ಕರ್ನಾಟಕದಲ್ಲಿ ಇಂದು 201 ಜನರಿಗೆ ಕೊರೊನಾ ಸೋಂಕು ದೃಢ; ಮೈಸೂರಿನಲ್ಲಿ ಓರ್ವ ಸಾವು

ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 7060 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 201 ಜನರಿಗೆ ಕೊರೊನಾ ಸೋಂಕು(Corona Virus)ದೃಢಪಟ್ಟಿದ್ದು, ಬೆಂಗಳೂರಿನಲ್ಲಿ 39 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನು ಮೈಸೂರಿ(Mysore)ನಲ್ಲಿ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ.

ಕರ್ನಾಟಕದಲ್ಲಿ ಇಂದು 201 ಜನರಿಗೆ ಕೊರೊನಾ ಸೋಂಕು ದೃಢ; ಮೈಸೂರಿನಲ್ಲಿ ಓರ್ವ ಸಾವು
ಕೊರೊನಾ ಕೇಸ್​
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 30, 2023 | 7:12 PM

ಬೆಂಗಳೂರು, ಡಿ.30: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 7060 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 201 ಜನರಿಗೆ ಕೊರೊನಾ ಸೋಂಕು(Corona Virus)ದೃಢಪಟ್ಟಿದ್ದು, ಬೆಂಗಳೂರಿನಲ್ಲಿ 39 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನು ಮೈಸೂರಿ(Mysore)ನಲ್ಲಿ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. 60 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ 833 ಜನರಲ್ಲಿ ಕೊರೊನಾ ಸೋಂಕು ಹರಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 2.84 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಮುಂದಿನ ದಿನಗಳಲ್ಲಿ COVID 19 ಪ್ರಕರಣಗಳ ಹೆಚ್ಚಳ ಸಾಧ್ಯತೆ

ಮುಂದಿನ ದಿನಗಳಲ್ಲಿ COVID 19 ಪ್ರಕರಣಗಳ ಹೆಚ್ಚಳವಾಗುವ ಸಾಧ್ಯತೆಯಿದ್ದು, ಸಚಿವ ಸಂಪುಟ ಉಪಸಮಿತಿ ನಿರ್ದೇಶನದಂತೆ ಅಗತ್ಯ ಮುಂಜಾಗ್ರತೆ ಕೈಗೊಳ್ಳುವ ಸಲುವಾಗಿ ನಗರದ ಪ್ರಮುಖ ಆಸ್ಪತ್ರೆಗಳಲ್ಲಿ COVID 19 ಸೊಂಕಿತರ ಚಿಕಿತ್ಸೆಗೆ ಪ್ರತ್ಯೇಕ ವಾರ್ಡ್ ಮೀಸಲು ಇಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಟಿ.ಕೆ ಅನಿಲ್ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.

ಇದನ್ನೂ ಓದಿ:Coronavirus: ದೀರ್ಘಕಾಲ ದೇಹದಲ್ಲಿ ಕೊರೊನಾ ಸೋಂಕು ಉಳಿದರೆ ಈ ಸಮಸ್ಯೆಗಳು ಕಾಡಬಹುದು

ವಿಕ್ಟೋರಿಯ ಆಸ್ಪತ್ರೆಯ H-Block, ಕೆ.ಸಿ.ಜನರಲ್ ಆಸ್ಪತ್ರೆ ಜಯನಗರ ಜನರಲ್ ಆಸ್ಪತ್ರೆ ಸಿ.ವಿ.ರಾಮನ್ ಆಸ್ಪತ್ರೆ ಹಾಗೂ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆ (RGICD) ಗಳಲ್ಲಿ Isolated Coved Wards ಅನ್ನು ಕಾಯ್ದಿರಿಸಲು ಸೂಚನೆ ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾ ಆಸ್ಪತ್ರೆ (ವೈದ್ಯಕೀಯ ಕಾಲೇಜುಗಳು ಸೇರಿದಂತೆ) ಕನಿಷ್ಠ 10 ಸಾಮಾನ್ಯ ಹಾಸಿಗೆಗಳು ಮತ್ತು 5 ಐ.ಸಿ.ಯು ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್-19 ಸೋಂಕಿನ ಚಿಕಿತ್ಸೆಗಾಗಿ ಕಾಯ್ದಿರಿಸಲು ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:09 pm, Sat, 30 December 23