AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. 25 ವರ್ಷದ ಆಸುಪಾಸಿನ ಮೂವರು ಯುವಕರ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಅಥವಾ ಹಳಿ ದಾಟುವಾಗ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರಾ ಎನ್ನುವುದನ್ನು ಪೊಲೀಸರು ತನಿಖೆ ನಡೆಸಿದ್ದಾರೆ.

ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ
TV9 Web
| Edited By: |

Updated on:Apr 25, 2024 | 3:45 PM

Share

ಬೆಂಗಳೂರು, (ಏಪ್ರಿಲ್ 25): ರೈಲಿಗೆ ( train) ಸಿಲುಕಿ ಮೂವರು ಯುವಕರು ಮೃತಪಟ್ಟಿರುವ ಘಟನೆ ಬೆಂಗಳೂರಿನ(Bengaluru)  ಬೈಯಪ್ಪನಹಳ್ಳಿ ರೈಲು ನಿಲ್ದಾಣದ (byappanahalli railway station) ಬಳಿ ನಡೆದಿದೆ. ಶಶಿಕುಮಾರ್, ಲೋಕಿ ಸೇರಿ ಮೂವರು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮೃತ ದುರ್ವೈವಿಗಳು ಅಂಧ್ರಪ್ರದೇಶದ ಚಿತ್ತೂರು ಮೂಲದವರು ಎನ್ನಲಾಗಿದೆ. ಮೂವರು 25 ರ ವಯಸ್ಸಿನ ಯುವಕರಾಗಿದ್ದು, ಇಂದು (ಏಪ್ರಿಲ್ 25) ಸಾರ್ವಜನಿಕರು ನೋಡಿ ಕೂಡಲೇ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Davanagere: ತಾಯಿ ಸಾವಿಗೆ ಕಾರಣವಾದ ತಂದೆಯನ್ನೇ ಹತ್ಯೆಗೈದ ಮಗ

25 ವರ್ಷದ ಆಸುಪಾಸಿನಮೂವರು ಯುವಕರ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಅಥವಾ ಹಳಿ ದಾಟುವಾಗ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರಾ ಎನ್ನುವುದನ್ನು ಪೊಲೀಸರು ತನಿಖೆ ನಡೆಸಿದ್ದಾರೆ.

ಇನ್ನು ಈ ಬಗ್ಗೆ ರೈಲ್ವೆ ಎಎಸ್​ಪಿ ಡಾ. ಸೌಮ್ಯಲತಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು,   ನಿನ್ನೆ ರಾತ್ರಿ ಯಶವಂತಪುರ ಕಣ್ಣೂರು ಎಕ್ಸ್ಪ್ರೆಸ್ ರೈಲು ಪಾಸ್ ಆಗುವ ವೇಳೆ ಅಡ್ಡಬಂದಿದ್ದಾರೆ. ಮಾರತ್ತಹಳ್ಳಿ ಬ್ರಿಡ್ಜ್ ಪಕ್ಕದಲ್ಲಿ ಈ ಘಟನೆ ನಡೆದಿದೆ. ಶಶಿಕುಮಾರ್ ಲೋಕೇಶ್ ಸೇರಿ ಮೂವರು ಮೃತರಾಗಿದ್ದಾರೆ. ಮೃತ ಮೂವರು ಆಂಧ್ರಪ್ರದೇಶದ ಚಿತ್ತೂರಿನವರು. ಲೋಕೇಶ್ ಕ್ಯಾಬ್ ಡ್ರೈವರ್. ಶಶಿಕುಮಾರ್ ಪಿಜಿಯಲ್ಲಿ ವಾಸವಾಗಿದ್ದು, ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿದ್ದರು ಎಂದು ಮಾಹಿತಿ ನೀಡಿದರು.

ಒಂಟಿ ಮಹಿಳೆಯ ಸರ ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿ

ಬೆಂಗಳೂರು: ವಾಕಿಂಗ್ ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬೆಂಗಳೂರಿನ ವಿಜಯ ನಗರದ 7th c ಮುಖ್ಯರಸ್ತೆ ಹಂಪಿನಗರದಲ್ಲಿ ಈ ಘಟನೆ ನಡೆದಿದೆ. ಮಹಿಳೆ ವಾಕಿಂಗ್ ಹೋಗುವ ಸಮಯದಲ್ಲಿ ಇಬ್ಬರು ಬೈಕ್​ನಲ್ಲಿ ಬಂದ ಖದೀಮರು ಆಕೆಯ ಕುತ್ತಿಗೆಯಲ್ಲಿದ್ದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸರಗಳ್ಳತನದ ಕೃತ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದ್ದು, ಈ ಬಗ್ಗೆ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:22 pm, Thu, 25 April 24

Follow Us
TV9 Web
TV9 Web

TV9 Kannada

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ