ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಪ್ರವಾಹಕ್ಕೆ ಸಿಲುಕುವ 209 ಪ್ರದೇಶಗಳಿವೆ, ಬಿಬಿಎಂಪಿಯ ಯಾವ ವಲಯದಲ್ಲಿ ಹೆಚ್ಚಾಗಿದೆ ನೋಡಿ

58 ಅತಿ ಸೂಕ್ಷ್ಮ ಮತ್ತು 151 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಅಲ್ಲದೆ ಚರಂಡಿಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ.

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಪ್ರವಾಹಕ್ಕೆ ಸಿಲುಕುವ 209 ಪ್ರದೇಶಗಳಿವೆ, ಬಿಬಿಎಂಪಿಯ ಯಾವ ವಲಯದಲ್ಲಿ ಹೆಚ್ಚಾಗಿದೆ ನೋಡಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Digi Tech Desk

Updated on:Aug 11, 2021 | 11:54 AM

ಬೆಂಗಳೂರು: ರಾಜ್ಯರಾಜಧಾನಿ ಬೆಂಗಳೂರು ನಗರದಲ್ಲಿ ಮಳೆಗಾಲ ಕಾಲಿಟ್ಟು ಧೋ ಅಂತಾ ಮಳೆ ಶುರವಾದರೆ ಮುಗಿಯಿತು ಬಹುತೇಕ ಬೆಂಗಳೂರು ನಗರ ತೇಲಾಡತೊಡಗುತ್ತದೆ. ಮಳೆಗಾಲದಲ್ಲಿ ಅನೇಕ ಪ್ರದೇಶಗಳಲ್ಲಿ ಪ್ರವಾಹದ ಭೀತಿ ಹೆಚ್ಚು ಇರುತ್ತದೆ. ಅದರಲ್ಲಿ 209 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳನ್ನು ಗುರುತಿಸಲಾಗಿದೆ. ಹೀಗಾಗಿ ಈ ಪ್ರದೇಶಗಳಲ್ಲಿ ಅಪಾಯವನ್ನು ತಡೆಗಟ್ಟಲು ಬಿಬಿಎಂಪಿ ಈ ಬಾರಿ ಪೂರ್ವ ಸಿದ್ಧತೆ ನಡೆಸುತ್ತಿದೆ. ಈ ಬಾರಿ ಈಗಾಗಲೇ ಸುರೊದಿರುವ ಮುಂಗಾರು ಮಳೆಯಿಂದಾಗಿ ಅನೇಕ ರಸ್ತೆಗಳು ಹದಗೆಟ್ಟಿದ್ದು, ಅನೇಕ ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ.

ಕಂದಾಯ ಸಚಿವ ಆರ್. ಅಶೋಕ್ ಅವರು ಈ ನಿಟ್ಟಿನಲ್ಲಿ ಸೋಮವಾರ ಬಿಬಿಎಂಪಿ ಉನ್ನತಾಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು. ಮಳೆ ಪ್ರವಾಹಕ್ಕೆ ತುತ್ತಾಗುವ ನಗರದಾದ್ಯಂತ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ 58 ಅತಿ ಸೂಕ್ಷ್ಮ ಮತ್ತು 151 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಅಲ್ಲದೆ ಚರಂಡಿಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೆ ಅಧಿಕ ಮಳೆಯ ಸಮಯದಲ್ಲಿ ಸಾರ್ವಜನಿಕರಿಗೆ ಹಾನಿಯಾಗದಂತೆ ನೋಡಿಕೊಳ್ಳಲು, ಸದೃಢವಲ್ಲದ, ಪೆಡಸು ಮರಗಳನ್ನು ಗುರುತಿಸಲು ಮತ್ತು ಅದನ್ನು ಕತ್ತರಿಸಲು ಅಧಿಕಾರಿಗಳಿಗೆ ಕಂದಾಯ ಸಚಿವ ಆರ್. ಅಶೋಕ್ ಸೂಚಿಸಿದ್ದಾರೆ.

ಚರಂಡಿ ಕಾಮಗಾರಿಗೆ ಹೆಚ್ಚು ಒತ್ತು ಚರಂಡಿಗಳಲ್ಲಿ ನೀರು ನಿಲ್ಲುವ ಬಗ್ಗೆ ಹೆಚ್ಚಿನ ನಿಗಾವಹಿಸಿದ್ದು, ಈಗಾಗಲೇ ನಗರದಲ್ಲಿನ ಅನೇಕ ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ಪ್ರಕಾರ, ಬೆಂಗಳೂರಿನ ಪೂರ್ವ ವಲಯದಲ್ಲಿ 38 ಅತಿ ಸೂಕ್ಷ್ಮ ವಲಗಳಿವೆ. ದಾಸರಹಳ್ಳಿಯಲ್ಲಿ 37 ಮತ್ತು ರಾಜರಾಜೇಶ್ವರಿಯಲ್ಲಿ 32 ಸೂಕ್ಷ್ಮ ಪ್ರವಾಹ ವಲಯಗಳಿವೆ ಎಂದು ತಿಳಿಸಿದ್ದಾರೆ.

ಬಿಬಿಎಂಪಿ ವಾರ್ಡ್​ಗಳಿಗೆ ಅನುಗುಣವಾಗಿ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ. ಮುಚ್ಚಿರುವ ಚರಂಡಿಗಳನ್ನು ತರೆದು,ನೀರು ಸರಗಾವಾಗಿ ಹರಿಯುವುದಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಅಲ್ಲದೆ ರಸ್ತೆಗಳ ಮೇಲೆ ನೀರು ನಿಲ್ಲುವುದನ್ನು ತಡೆಯಲು ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸಲು ನಿರ್ಧರಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.

ಮಳೆಗಾಲದಲ್ಲಿ ಹಗಲಿರುಳು ಕೆಲಸ ಮಾಡಬೇಕಾಗುತ್ತದೆ: ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟ ಆಯುಕ್ತ ಗೌರವ್ ಗುಪ್ತಾ ನಗರ ಪ್ರವಾಹಕ್ಕೆ ಒಳಗಾಗದಂತೆ ನೋಡಿಕೊಳ್ಳಲು ಕಾರ್ಯಪಡೆ ತಂಡಗಳು ಮತ್ತು ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಮಳೆಗಾಲದಲ್ಲಿ ಹಗಲಿರುಳು ಕೆಲಸ ಮಾಡಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಮನವರಿಕೆ ಮಾಡಲಾಯಿತು. ಪ್ರಧಾನ ಕಚೇರಿಯಲ್ಲಿ ಮತ್ತು ಕ್ಷೇತ್ರ ಮಟ್ಟದಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ಅಧಿಕಾರಿಗಳು ಸರಿಯಾದ ಮಾಹಿತಿಯನ್ನು ಬೆಂಗಳೂರಿಗರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.

ಇದನ್ನೂ ಓದಿ: ಕೊರೊನಾ ಆತಂಕ: ಬೆಂಗಳೂರಿನ ಎಲ್ಲಾ ಕ್ಷೇತ್ರದಲ್ಲೂ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ನಿರ್ಧಾರ: ಆರ್. ಅಶೋಕ್

ಪ್ರವಾಹ ಪೀಡಿತ ಪ್ರದೇಶಗಳಿಗೆ ಮಮತಾ ಬ್ಯಾನರ್ಜಿ ಭೇಟಿ; ಮೊಣಕಾಲು ಮಟ್ಟದ ನೀರಿದ್ದರೂ ಸೀರೆ ಎತ್ತಿ ಹಿಡಿದು ಹೆಜ್ಜೆ ಹಾಕಿದ ದೀದಿ

Published On - 11:40 am, Wed, 11 August 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ