ಬೆಂಗಳೂರು, (ಆಗಸ್ಟ್ 08): ರಾಷ್ಟ್ರೀಯ ತನಿಖಾ ಸಂಸ್ಥೆ(NIA) ದಾಳಿ ವೇಳೆ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು (Bangladeshi nationals) ಪತ್ತೆಯಾಗಿದ್ದಾರೆ. ಪ್ರಕರಣವೊಂದರ ಸಂಬಂಧ ಬೆಂಗಳೂರಿಗೆ ಭೇಟಿ ನೀಡಿದ್ದ ಎನ್ಐಎ, ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ಮಾಡಿದೆ. ಈ ವೇಳೆ ಬಾಂಗ್ಲಾದ ಮೂವರು ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು ಮಾಹಿತಿ ಪತ್ತೆಯಾಗಿದೆ. ಅಕ್ರಮ ಬಾಂಗ್ಲಾ ವಲಸಿಗರಾದ ಖಲೀಲ್ ಚಪರಾಸಿ, ಅಬ್ದುಲ್ ಖಾದಿರ್, ಮೊಹಮ್ಮದ್ ಜಾಹಿದ್ ಎನ್ನುವವರನ್ನು ಎನ್ಐಎ ಅಧಿಕಾರಿಗಳು ಹಿಡಿದು ಬೆಳ್ಳಂದೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ಈ ಸಂಬಂಧ ಬೆಳ್ಳಂದೂರು ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ವಿಚಾರಣೆಗೊಳಪಸಿಡಿದ್ದಾರೆ.
ಕರ್ನಾಟಕದಲ್ಲಿ ಸುಮಾರು 3 ಲಕ್ಷ ಬಾಂಗ್ಲಾ ವಲಸಿಗರು ಅಕ್ರಮವಾಗಿ ಇರುವುದು ಪತ್ತೆಯಾಗಿದ್ದು, ಬೆಂಗಳೂರು ನಗರ, ಹೊರವಲಯದಲ್ಲೇ ಸುಮಾರು 2 ಲಕ್ಷ ವಲಸಿಗರು ಇದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಇತರೆ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರು ಬೇರೆ ಬೇರೆ ರಾಜ್ಯಗಳ ವಿಳಾಸದಲ್ಲಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿಕೊಂಡು ನೆಲೆಯೂರಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 1:07 pm, Tue, 8 August 23