AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಪಾಲನೆಗೆ ವಾಹನ ಸವಾರರು ಅಸಡ್ಡೆ: ಎಂಟೇ ತಿಂಗಳಲ್ಲಿ 24.54 ಲಕ್ಷ ಕೇಸ್​!

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆಗಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಸಂಚಾರ ನಿಯಮಗಳ ಪಾಲನೆಗೆ ವಾಹನ ಸವಾರರು ಅಸಡ್ಡೆ ತೋರುತ್ತಿದ್ದಾರೆ. ಟ್ರಾಫಿಕ್ ಪೊಲೀಸರು ಸಂಚಾರಿ ನಿಯಮಗಳ ಬಗ್ಗೆ ಎಷ್ಟೇ ಜನ ಜಾಗೃತಿ ಮೂಡಿಸಿದ್ರು ಅಷ್ಟೇ. ಇನ್ನು ಸಿಲಿಕಾನ್ ಸಿಟಿಯ ವಿದ್ಯಾವಂತರೂ ಸಹ ಸಂಚಾರ ನಿಯಮಗಳ ಪಾಲನೆಗೆ ನಿರಾಸಕ್ತಿ ತೋರಿಸುತ್ತಿದೆ. ಈ ವರ್ಷ ಕೇವಲ ಎಂಟೇ ತಿಂಗಳಲ್ಲಿ ದಾಖಲಾದ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳೇ ಇದಕ್ಕೆ ಸಾಕ್ಷಿಯಾಗಿದೆ.

ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಪಾಲನೆಗೆ ವಾಹನ ಸವಾರರು ಅಸಡ್ಡೆ: ಎಂಟೇ ತಿಂಗಳಲ್ಲಿ 24.54 ಲಕ್ಷ ಕೇಸ್​!
ಪ್ರಾತಿನಿಧಿಕ ಚಿತ್ರ
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on: Oct 07, 2026 | 10:16 PM

Share

ಬೆಂಗಳೂರು, (ಅಕ್ಟೋಬರ್ 07): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನ ತಾಳಲಾರದೇ ನರಳಾಡುವವರು ಲಕ್ಷಾಂತರ ಮಂದಿ, ಆದರೆ ಸಂಚಾರ ನಿಯಮಗಳನ್ನ ಪಾಲಿಸೋಕೆ ನಿರಾಸಕ್ತಿ. ಹೌದು… ಸಂಚಾರ ಪೊಲೀಸರು ನೀಡಿರುವ ದಾಖಲೆಯಿಂದ ಇದು ತಿಳಿದುಬರುತ್ತಿದೆ. ಟ್ರಾಫಿಕ್ ಪೊಲೀಸರ ನಿರಂತರ ಜಾಗೃತಿಯೂ ಹೊರತಾಗಿಯೂ ಸಂಚಾರ ನಿಯಮಗಳನ್ನ ಪಾಲನೆ ಮಾಡುವತ್ತ ವಾಹನ ಸವಾರರು ಮನಸ್ಸು ಮಾಡುತ್ತಿಲ್ಲ. 2026 ರ ಆಗಸ್ಟ್ ವರೆಗೆ ಅಂದರೆ ಕೇವಲ ಎಂಟೇ ತಿಂಗಳಲ್ಲಿ ಬರೋಬ್ಬರಿ 24.54 ಲಕ್ಷ ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಬೇಕಾಬಿಟ್ಟಿ ಪಾರ್ಕಿಂಗ್, ಸಿಗ್ನಲ್ ಜಂಪ್, ಒನ್‌ ವೇ ಹಾಗೂ ನೋ ಎಂಟ್ರಿ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಳವಾಗಿವೆ.

ಸಂಚಾರ ನಿಯಮ ಉಲ್ಲಂಘನೆ ವರ್ಷದಿಂದ ವರ್ಷಕ್ಕೆ ಹೆಚ್ಚಳ

2025ರಲ್ಲಿ 21.08 ಲಕ್ಷ ಪ್ರಕರಣಗಳು ದಾಖಲಾಗಿದ್ದು, ಈ ಅಂದರೆ 2026ರಲ್ಲಿ ಕೇವಲ ಎಂಟೇ ತಿಂಗಳಿಗೆ ಆ ದಾಖಲೆ ಉಡೀಸ್ ಮಾಡಿದ್ದಾರೆ ವಾಹನ ಸವಾರರು. ಅಪಾಯಕಾರಿ ವಾಹನ ಚಾಲನೆ, ಸಿಗ್ನಲ್ ಜಂಪ್, ನೋ ಪಾರ್ಕಿಂಗ್, ನೋ ಎಂಟ್ರಿ, ಫುಟ್ ಪಾತ್ ಡ್ರೈವಿಂಗ್ ಇವುಗಳಲ್ಲಿ ಪ್ರಮುಖವಾಗಿದೆ. ವಾಹನಗಳ ಸಂಖ್ಯೆ ಏರಿಕೆಯೊಂದಿಗೆ ನಿಯಮ ಪಾಲನೆಗೆ ನಿರ್ಲಕ್ಷ್ಯವೂ ಹೆಚ್ಚುತ್ತಿದೆ.

ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಶುಭ ಸುದ್ದಿ: ಹೊಸದಾಗಿ 12 ನಿಲ್ದಾಣಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ

ಇನ್ನು ಸಂಚಾರ ನಿಯಮಗಳ ಉಲ್ಲಂಘನೆಯ ಅಂಕಿ ಅಂಶಗಳನ್ನ ನೋಡುವುದಾದರೆ 2024ರಲ್ಲಿ 18,63,476 ಕೇಸ್​ಗಳು ದಾಖಲಾಗಿದ್ದರೆ, 2025ರಲ್ಲಿ 21,08,932 ಕೇಸ್​ಗಳು ದಾಖಲಾಗುವ ಮೂಲಕ ಏರಿಕೆ ಕಂಡಿದೆ. ಇನ್ನು ಪ್ರಸ್ತುತ ವರ್ಷದ ಆಗಸ್ಟ್ ತಿಂಗಳಲ್ಲೇ ಬರೋಬ್ಬರಿ 24,54,286 ಕೇಸ್​ಗಳು ದಾಖಲಾಗುವ ಮೂಲಕ ಕಳೆದ ವರ್ಷದ ಎಲ್ಲಾ ದಾಖಲೆಗಳು ವರ್ಷ ಮುಗಿಯುವ ಮುನ್ನವೇ ಬ್ರೇಕ್ ಆಗಿದೆ.

ಒಟ್ಟಿನಲ್ಲಿ ಬೆಂಗಳೂರಿನಲ್ಲಿ ಮಿತಿಮೀರಿರುವ ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಪೊಲೀಸರು ಮಾತ್ರವಲ್ಲ ವಾಹನ ಸವಾರರು ಮುಂದಾಗಬೇಕಿದೆ. ಸ್ವಯಂಪ್ರೇರಿತರಾಗಿ ಸಂಚಾರ ನಿಯಮಗಳನ್ನ ಪಾಲನೆ ಮಾಡುವುದು ಎಲ್ಲರ ಜವಾಬ್ದಾರಿಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ