AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡ ಕಾಮಗಾರಿ ವೇಳೆ ದುರಂತ: ಮೂವರು ಕಾರ್ಮಿಕರು ದಾರುಣ ಸಾವು, ನಾಲ್ವರ ಸ್ಥಿತಿ ಗಂಭೀರ

ಹೊಸೂರಿನ ಸಿಪ್‌ಕಾಟ್ ಬಳಿಯ ಖಾಸಗಿ ಕಾರ್ಖಾನೆ ಕಟ್ಟಡ ಕಾಮಗಾರಿ ವೇಳೆ ಸೆಂಟ್ರಿಂಗ್ ಕುಸಿದು ಮೂವರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಕಾಮಗಾರಿ ವೇಳೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯವಹಿಸಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಅವಶೇಷಗಳ ಅಡಿ ಸಿಲುಕಿದ್ದ ಕಾರ್ಮಿಕರ ಮೃತದೇಹಗಳನ್ನು ಕ್ರೇನ್​​ ಬಳಸಿ ಹೊರಕ್ಕೆ ತೆಗೆಯಲಾಗಿದೆ.

ಕಟ್ಟಡ ಕಾಮಗಾರಿ ವೇಳೆ ದುರಂತ: ಮೂವರು ಕಾರ್ಮಿಕರು ದಾರುಣ ಸಾವು, ನಾಲ್ವರ ಸ್ಥಿತಿ ಗಂಭೀರ
ಕಟ್ಟಡ ಕಾಮಗಾರಿ ವೇಳೆ ದುರಂತ
ರಾಮು, ಆನೇಕಲ್​
| Edited By: |

Updated on:Nov 06, 2026 | 1:01 PM

Share

ಆನೇಕಲ್​​, ನವೆಂಬರ್​​ 06: ಕಾರ್ಖಾನೆಯ ಕಟ್ಟಡ ಕಾಮಗಾರಿ ವೇಳೆ ನಡೆದ ದುರಂತದಲ್ಲಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು-ತಮಿಳುನಾಡಿನ ಗಡಿಭಾಗವಾದ ಹೊಸೂರಿನ ಸಿಪ್​​ಕಾಟ್​​ ಬಳಿ ನಡೆದಿದೆ. ಅವಘಡದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಮರೇಶನ್(39), ಮೈಕೆಲ್(26) ಮತ್ತು ಶ್ರೀನಿವಾಸನ್(26) ಮೃತ ದುರ್ದೈವಿಗಳಾಗಿದ್ದಾರೆ.

ನಿರ್ಲಕ್ಷ್ಯವಹಿಸಿದ್ದೇ ದುರಂತಕ್ಕೆ ಕಾರಣ!

ಬಾಲಾಜಿ ಗೇರ್ಸ್ ಹೆಸರಿನ ಖಾಸಗಿ ಕಾರ್ಖಾನೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಕಾರ್ಮಿಕರು ಮೋಲ್ಡ್​​ಗೆ ಕಾಂಕ್ರೀಟ್​​ ಹಾಕುತ್ತಿದ್ದ ವೇಳೆ ಸೆಂಡ್ರಿಂಗ್​​ಗೆ ಹಾಕಿದ್ದ ಮರದ ದಿಮ್ಮಿಗಳು ಏಕಾಏಕಿ ಕುಸಿದಿವೆ. ಪರಿಣಾಮ ಕಟ್ಟಡದ ಅವಶೇಷಗಳಡಿ ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ದಿನೇಶ್, ಎಸ್ಪಿ ಅನಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ವೇಳೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯವಹಿಸಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಅವಶೇಷಗಳ ಅಡಿ ಸಿಲುಕಿದ್ದ ಕಾರ್ಮಿಕರ ಮೃತದೇಹಗಳನ್ನು ಕ್ರೇನ್​​ ಬಳಸಿ ಹೊರಕ್ಕೆ ತೆಗೆಯಲಾಗಿದೆ.

ಇದನ್ನೂ ಓದಿ: ಸಹಾಯಕ್ಕೆ ಧಾವಿಸಿದವರೇ ಮಸಣ ಸೇರಿದ್ರು, ಟ್ರಕ್ ಡಿಕ್ಕಿಗೆ ಮೂವರು ಮಕ್ಕಳು ಸೇರಿ 7 ಮಂದಿ ಸಾವು

ಕಾಂಕ್ರೀಟ್‌ನ ಭಾರವನ್ನು ತಡೆದುಕೊಳ್ಳಲು ಅಗತ್ಯವಾದ ಕಂಬಗಳು ಅಥವಾ ಸೂಕ್ತ ಯೋಜನೆ ಇರಲಿಲ್ಲ ಎಂದು ಪ್ರಾಥಮಿಕ ಪರಿಶೀಲನೆಯಲ್ಲಿ ತಿಳಿದುಬಂದಿದೆ. ಹೀಗಾಗಿ, ಕಟ್ಟಡದ ವಿನ್ಯಾಸ ರೂಪಿಸಿದ ಎಂಜಿನಿಯರ್ ಸೇರಿದಂತೆ ಕಾಮಗಾರಿಯಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹೊಸೂರು ಉಪ ಪೊಲೀಸ್ ವರಿಷ್ಠಾಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕುಮಾರ್, ನಿರ್ಮಾಣ ಕಾಮಗಾರಿಯಲ್ಲಿ ಒಟ್ಟು 17 ಮಂದಿ ತೊಡಗಿಸಿಕೊಂಡಿದ್ದರು. ಮುಖ್ಯ ಪ್ರವೇಶ ದ್ವಾರ ಕುಸಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಮೃತರು ಹೊಸೂರು, ತಿರುಪತ್ತೂರು ಮತ್ತು ತಿರುವಣ್ಣಾಮಲೈ ಮೂಲದವರು ಎಂದು ತಿಳಿದುಬಂದಿದೆ ಎಂದು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:45 pm, Fri, 6 November 26

Follow Us
ರಾಮು, ಆನೇಕಲ್​
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More