Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಿಎಂಟಿಸಿಯಲ್ಲೂ ಉಚಿತ ಪ್ರಯಾಣ

Second PU 2nd Supplementary Exam: ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ಆಗಸ್ಟ್ 21 ರಿಂದ ಸೆಪ್ಟೆಂಬರ್ 2 ರ ವರೆಗೆ ನಡೆಯಲಿದೆ. ಈಗಾಗಲೇ ಕೆಎಸ್​ಆರ್​ಟಿಸಿ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಪ್ರಯಾಣದ ಅವಕಾಶ ಕಲ್ಪಿಸಿದ್ದು, ಇದೀಗ ಬಿಎಂಟಿಸಿ ಕೂಡ ಉಚಿತ ಪ್ರಯಾಣಕ್ಕೆ ಅವಕಾಶ ನೀಡುತ್ತಿದೆ.

ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಿಎಂಟಿಸಿಯಲ್ಲೂ ಉಚಿತ ಪ್ರಯಾಣ
ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಲ್ಲೂ ಉಚಿತ ಪ್ರಯಾಣ (ಸಾಂದರ್ಭಿಕ ಚಿತ್ರ)
Follow us
Kiran Surya
| Updated By: Rakesh Nayak Manchi

Updated on: Aug 18, 2023 | 8:09 PM

ಬೆಂಗಳೂರು, ಆಗಸ್ಟ್ 18: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಆಗಸ್ಟ್ 21 ರಿಂದ ಸೆಪ್ಟೆಂಬರ್ 2ರ ವರೆಗೆ ನಡೆಸುವ ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಿಎಂಟಿಸಿ (BMTC) ಉಚಿತ ಪ್ರಯಾಣದ ಅವಕಾಶ ನೀಡುತ್ತಿದೆ. ಕೆಎಸ್​ಆರ್​ಟಿಸಿ (KSRTC) ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ಹೇಳಿದ ಬೆನ್ನಲ್ಲೇ ಬಿಎಂಟಿಸಿ ಈ ನಿರ್ಧಾರ ಕೈಗೊಂಡಿದೆ.

ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಸಹಕಾರಕ್ಕಾಗಿ ಉಚಿತ ಸಾರಿಗೆ ಸೇವೆ ನೀಡಲಾಗುತ್ತಿದೆ. ವಿದ್ಯಾರ್ಥಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೂ ಉಚಿತ ಸಾರಿಗೆ ಸೇವೆ ನೀಡಲಾಗುತ್ತದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನ ತೋರಿಸಿ ಬಿಎಂಟಿಸಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಇದು ಸಾಮಾನ್ಯ ಬಿಎಂಟಿಸಿ ಬಸ್​ಗಳಲ್ಲಿ ಮಾತ್ರ ಅನ್ವಯವಾಗುತ್ತದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ಬಿಎಂಟಿಸಿ ಬಸ್​ನಲ್ಲಿ ಕಂಡೆಕ್ಟರ್, ಪುರುಷ ಪ್ರಯಾಣಿಕರಿಂದ ವಿದ್ಯಾರ್ಥಿನಿಗೆ ಕಿರುಕುಳ

ಇತ್ತೀಚೆಗೆ, ಕೆಎಸ್ಆರ್​​ಟಿಸಿ ಕೂಡ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಪ್ರಕಟಣೆ ಹೊರಡಿಸಿತ್ತು. ಪರೀಕ್ಷಾ ಪ್ರವೇಶಪತ್ರ ತೋರಿಸಿ ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ನಿಗಮದ ನಗರ ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ತಿಳಿಸಿದೆ.

ಸಿಬಿಎಸ್​ಇ 12ನೇ ತರಗತಿ ಪೂರಕ ಪರೀಕ್ಷೆಯು ಜುಲೈ 27 ರಂದು ನಡೆದಿದ್ದು, ಆಗಸ್ಟ್ 01 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಗೊಂಡಿತ್ತು. 2ನೇ ಬಾರಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಉಪನ್ಯಾಸಕರ ವಿರೋಧದ ನಡುವೆಯೂ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2ನೇ ಪೂರಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿತ್ತು. 2022-23ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅರ್ಹರಾಗಿದ್ದಾರೆ.

ಮತ್ತಷ್ಟು ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?