AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಫಲಕ ಧ್ವಂಸ ಪ್ರಕರಣ: ಕರ್ನಾಟಕ ರಕ್ಷಣಾ ವೇದಿಕೆ ವಿರುದ್ದ ಮತ್ತೆ 3 ಕೇಸ್ ಬುಕ್

ಎಲ್ಲಾ ಅಂಗಡಿಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವಂತೆ ಕರ್ನಾಟಕ ವೇದಿಕೆ ಬೃಹತ್ ರ್ಯಾಲಿ ನಡೆಸಿದ್ದು, ಈ ವೇಳೆ ಬೇರೆ ಬೇರೆ ಭಾಷೆಗಳಲ್ಲಿದ್ದ ಬೋರ್ಡ್​ಗಳನ್ನು ಧ್ವಂಸ ಮಾಡಲಾಗಿದೆ. ಈ ಸಂಬಂಧ ಹಲವುರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಮತ್ತೆ ಕರವೇ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ.

ನಾಮಫಲಕ ಧ್ವಂಸ ಪ್ರಕರಣ: ಕರ್ನಾಟಕ ರಕ್ಷಣಾ ವೇದಿಕೆ ವಿರುದ್ದ ಮತ್ತೆ 3 ಕೇಸ್ ಬುಕ್
ರಕ್ಷಣಾ ವೇದಿಕೆ ಪ್ರತಿಭಟನೆ
ನವೀನ್ ಕುಮಾರ್ ಟಿ
| Edited By: |

Updated on:Dec 29, 2023 | 4:51 PM

Share

ಬೆಂಗಳೂರು, (ಡಿಸೆಂಬರ್ 29): ನಾಮಫಲಕ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆ ( Karnataka Rakshana Vedike ) ವಿರುದ್ದ ಮತ್ತೆ ಮೂರು ಪ್ರಕರಣಗಳು ದಾಖಲಾಗಿವೆ. ಅಂಗಡಿ ಮುಂಗಟ್ಟುಗಳ ಮುಂದಿನ ಬೋರ್ಡ್ ಹೊಡೆದಿದಕ್ಕೆ. ಹೋಟೆಲ್ ಮತ್ತು ಶೋ ರೂಂ ಮಾಲೀಕರು ನೀಡಿದ ದೂರಿನ ಮೇರೆಗೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಕಲಂ 143,147,120 (B)283,308,353,333 ಅಡಿಯಲ್ಲಿ ಪ್ರಕರಣ ದಾಖಲಾಗಿವೆ.

ಸಾದಹಳ್ಳಿಯ ಬ್ಲೂಂ ಹೋಟೆಲ್ ಸೇರಿದಂತೆ ಹಲವರು ದೂರು ನೀಡಿದ್ದು, ಈ ದೂರಿನ ಮೇರೆಗೆ ವಿಡಿಯೋ ದೃಶ್ಯಾವಳಿ ಆಧರಿಸಿ ಚಿಕ್ಕಜಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿಡಿಯೋದಲ್ಲಿರುವವರ ಗುರುತು ಪತ್ತೆಗೂ ಮುಂದಾಗಿದ್ದಾರೆ.

ಇದನ್ನೂ ಓದಿ: ಕನ್ನಡ ಹೋರಾಟಗಾರರ ಖಂಡನಾ ಸಭೆಯಲ್ಲಿ ಪ್ರಮುಖ 2 ನಿರ್ಣಯ: ಬೆಂಗಳೂರು ಬಂದ್​ ಆಗುತ್ತಾ?

ಮೊನ್ನೇ ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ನಾಮಫಲಕ ರ್ಯಾಲಿ ನಡೆಸಿದ್ದು, ಅಂಗಡಿ ಮುಂಗಟ್ಟುಗಳು ನಾಮಫಲಕಗಳು ಶೇ 60ರಷ್ಟು ಕನ್ನಡದಲ್ಲಿ ಇರಬೇಕೆಂದು ಆಗ್ರಹಿಸಿತ್ತು. ಅಲ್ಲದೇ ರ್ಯಾಲಿ ವೇಳೆ ಬೇರೆ ಬೇರೆ ಭಾಷೆಗಳಲ್ಲಿದ್ದ ಅಂಗಡಿಗಳ ಬೋರ್ಡ್​ಗಳನ್ನು ಕಿತ್ತೆಸೆಯಲಾಗಿತ್ತು. ಈ ಸಂಬಂಧ ಪೊಲೀಸರು ನಾರಾಯಣಗೌಡ ಸೇರಿದಂತೆ ಹಲವು ಕರವೇ ಕಾರ್ಯಕರ್ತರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದು, ಇದೀಗ ಕೆಲವರು ಜಾಮೀನಿನ ಮೇಲೆ ಆಚೆ ಬಂದಿದ್ದಾರೆ.

ಇನ್ನು ನಾರಾಯಣಗೌಡ ಸೇರಿದಂತೆ ಕರವೇ ಕಾರ್ಯಕರ್ತರನ್ನು ಬಂಧಿಸಿದ್ದಕ್ಕೆ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದ ಹಲವೆಡೆ ಪ್ರತಿಭಟನೆ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿವೆ. ಇನ್ನು ಇಂದು ಖಂಡನಾ ಸಭೆ ನಡೆದಿದ್ದು, ಕೆಲ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಕೂಡಲೇ ಬಂಧಿತರನ್ನು ಬಿಡುಗಡೆ ಮಾಡದಿದ್ದರೆ ಬೆಂಗಳೂರು ಬಂದ್​ ಮಾಡುವ ಬಗ್ಗೆ ಕನ್ನಡಪರ ಸಂಘಟನೆಗಳು ಚರ್ಚೆ ನಡೆಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:48 pm, Fri, 29 December 23