ಜಾರ್ಖಂಡ್‌ನಿಂದ ಗಾಂಜಾ ತಂದು ಬೆಂಗಳೂರಲ್ಲಿ ಮಾರಾಟ: 3 ಅಂತಾರಾಜ್ಯ ಡ್ರಗ್ಸ್‌ ಪೆಡ್ಲರ್‌ಗಳ ಬಂಧನ

ಜಾರ್ಖಂಡ್‌ನಿಂದ ಗಾಂಜಾ ತಂದು ಬೆಂಗಳೂರಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಅಂತಾರಾಜ್ಯ ಡ್ರಗ್ಸ್‌ ಪೆಡ್ಲರ್‌ಗಳನ್ನು ಪುಲಿಕೇಶಿನಗರ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಜಾರ್ಖಂಡ್‌ನಿಂದ ಗಾಂಜಾ ತಂದು ಬೆಂಗಳೂರಲ್ಲಿ ಮಾರಾಟ: 3 ಅಂತಾರಾಜ್ಯ ಡ್ರಗ್ಸ್‌ ಪೆಡ್ಲರ್‌ಗಳ ಬಂಧನ
ಬಂಧಿತ ಡ್ರಗ್ಸ್‌ ಪೆಡ್ಲರ್​​​ಗಳು

Updated on: Jun 05, 2023 | 4:54 PM

ಬೆಂಗಳೂರು: ಮೂವರು ಅಂತಾರಾಜ್ಯ ಡ್ರಗ್ಸ್‌ ಪೆಡ್ಲರ್‌ (drug peddlers) ಗಳನ್ನು ಪುಲಿಕೇಶಿನಗರ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಪ್ರೇಮಾ, ಸುನೀತಾ, ಮುತ್ಯಾಲಮ್ಮ ಸೆರೆ ಆದವರು. ಜಾರ್ಖಂಡ್‌ನಿಂದ ಗಾಂಜಾ ತಂದು ಬೆಂಗಳೂರಲ್ಲಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಜಾರ್ಖಂಡ್‌ನ ಗುಡ್ಡಗಾಡು ಪ್ರದೇಶದಲ್ಲಿ ಗಾಂಜಾ ಬೆಳೆಯಲಾಗುತ್ತಿತ್ತು. ಸಣ್ಣಸಣ್ಣ ಪ್ಯಾಕೆಟ್‌ ಮಾಡಿ ಕಾಲೇಜು, ಅಂಗಡಿಗಳ ಬಳಿ ಮಾರುತ್ತಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಗಳನ್ನು ಅರೆಸ್ಟ್​ ಮಾಡಿದ್ದಾರೆ.

38 ಡ್ರಗ್​​ ಪೆಡ್ಲರ್​​ಗಳ ಬಂಧಿನ

ಇತ್ತೀಚೆಗೆ ನಗರದ 8 ವಿಭಾಗಗಳಲ್ಲಿ ಕಳೆದ ಕೆಲ ದಿನಗಳಲ್ಲಿ 38 ಡ್ರಗ್​​ ಪೆಡ್ಲರ್​​ಗಳನ್ನು ಪೊಲೀಸರು ಬಂಧಿಸಿದ್ದಾರೆ. 55 ಕೆಜಿ ಗಾಂಜಾ, 215 ಗ್ರಾಂ ಗಾಂಜಾ ಎಣ್ಣೆ, 768 ಗ್ರಾಂ ಅಫೀಮು, 15 ಗ್ರಾಂ ಸಿಂಥೆಟಿಕ್ ಡ್ರಗ್ಸ್​ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಡ್ರಗ್ಸ್​ ಕಂಟ್ರೋಲ್​ಗೆ ಬೆಂಗಳೂರು ಪೊಲೀಸರ ಪ್ಲಾನ್​: ಶಾಲಾ-ಕಾಲೇಜುಗಳ ಪಿಟಿ ಮಾಸ್ಟರ್, ಹೆಡ್​ಮಾಸ್ಟರ್​ ನೋಡಲ್ ಆಫೀಸರ್​​ ಆಗಿ ನೇಮಕ

ಡ್ರಗ್ಸ್​ ವ್ಯಸನಿಗಳು ಸೇರಿದಂತೆ 347 ಜನರ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ರಾಜ್ಯ ಇತ್ತೀಚೆಗೆ ಡ್ರಗ್ಸ್​ , ಗಾಂಜಾ ಜಾಲಗಳು ಪತ್ತೆಯಾಗುತ್ತಿದ್ದು, ಈ ಹಿನ್ನಲೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ.

ಕಾಲೇಜು, ಪಿಜಿಗಳ ಬಳಿ ಡ್ರಗ್ ಮಾರಾಟ

ಕಾಲೇಜು, ಪಿಜಿಗಳ ಬಳಿ ಡ್ರಗ್ ಮಾರಾಟ ಹೆಚ್ಚಾಗುತ್ತಿದೆ. ಹಾಗಾಗಿ ಇತ್ತೀಚೆಗೆ ಬೆಂಗಳೂರು ಪೊಲೀಸರು ಫಯಾಜ್ ಪಾಷಾ ಅಲಿಯಾಸ್ ಪಿಲ್ಲು ಎಂಬ ಡ್ರಗ್ ಪೆಡ್ಲರ್​ನನ್ನು ಬಂಧಿಸಿದ್ದರು. ಗುಬ್ಬಲಾಳ ಬಳಿಯ ಖಾಲಿ ಜಾಗವೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ತಲಘಟ್ಟಪುರ ಠಾಣಾ ಪೊಲೀಸರು, ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದರು.

ಇದನ್ನೂ ಓದಿ: Mandya News: ಟಾರ್ಗೆಟ್ ಮಾಡಿದ್ದು ತಮ್ಮನನ್ನ, ಹಂತಕರ ಕೈಯಲ್ಲಿ ತಗ್ಲಾಕೊಂಡು ದುರಂತ ಅಂತ್ಯ ಕಂಡಿದ್ದು ಅಣ್ಣ

ಆರೋಪಿ ಪಿಲ್ಲುನಿಂದ 10.50 ಲಕ್ಷ ಮೌಲ್ಯದ 15 ಕೆಜಿ ಗಾಂಜಾ, ನಗದು ಮತ್ತು ಬೈಕ್ ಜಪ್ತಿ ಮಾಡಿದ್ದರು. ಆರೋಪಿ ವಿರುದ್ಧ ಬನಶಂಕರಿ, ಜಯನಗರ, ಕೋರಮಂಗಲ, ಕೆ.ಎಸ್.ಲೇಔಟ್ ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ​​ ದಾಖಲಾಗಿದ್ದವು. ಸದ್ಯ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ತನಿಖೆ ಮಾಡಿತ್ತಿದ್ದಾರೆ.

200ಕ್ಕೂ ಹೆಚ್ಚು ಜನ ವಶಕ್ಕೆ

ನಗರ ಪೊಲೀಸರು ಡ್ರಗ್ಸ್​ ದಂಧೆ ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದು, ಕಳೆದ 2-3 ದಿನಗಳಿಂದ ನಗರದ ಶಾಲಾ-ಕಾಲೇಜು, ಪಿಜಿ ಸುತ್ತಮುತ್ತ ಪ್ರದೇಶಗಳಲ್ಲಿ ದಾಳಿ ಮಾಡಲಾಗಿದೆ. ಜೂ.02 ರಂದು ಶಾಲಾ-ಕಾಲೇಜು ಆರಂಭವಾದ ಹಿನ್ನೆಲೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ್ದರು. ಬೆಂಗಳೂರು ನಗರದ ಎಲ್ಲಾ ವಿಭಾಗದ ಪೊಲೀಸರು ಏಕಕಾಲಕ್ಕೆ ನಗರದ 250ಕ್ಕೂ ಹೆಚ್ಚು ಪ್ರದೇಶಗಳಲ್ಲಿ ದಾಳಿ ನಡೆಸಿ ಗಾಂಜಾ, ಎಂಡಿಎಂಎ ಸೇರಿದಂತೆ ಹಲವಾರು ಮಾದರಿಯ ಡ್ರಗ್ಸ್​​ಗಳನ್ನು ಜಪ್ತಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us