Bengaluru News: NIA ದಾಳಿ ವೇಳೆ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ
ಪ್ರಕರಣವೊಂದರ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ನಡೆಸಿದ ದಾಳಿ ವೇಳೆ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ. ಸದ್ಯ ಸಿಕ್ಕಿಬಿದ್ದ ಬಾಂಗ್ಲಾ ವಲಸಿಗರನ್ನು ಎನ್ಐಎ ಅಧಿಕಾರಿಗಳು ಬೆಳ್ಳಂದೂರು ಪೊಲೀಸರಿಗೆ ಒಪ್ಪಿಸಿದ್ದು, ವಿಚಾರಣೆ ನಡೆದಿದೆ.
ಬೆಂಗಳೂರು, (ಆಗಸ್ಟ್ 08): ರಾಷ್ಟ್ರೀಯ ತನಿಖಾ ಸಂಸ್ಥೆ(NIA) ದಾಳಿ ವೇಳೆ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು (Bangladeshi nationals) ಪತ್ತೆಯಾಗಿದ್ದಾರೆ. ಪ್ರಕರಣವೊಂದರ ಸಂಬಂಧ ಬೆಂಗಳೂರಿಗೆ ಭೇಟಿ ನೀಡಿದ್ದ ಎನ್ಐಎ, ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ಮಾಡಿದೆ. ಈ ವೇಳೆ ಬಾಂಗ್ಲಾದ ಮೂವರು ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು ಮಾಹಿತಿ ಪತ್ತೆಯಾಗಿದೆ. ಅಕ್ರಮ ಬಾಂಗ್ಲಾ ವಲಸಿಗರಾದ ಖಲೀಲ್ ಚಪರಾಸಿ, ಅಬ್ದುಲ್ ಖಾದಿರ್, ಮೊಹಮ್ಮದ್ ಜಾಹಿದ್ ಎನ್ನುವವರನ್ನು ಎನ್ಐಎ ಅಧಿಕಾರಿಗಳು ಹಿಡಿದು ಬೆಳ್ಳಂದೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ಈ ಸಂಬಂಧ ಬೆಳ್ಳಂದೂರು ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ವಿಚಾರಣೆಗೊಳಪಸಿಡಿದ್ದಾರೆ.
ಕರ್ನಾಟಕದಲ್ಲಿ ಸುಮಾರು 3 ಲಕ್ಷ ಬಾಂಗ್ಲಾ ವಲಸಿಗರು ಅಕ್ರಮವಾಗಿ ಇರುವುದು ಪತ್ತೆಯಾಗಿದ್ದು, ಬೆಂಗಳೂರು ನಗರ, ಹೊರವಲಯದಲ್ಲೇ ಸುಮಾರು 2 ಲಕ್ಷ ವಲಸಿಗರು ಇದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಇತರೆ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರು ಬೇರೆ ಬೇರೆ ರಾಜ್ಯಗಳ ವಿಳಾಸದಲ್ಲಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿಕೊಂಡು ನೆಲೆಯೂರಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 1:07 pm, Tue, 8 August 23