ಬೆಂಗಳೂರಿನಲ್ಲಿ ವಿಳಂಬಕ್ಕೆ ಕಾರಣವೇನು?

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ 1.03 ಕೋಟಿಗೂ ಹೆಚ್ಚು ಫಾರ್ಮ್‌ಗಳನ್ನು ವಿತರಿಸಲಾಗಿದ್ದು, ಶೇ 30.04 ರಷ್ಟು ಡಿಜಿಟಲೀಕರಣಗೊಂಡಿದೆ. ಇಲ್ಲಿ ಶೇ 22.97 ರಷ್ಟು ಮತದಾರರು ಸ್ಥಳಾಂತರಗೊಂಡ ಅಥವಾ ಲಭ್ಯವಿಲ್ಲದ ಪಟ್ಟಿಯಲ್ಲಿದ್ದಾರೆ (ASDDO). ಇದು ಡಿಜಿಟಲೀಕರಣ ವಿಳಂಬಕ್ಕೆ ಪ್ರಮುಖ ಕಾರಣವಾಗಿದೆ. ಇತ್ತೀಚೆಗೆ ವೆಬ್‌ಸೈಟ್ ಸರ್ವರ್ ಸಮಸ್ಯೆಯಿಂದಾಗಿ ಎದುರಾದ ತಾಂತ್ರಿಕ ಅಡಚಣೆಗಳನ್ನು ಸರಿಪಡಿಸಲಾಗುತ್ತಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಚುನಾವಣಾಧಿಕಾರಿ ಭರವಸೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 am, Fri, 24 July 26

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ