AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2013ರಲ್ಲಿ ಕೋ-ಆಪರೇಟಿವ್ ಸೊಸೈಟಿ ವಂಚನೆ ಪ್ರಕರಣ; 9 ವರ್ಷಗಳ ಬಳಿಕ ಆರೋಪಿಗಳು ಅರೆಸ್ಟ್

ನಾಲ್ವರನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ. ಆರೋಪಿಗಳು ಕಟ್ಟಿದ ಹಣ ವಾಪಸ್ ಕೇಳಿದಾಗ ಬೆದರಿಕೆ ಹಾಕಿದ್ದರಂತೆ. ದೂರು ದಾಖಲಿಸದಂತೆ ಹೆದರಿಸಿದ್ದರಂತೆ.

2013ರಲ್ಲಿ ಕೋ-ಆಪರೇಟಿವ್ ಸೊಸೈಟಿ ವಂಚನೆ ಪ್ರಕರಣ; 9 ವರ್ಷಗಳ ಬಳಿಕ ಆರೋಪಿಗಳು ಅರೆಸ್ಟ್
ಬಂಧಿತರು
TV9 Web
| Edited By: sandhya thejappa|

Updated on: Mar 26, 2022 | 10:17 AM

Share

ಬೆಂಗಳೂರು: 2013ರಲ್ಲಿ ಕೇಳಿಬಂದ ಕೋ-ಆಪರೇಟಿವ್ ಸೊಸೈಟಿ ವಂಚನೆ (Fraud) ಪ್ರಕರಣಕ್ಕೆ ಸಂಬಂಧಿಸಿ 9 ವರ್ಷಗಳ ಬಳಿಕ ಆರೋಪಿಗಳನ್ನು ಪೊಲೀಸರು (Police) ಬಂಧಿಸಿದ್ದಾರೆ. ಕೃಷ್ಣಪ್ಪ, ಧನಂಜಯ, ಚಂದ್ರ, ಪುಟ್ಟರಾಜು ಎಂಬುವವರು ಬಂಧನಕ್ಕೊಳಗಾಗಿದ್ದಾರೆ. ನಿಷ್ಕ ವಿವಿದೋದ್ದೇಶ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಲ್ಲಿ ಕೋಟಿ ಕೋಟಿ ವಂಚನೆ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಆರೋಪಿಗಳು ಸಾವಿರಾರು ಜನರಿಂದ ಹಣಕಟ್ಟಿಸಿಕೊಂಡು ವಂಚಿಸಿದ್ದರು. ಈ ಬಗ್ಗೆ 2013ರಲ್ಲಿ ಹನುಮಂತನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಹಣ ನೀಡಿದ್ದವರು ಈ ಬಗ್ಗೆ ಪೊಲೀಸ್ ಠಾಣೆಗ ದೂರು ನೀಡಿದ್ದರು. ಲಕ್ಷ ಲಕ್ಷ ಹಣ ಕಟ್ಟಿಸಿಕೊಂಡು ಮೆಚ್ಯುರಿಟಿ ನಂತರವು ಹಣ ವಾಪಸ್ ನೀಡದೆ ವಂಚಿಸಿದ್ದಾರೆ ಎಂದು ಆರೋಪಿಸಿದ್ದರು. ಸೊಸೈಟಿಯ ನಿರ್ದೇಶಕರು ಸೇರಿ 25 ಜನರ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. 9 ವರ್ಷಗಳ ನಿರಂತರ ಶೋಧದ ಬಳಿಕ ಆರೋಪಿಗಳು ಪತ್ತೆಯಾಗಿದ್ದಾರೆ.

ಸದ್ಯ ನಾಲ್ವರನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ. ಆರೋಪಿಗಳು ಕಟ್ಟಿದ ಹಣ ವಾಪಸ್ ಕೇಳಿದಾಗ ಬೆದರಿಕೆ ಹಾಕಿದ್ದರಂತೆ. ದೂರು ದಾಖಲಿಸದಂತೆ ಹೆದರಿಸಿದ್ದರಂತೆ. ಸದ್ಯ ಈ ಪ್ರಕರಣವನ್ನು ಜಯನಗರ ಪೊಲೀಸರು ಕೈಗೆತ್ತಿಕೊಂಡಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ

ಹಿಜಾಬ್, ವ್ಯಾಪಾರ ನಿಷೇಧ ಬೆನ್ನಲ್ಲೇ ಈಗ ಟಿಪ್ಪು ಪಠ್ಯ ಸರದಿ; ಶಿಕ್ಷಣ ಇಲಾಖೆಗೆ ಶುರುವಾಯ್ತು ಮತ್ತೊಂದು ಟೆನ್ಷನ್

ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿ ಶ್ರೀಗಂಧ ಬೆಳೆಗಾರರಿಂದ ಅರೆಬೆತ್ತಲೆ ಪ್ರತಿಭಟನೆ; 27ನೇ ದಿನಕ್ಕೆ ಕಾಲಿಟ್ಟ ಹೋರಾಟ

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ