Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಜಯಂತಿ ಗಿಫ್ಟ್​! ಇನ್ಮುಂದೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಶೇ. 25ರಷ್ಟು ರಿಯಾಯಿತಿ!

ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಎಲ್ಲಾ ಸಮುದಾಯದ ರೋಗಿಗಳ ಬಿಲ್​​ನಲ್ಲಿ ಶೇ 25 ರಷ್ಟು ರಿಯಾಯಿತಿ ನೀಡುವುದಾಗಿ ಒಕ್ಕಲಿಗ ಸಂಘದ ಪ್ರಧಾನ ‌ಕಾರ್ಯದರ್ಶಿ ಕೋನಪ್ಪ ರೆಡ್ಡಿ ಘೋಷಣೆ  ಮಾಡಿದ್ದಾರೆ. 

ಕೆಂಪೇಗೌಡ ಜಯಂತಿ ಗಿಫ್ಟ್​!  ಇನ್ಮುಂದೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಶೇ. 25ರಷ್ಟು ರಿಯಾಯಿತಿ!
ಬೆಂಗಳೂರು ಕಿಮ್ಸ್​ ಆಸ್ಪತ್ರೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Jun 27, 2022 | 6:24 PM

ಬೆಂಗಳೂರು: ನಾಡಪ್ರಭು ಕೆಂಪೇಗೌಡ (Kempe gouda) ಜಯಂತಿ ಹಿನ್ನೆಲೆ ಬೆಂಗಳೂರಿನ (Bengaluru)  ಕಿಮ್ಸ್ (Kims) ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆದ ಎಲ್ಲಾ ಸಮುದಾಯದ ರೋಗಿಗಳ ಬಿಲ್​​ನಲ್ಲಿ ಶೇ 25 ರಷ್ಟು ರಿಯಾಯಿತಿ ನೀಡುವುದಾಗಿ ಒಕ್ಕಲಿಗ ಸಂಘದ ಪ್ರಧಾನ ‌ಕಾರ್ಯದರ್ಶಿ ಕೋನಪ್ಪ ರೆಡ್ಡಿ (Konappa Reddy)  ಘೋಷಣೆ  ಮಾಡಿದ್ದಾರೆ.

ನಾಡಪ್ರಭು ಕೆಂಪೇಗೌಡ 513ನೇ ಜಯಂತಿ

ರಾಜ್ಯ ಇಂದು ನಾಡಪ್ರಭು ಕೆಂಪೇಗೌಡ (KempeGowda) ರ 513ನೇ ಜಯಂತಿ ಆಚರಿಸುತ್ತಿದೆ. ಹದಿನಾರನೇ ಶತಮಾನದಲ್ಲಿ ಬೆಂಗಳೂರು ನಗರವನ್ನು ಸೃಷ್ಟಿಸಿದ ಮಹಾಪುರಷನ ಸ್ಮರನಾರ್ಥವಾಗಿ ರಾಜ್ಯ ಸರ್ಕಾರ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನ ಬೆಂಗಳೂರು ಹಬ್ಬ ಎಂದು ಘೋಷಣೆ ಕೂಡ ಮಾಡಿದೆ. ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರಾಗಿದ್ದರು. ರಾಜಧಾನಿಯಾಗಿರುವುದಲ್ಲದೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ. ನಾಡಪ್ರಭು ಕೆಂಪನಂಜೇಗೌಡ ಹಾಗೂ ಲಿಂಗಾಂಬೆ ದಂಪತಿಗಳಿಗೆ 1510ರಲ್ಲಿ ಮೊದಲನೆಯ ಕೆಂಪೇಗೌಡರು ಯಲಹಂಕದಲ್ಲಿ ಜನಿಸಿದರು. ಕುಲದೇವತೆಯಾದ ಕೆಂಪಮ್ಮ ಹಾಗೂ ಭೈರವರ ಅನುಗ್ರಹದಿಂದ ಜನಿಸಿದ ಕಾರಣ ಕೆಂಪನಂಜೇಗೌಡ ದಂಪತಿಗಳು ಮಗುವಿಗೆ ಕೆಂಪ, ಕೆಂಪಯ್ಯ, ಕೆಂಪಣ್ಣ ಎಂಬ ಹೆಸರಿನಿಂದ ಕರೆಯುತ್ತಿರುತ್ತಾರೆ. ಬಾಲಕ ಕೆಂಪಯ್ಯನನ್ನು ಪ್ರಜೆಗಳು ಗೌರವಾದರದಿಂದ, ಚಿಕ್ಕರಾಯ, ಕೆಂಪರಾಯ ಎಂದು ಸಂಭೋಧಿಸುತ್ತಿರುತ್ತಾರೆ.

ಇಂದು ಮೂವರಿಗೆ ಅಂತಾರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರದಾನ

ನಾಡಪ್ರಭು ಕೆಂಪೇಗೌಡರ ಗೌರವಾರ್ಥ ಈ ವರ್ಷದಿಂದ ಸರಕಾರವು ಕೊಡಮಾಡುವ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ (Kempe Gowda International Award) ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಮತ್ತು ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರು ಆಯ್ಕೆ ಆಗಿದ್ದು, ಇಂದು ಜೂನ್ 27ರಂದು ಸೋಮವಾರ ವಿಧಾನಸೌಧದಲ್ಲಿ ನಡೆಯಲಿರುವ ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಮೂವರಿಗೂ ತಲಾ 5 ಲಕ್ಷ ರೂಪಾಯಿ ನಗದುಸಹಿತ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

Published On - 5:58 pm, Mon, 27 June 22