ನಿನ್ನೆ ನಾಪತ್ತೆಯಾಗಿದ್ದ ಕಲಬುರಗಿ ಯುವತಿ ಮೃತದೇಹ ಇಂದು ನಸುಕಿನಲ್ಲಿ ಬೆಂಗಳೂರಿನ ಮನೆ ಮುಂದೆ ಪತ್ತೆ

ನಿನ್ನೇ (ಆಗಸ್ಟ್ 10) ಅಷ್ಟೇ ಮನೆಯಿಂದ ಕಾಣೆಯಾಗಿದ್ದ 21 ವರ್ಷದ ಯುವತಿ ಮೃತದೇಹ ಇಂದು ನಸುಕಿನ ವೇಳೆ ಬೆಂಗಳೂರಿನ ಮನೆ ಮುಂದೆ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಹಲವು ಅನುಮಾನಗಳ ವ್ಯಕ್ತವಾಗಿವೆ.

ನಿನ್ನೆ ನಾಪತ್ತೆಯಾಗಿದ್ದ ಕಲಬುರಗಿ ಯುವತಿ ಮೃತದೇಹ ಇಂದು ನಸುಕಿನಲ್ಲಿ ಬೆಂಗಳೂರಿನ ಮನೆ ಮುಂದೆ ಪತ್ತೆ
ಪ್ರಾತಿನಿಧಿಕ ಚಿತ್ರ
Follow us
Prajwal Kumar NY
| Updated By: ರಮೇಶ್ ಬಿ. ಜವಳಗೇರಾ

Updated on:Aug 11, 2023 | 1:05 PM

ಬೆಂಗಳೂರು, (ಆಗಸ್ಟ್, 11): ಕಾಣೆಯಾಗಿದ್ದ ಕಲಬುರಗಿ(Kalaburagi) ಮೂಲದ ಯುವತಿ ಮೃತದೇಹ (Dead Body) ಮರುದಿನ ಮನೆ ಮುಂದೆ ಪತ್ತೆಯಾಗಿದೆ. ಬೆಂಗಳೂರಿನ (Bengaluru) ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​ನಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಶೆಲ್ ಪೆಟ್ರೋಲ್ ಬಂಕ್​ವೊಂದರಲ್ಲಿ ಕೆಲಸ ಕೆಲಸ ಮಾಡುತ್ತಿದ್ದ ಕಲಬುರಗಿ ಮಹಾನಂದಾ (21) ಎಂಬ ಯುವತಿ ನಿನ್ನೆ(ಆಗಸ್ಟ್ 10) ಕಾಣೆಯಾಗಿದ್ದಳು. ಆದ್ರೆ, ಮರು ದಿನ ಅಂದರೆ ಇಂದು (ಆಗಸ್ಟ್ 11) ನಸುಕಿನಲ್ಲಿ ಮನೆ ಮುಂದೆ ಯುವತಿಯ ಶವ ಪತ್ತೆಯಾಗಿದ್ದು, ಅಕ್ಕಪಕ್ಕದ ಮನೆಯವರು ಮೃತದೇಹ ನೋಡಿ ಶಾಕ್ ಆಗಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಘಟನಾ ಸ್ಥಳಕ್ಕೆ ಸೀನ್ ಆಫ್ ಕ್ರೈಮ್ ಅಫೀಸರ್ಸ್ ಮತ್ತು ಮಹದೇವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿಲ್ಲ. ಇದರಿಂದ ಯುವತಿ ಸಾವಿನ ಹಿಂದೆ ಹಲವು ಅನುಮಾನಗಳು ಮೂಡಿದ್ದು, ಈ ಬಗ್ಗೆ ಪೊಲಿಸರು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ಒಂದುವರೆ ವರ್ಷದ ಹಿಂದಷ್ಟೇ ಪ್ರೀತಿಸಿ ಮದ್ವೆಯಾಗಿದ್ದ ಯುವತಿ ಅನುಮಾನಾಸ್ಪದ ಸಾವು

ಕಲಬುರಗಿ ಮೂಲದ ಮೂಲದ ಮಹಾನಂದಾ ಹಾಗೂ ಆಕೆಯ ಅಕ್ಕ ಇಬ್ಬರೂ ಶೆಲ್ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಆದ್ರೆ, ಮಹಾನಂದಾ ನಿನ್ನೆ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದಳು. ರಾತ್ರಿ ಊಟಕ್ಕೆ ಎಂದು ಸ್ಟೌ ಮೇಲೆ ಅನ್ನ ಮಾಡಲು ಇಟ್ಟು ಮನೆಯಿಂದ ಹೊರಹೋಗಿದ್ದ ಮಹಾನಂದ ಏಕಾಏಕಿ ಕಾಣೆಯಾಗಿದ್ದಳು. ರಾತ್ರಿಯಾದರೂ ಮನೆಗೆ ತಂಗಿ ಬಾರದ ಹಿನ್ನೆಲೆಯಲ್ಲಿ ಮಹಾನಂದ ಅಕ್ಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಆದ್ರೆ, ಮರುದಿನ ನಸುಕಿನಲ್ಲಿ ಮನೆ ಬಳಿ ಮಹಾನಂದಳ ಮೃತದೇಹ ಪತ್ತೆಯಾಗಿದೆ.

ಮಹಾನಂದಾಳ ಕತ್ತಿನ ಭಾಗದಲ್ಲಿ ಗುರುತು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಮಹಾನಂದಳನ್ನ ಕತ್ತು ಹಿಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿದ ಬಳಿಕ ಮನೆ ಬಳಿಗೆ ತಂದು ಎಸೆದು ಹೋಗಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಮಹದೇವಪುರ ಪೊಲೀಸ್ ಠಾಣೆ ಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:07 am, Fri, 11 August 23

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ