ದೀಪಾವಳಿಗೆ ಗಂಡ ತನ್ನ ತವರು ಮನೆಗೆ ಬರಲಿಲ್ಲ ಎಂದು ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ!

|

Updated on: Nov 20, 2023 | 6:56 AM

ದೀಪಾವಳಿ ಹಬ್ಬಕ್ಕೆ ಗಂಡ ತವರು ಮನೆಗೆ ಬರಲಿಲ್ಲ ಎಂದು ಸಿಟ್ಟಾದ ಪತ್ನಿ, ಪತಿಗೆ ವಿಡಿಯೋ ಕಾಲ್ ಮಾಡಿ ಬೈದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವೊಂದು ನಡೆದಿದೆ. ರಾಜಧಾನಿ ಬೆಂಗಳೂರಿನ ಭಾರತಿನಗರದಲ್ಲಿ ಈ ಪ್ರಕರಣ ನಡೆದಿದೆ.

ದೀಪಾವಳಿಗೆ ಗಂಡ ತನ್ನ ತವರು ಮನೆಗೆ ಬರಲಿಲ್ಲ ಎಂದು ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ!
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, (ನವೆಂಬರ್ 20): ದೀಪಾವಳಿ (Deepavali) ಹಬ್ಬಕ್ಕೆ ಗಂಡ ತನ್ನ ತವರು ಮನೆಗೆ ಬರಲಿಲ್ಲ ಎಂದು ಕೋಪಗೊಂಡ ಪತ್ನಿ(Wife), ಪತಿಗೆ ವಿಡಿಯೋ ಕಾಲ್ (Video Call)ಮಾಡಿ ಬೈದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಭಾರತಿನಗರದಲ್ಲಿ ನಡೆದಿದೆ. ಭಾರತಿನಗರ ನಿವಾಸಿ ಆರ್​. ದೇವಿಕಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 21 ವರ್ಷದ ಈಕೆ ಪತಿಯೊಂದಿಗೆ ವಿಡಿಯೋ ಕಾಲ್​ನಲ್ಲಿದ್ದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೀಪಾವಳಿಗೆಂದು ತವರು ಮನೆಗೆ ಬಂದಿದ್ದ ಈಕೆ ಹಬ್ಬಕ್ಕೆ ಪತಿ ಅಲ್ಲಿಗೆ ಬರಲಿಲ್ಲ ಎಂದು ಮಂಗಳವಾರ ವಿಡಿಯೋ ಕಾಲ್ ಮಾಡಿ ತರಾಟೆಗೆ ತೆಗೆದುಕೊಂಡು, ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ದೇವಿಕಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಆಕೆ ಗರ್ಭಿಣಿಯಾಗಿದ್ದಳು ಎನ್ನುವುದು ಗೊತ್ತಾಗಿದೆ. ಇನ್ನು ದೇವಿಕಾ ಪ್ರೀತಿಸಿ ಮನೆಯವರು ವಿರೋಧದ ನಡುವೆಯೂ ಮದುವೆಯಾಗಿದ್ದಳು ಎಂದು ತಿಳಿದುಬಂದಿದೆ. ಪತಿ ಉಮೇಶ್, ಆಕೆಯನ್ನು ತಡೆಯುವ ಬದಲು ಆತ್ಮಹತ್ಯೆಯ ಲೈವ್ ವಿಡಿಯೋ ನೋಡಿ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿ ದೇವಿಕಾ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಪತ್ನಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ತಬ್ರೇಜ್ ಕೊಲೆ ಪ್ರಕರಣ: ಸ್ಪೋಟಕ ಮಾಹಿತಿ ಬಹಿರಂಗ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಉಮೇಶ್ ವಿರುದ್ಧ ದೇವಿಕಾ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ಪೊಲೀಸರು, ಐಪಿಸಿ ಸೆಕ್ಷನ್ 306 ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣವನ್ನು ದಾಖಲಿಸಿಕೊಂಡು ಮೃತ ಮಹಿಳೆಯ ಪತಿಯನ್ನು ಬಂಧಿಸಿದ್ದಾರೆ. ನನ್ನ ತಂಗಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯುವ ಬದಲು ಉಮೇಶ್ ಅವರು ಸಾಯುತ್ತಿರುವುದನ್ನು ಲೈವ್ ಆಗಿ ನೋಡಿದ್ದಾನೆ ಎಂದು ಮೃತ ಸಹೋದ ದರ್ಶನ್ ಆರೋಪಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ