2nd PUC Exam 2024: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಆಲ್​ ದಿ ಬೆಸ್ಟ್

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಲಿ ಪರೀಕ್ಷೆಗೆ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮಾರ್ಚ್ 01ರಿಂದ ಮಾರ್ಚ್ 22ರವರೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯಗೊಳ್ಳಲಿದೆ.

2nd PUC Exam 2024: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಆಲ್​ ದಿ ಬೆಸ್ಟ್
ಸಾಂದರ್ಭಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on:Mar 01, 2024 | 7:04 AM

ಬೆಂಗಳೂರು,ಮಾ.01: ರಾಜ್ಯಾದ್ಯಂತ ಇಂದಿನಿಂದ (ಮಾ.01) ದ್ವಿತೀಯ ಪಿಯುಸಿ ಪರೀಕ್ಷೆ (2nd PUC Exam) ಆರಂಭವಾಗಲಿದೆ. ಮಾರ್ಚ್ 01ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಬೆಳಗ್ಗೆ 9.30ರಿಂದ ಮಧ್ಯಾಹ್ನ 2ರವರೆಗೆ ಜೆರಾಕ್ಸ್ ಅಂಗಡಿಗಳು ಬಂದ್ ಆಗಿರಲಿವೆ.

ಈ ಬಾರಿ 6,98,624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ವಿಶೇಷ ಆಫರ್‌ ಘೋಷಿಸಿದೆ. ಪರೀಕ್ಷಾ ಕೇಂದ್ರಕ್ಕೆ ತೆರಳಲು ಹಾಗೂ ಮನೆಗೆ ಹಿಂದಿರುಗಲು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೇಟ್‌ ತೋರಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: SSLC PUC Exam 2024 Time Table: ದ್ವಿತೀಯ ಪಿಯುಸಿ, ಎಸ್ಎಸ್ಎಲ್​ಸಿ ಪರೀಕ್ಷೆ ದಿನಾಂಕ ಪ್ರಕಟ

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ

  • 01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್
  • 04-03-2024 ಸೋಮವಾರ ಗಣಿತ, ಶಿಕ್ಷಣ ಶಾಸ್ತ್ರ
  • 05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
  • 06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ
  • 07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ
  • 09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ
  • 11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ
  • 13-03-2024 ರಂದು ಇಂಗ್ಲಿಷ್ ಪರೀಕ್ಷೆ
  • 15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ
  • 16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ
  • 18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
  • 20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ
  • 22-03-2024 ರಂದು ಹಿಂದಿ ಪರೀಕ್ಷೆ

ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯಗೊಳ್ಳಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:13 am, Thu, 29 February 24

ತಾಜಾ ಸುದ್ದಿ